ತುಮಕೂರು: ಕುಣಿಗಲ್‌ ಶಾಸಕ ಡಾ.ರಂಗನಾಥ್‌ರಿಂದ ಮತ್ತೊಂದು ಶಸ್ತ್ರಚಿಕಿತ್ಸೆ

By Kannadaprabha News  |  First Published Oct 18, 2023, 3:00 AM IST

ಸ್ಕ್ಯಾನಿಂಗ್ ಮಾಡಿಸಿದಾಗ ಅವರಿಗೆ ಮರು ಶಸ್ತ್ರಚಿಕಿತ್ಸೆ ಮಾಡಬೇಕಾದ ಅಗತ್ಯ ಕಂಡು ಬಂತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ಸೋಮವಾರ ಅವರಿಗೆ ಮತ್ತೊಮ್ಮೆ ಶಸ್ತ್ರಚಿಕಿತ್ಸೆ ನೆರವೇರಿಸಿದ ಕುಣಿಗಲ್‌ ಶಾಸಕ ಡಾ. ರಂಗನಾಥ್


ಕುಣಿಗಲ್‌(ಅ.18):  ತಮ್ಮ ಕ್ಷೇತ್ರದ ಜನರಿಗೆ ಉಚಿತವಾಗಿ, ಖುದ್ದು ತಾವೇ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆಯುತ್ತಿರುವ ಕುಣಿಗಲ್‌ ಶಾಸಕ ಡಾ. ರಂಗನಾಥ್‌, ಈಗ ಮತ್ತೊಂದು ಶಸ್ತ್ರಚಿಕಿತ್ಸೆ ನಡೆಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವಿಪರೀತ ಕೈ (ಎಡಗೈ) ನೋವಿನಿಂದ ಬಳಲುತ್ತಿದ್ದ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕೋಟೆ ವಾರ್ಡ್ ನ ನಿವಾಸಿ ಗಂಗ ಹನುಮಯ್ಯ ಎಂಬುವರಿಗೆ ಶಾಸಕರು ಈ ಹಿಂದೆ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿದ್ದರು. ಆದರೆ, ಇತ್ತಿಚೆಗೆ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದ್ದು, ಈ ಸಂಬಂಧ ಶಾಸಕರನ್ನು ಅವರು ಭೇಟಿ ಮಾಡಿದ್ದರು.

Tap to resize

Latest Videos

undefined

ದೇವರಾಯನದುರ್ಗ: ಬಾವಲಿಗಳ ಬೇಟೆಯಾಡುವ ಚಿರತೆಯ ಅಪರೂಪದ ಫೋಟೋ ವೈರಲ್‌

ಸ್ಕ್ಯಾನಿಂಗ್ ಮಾಡಿಸಿದಾಗ ಅವರಿಗೆ ಮರು ಶಸ್ತ್ರಚಿಕಿತ್ಸೆ ಮಾಡಬೇಕಾದ ಅಗತ್ಯ ಕಂಡು ಬಂತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ಸೋಮವಾರ ಅವರಿಗೆ ಮತ್ತೊಮ್ಮೆ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ. ಈಗಾಗಲೇ ಎರಡು ಬಾರಿ ಖುದ್ದು ಶಾಸಕರೆ ತಮ್ಮ ಕ್ಷೇತ್ರದ ಬಡರೋಗಿಗಳಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿದ್ದು, ಈಗ ಮೂರನೇ ಬಾರಿಗೆ ಗಂಗ ಹನುಮಯ್ಯರಿಗೆ ಶಸ್ತ್ರಚಿಕಿತ್ಸೆ ನೆರವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

click me!