ಕೊಪ್ಪಳ: ಕೊಲೆ ಆರೋಪಿ ಮದುವೆಯಲ್ಲಿ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಭಾಗಿ

Kannadaprabha News   | Asianet News
Published : Jul 23, 2021, 09:54 AM IST
ಕೊಪ್ಪಳ: ಕೊಲೆ ಆರೋಪಿ ಮದುವೆಯಲ್ಲಿ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಭಾಗಿ

ಸಾರಾಂಶ

* ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ * ಆರೋಪಿ ಮಹಾಂತೇಶ್‌ ನಾಯಕ್‌ ಮದುವೆಯಲ್ಲಿ ಭಾಗಿಯಾದ ಪೊಲೀಸ್‌ ಅಧಿಕಾರಿ * ಈ ಹಿಂದೆ ಮದುವೆಯಲ್ಲಿ ಭಾಗಿಯಾಗಿದ್ದ ಪೊಲೀಸ್‌ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ 

ಕೊಪ್ಪಳ(ಜು.23): ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿ ಮದುವೆಯಲ್ಲಿ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಭಾಗಿಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಬಳ್ಳಾರಿ ಜಿಲ್ಲೆ ಕಂಪ್ಲಿ ಸಿಪಿಐ ಸುರೇಶ್‌ ತಳವಾರ ಅವರು ಕೊಲೆ ಆರೋಪಿ ಮಹಾಂತೇಶ್‌ ನಾಯಕ್‌ ಮದುವೆಯಲ್ಲಿ ಭಾಗಿಯಾದ ಮತ್ತೊಬ್ಬ ಪೊಲೀಸ್‌ ಅಧಿಕಾರಿಯಾಗಿದ್ದಾರೆ. ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಆರೋಪಿ ಮಹಾಂತೇಶ್‌ ನಾಯಕ್‌ನ ವಿವಾಹ ಜು. 18ರಂದು ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನೆರವೇರಿತ್ತು.

ಕೊಲೆ ಆರೋಪಿ ಮದುವೆಯಲ್ಲಿ ಭಾಗಿ: ಪೊಲೀಸ್‌ ಅಧಿಕಾರಿಗಳಿಗೆ ಕಡ್ಡಾಯ ರಜೆ

ವಿವಾಹದಲ್ಲಿ ಭಾಗಿಯಾಗಿದ್ದ ಕೊಪ್ಪಳ ಜಿಲ್ಲೆ ಗಂಗಾವತಿ ಡಿವೈಎಸ್ಪಿ ರುದ್ರೇಶ್‌ ಉಜ್ಜನಕೊಪ್ಪ, ಗಂಗಾವತಿ ಸಿಪಿಐ ಉದಯರವಿ, ಕನಕಗಿರಿ ಪಿಎಸ್‌ಐ ತಾರಾಬಾಯಿಗೆ ಕಡ್ಡಾಯ ರಜೆ ಶಿಕ್ಷೆ ಎಸ್ಪಿ ಆದೇಶಿಸಿದ್ದಾರೆ.

ಈ ಹಿಂದೆ ಗಂಗಾವತಿ ಗ್ರಾಮೀಣ ಸಿಪಿಐ ಆಗಿ ಕೆಲಸ ಮಾಡಿದ್ದ ಸುರೇಶ್‌ ತಳವಾರ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿ ಮದುವೆಯಲ್ಲಿ ಭಾಗಿಯಾಗಿರುವುದು ಇಲಾಖೆ ಅಧಿಕಾರಿಗಳಿಗೆ ತೀವ್ರ ಮುಜುಗರ ತಂದಿದೆ.
 

PREV
click me!

Recommended Stories

ಶಿರೂರು ಪರ್ಯಾಯೋತ್ಸವ : ಗರಿಗೆದರಿದ ಉಡುಪಿ
ಕಾರವಾರ ಯುವತಿ ಆತ್ಮಹ*ತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರು ಮರಣೋತ್ತರ ಪರೀಕ್ಷೆಗೆ ಪೋಷಕರ ಪಟ್ಟು!