ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಹಿಂದೂಗಳ ಹತ್ಯೆ, ಶಾದಿಭಾಗ್ಯ ಯೋಜನೆ, ಟಿಪ್ಪು ಜಯಂತಿ, ಪಿಎಫ್‌ಐ ಮತ್ತು ಎಸ್‌ಡಿಪಿಐ ಮತಾಂಧರ ಮೇಲಿದ್ದ ನೂರಾರು ಕ್ರಿಮಿನಲ್ ಪ್ರಕರಣಗಳನ್ನು ರದ್ದು ಮಾಡಿದ್ದು ಹಿಂದೂ ವಿರೋಧಿ ಮಾನಸಿಕತೆಯನ್ನು ನಿರೂಪಿಸುತ್ತದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವನೂರು ಪ್ರತಾಪ್ ವಾಗ್ದಾಳಿ ನಡೆಸಿದರು.
ಮೈಸೂರು (ಕ.01): ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಹಿಂದೂಗಳ ಹತ್ಯೆ, ಶಾದಿಭಾಗ್ಯ ಯೋಜನೆ, ಟಿಪ್ಪು ಜಯಂತಿ, ಪಿಎಫ್‌ಐ ಮತ್ತು ಎಸ್‌ಡಿಪಿಐ ಮತಾಂಧರ ಮೇಲಿದ್ದ ನೂರಾರು ಕ್ರಿಮಿನಲ್ ಪ್ರಕರಣಗಳನ್ನು ರದ್ದು ಮಾಡಿದ್ದು, ಈಗ ಟಿಪ್ಪು ಪ್ರತಿಮೆ ಮಾಡುತ್ತೇವೆ ಎಂದು ಹೇಳುತ್ತಿರುವುದು ಇವರ ಮತ್ತು ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆಯನ್ನು ನಿರೂಪಿಸುತ್ತದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವನೂರು ಪ್ರತಾಪ್ ವಾಗ್ದಾಳಿ ನಡೆಸಿದರು.
ಮುಂಬರುವ ವಿಧಾನಸಭಾ (Election) ಪೂರ್ವಭಾವಿಯಾಗಿ ವರುಣ ಕ್ಷೇತ್ರದ ತಾಂಡವಪುರ ಮತ್ತು ಹಾರೋಹಳ್ಳಿ ಮೆಲ್ಲಹಳ್ಳಿ ಜಿಪಂ ವ್ಯಾಪ್ತಿಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ನಾಡು ಕಂಡ ಸ್ವಾರ್ಥ ಮತ್ತು ಅಧಿಕಾರದಾಹಿ ರಾಜಕಾರಣಿ ಎಂದರೆ ಅದು ಸಿದ್ದರಾಮಯ್ಯ. ಹಲವಾರು ಬಾರಿ ಪಕ್ಷಾಂತರ ಮಾಡಿರುವುದೇ ಅವರ ಅಧಿಕಾರದ ಆಸೆಗೆ ಸಾಕ್ಷಿ. ಸ್ವಾರ್ಥಕ್ಕಾಗಿ ಹಿರಿಯರಾದ ವಿಶ್ವನಾಥ್, ಶ್ರೀನಿವಾಸಪ್ರಸಾದ್ ಅವರಿಗೆ ಅಗೌರವ ತೋರಿ ಪಕ್ಷ ಬಿಡುವಂತೆ ಮಾಡಿದ, ಖರ್ಗೆ, ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ ಸಿದ್ದರಾಮಯ್ಯ ದಲಿತರ, ಹಿಂದುಳಿದವರ ವಿರೋಧಿಯಲ್ಲವೇ ಎಂದು ಪ್ರಶ್ನಿಸಿದರು.
undefined
ಅಧಿಕಾರವಿದ್ದಾಗ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ದ್ವೇಷದ ರಾಜಕಾರಣ ಮತ್ತು ಭ್ರಷ್ಟಾಚಾರದ ಸರ್ಕಾರವನ್ನು ನಡೆಸಿದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಆಸೆ ಪಡುತ್ತಿರುವುದು ನಾಚಿಕೆಗೇಡು ಎಂದರು.
ಯುವ ಪೀಳಿಗೆಗೆ ಮಾದರಿಯಾಗದೆ, ಕೆಟ್ಟಸಂದೇಶಗಳನ್ನು ನೀಡುತ್ತಿರುವ ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸುವ ಮೂಲಕ ಅವರಿಗೆ ರಾಜಕೀಯ ನಿವೃತ್ತಿ ನೀಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಅಭಿವೃದ್ಧಿಗೆ ಇನ್ನೊಂದು ಹೆಸರೇ ಬಿಜೆಪಿ. ರೈತಸ್ನೇಹಿ ಯೋಜನೆ ಮತ್ತು ವಾರ್ಷಿಕ 10 ಸಾವಿರ, ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ, ಪೌರಕಾರ್ಮಿಕರ ಕಾಯಂಮಾತಿ, ಪರಿಶಿಷ್ಟರಿಗೆ ಹಾಗೂ ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ, ಉಚಿತ ವಿದ್ಯುತ್ ಕೊಟ್ಟಿರುವ ಬಿಜೆಪಿ ಎಲ್ಲಾ ವರ್ಗದ ಪರ. ಮುಂಬರುವ ಚುನಾವಣೆಯಲ್ಲಿ 150ಕ್ಕೂ ಅಧಿಕ ಸ್ಥಾನ ಗಳಿಸುವ ಮೂಲಕ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು.
ಜಿಲ್ಲಾ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಮಂಡಲ ಅಧ್ಯಕ್ಷ ವಿಜಯಕುಮಾರ್, ಪ್ರವಾಸೋದ್ಯಮ ಅಧ್ಯಕ್ಷ ಸಿದ್ದಲಿಂಗಸ್ವಾಮಿ, ತೋಟದಪ್ಪ ಬಸವರಾಜು, ಜಿಪಂ ಮಾಜಿ ಸದಸ್ಯರಾದ ಸದಾನಂದ, ಗುರುಸ್ವಾಮಿ, ಉಸ್ತುವಾರಿ ಪ್ರಪುಲ್ಲ ಮಲ್ಲಾಡಿ, ರಂಗು ನಾಯಕ, ವೆಂಕಟರಮಣ ಶೆಟ್ಟಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನೇಶ್, ಸ್ವಾಮಿ, ರೇಚಣ್ಣ ಮುಳ್ಳೂರು, ಮಮತಾ ಶಿವಪ್ರಸಾದ್, ಶಿವಯ್ಯ, ಕುಪ್ಪರವಳ್ಳಿ ಶಿವಣ್ಣ, ಶರತ್, ಹೆಜ್ಜಿಗೆ ಗಿರಿಧರ್, ಚಂದ್ರು, ಕುಮಾರ್, ನಾಗರಾಜು, ಸಂದೀಪ್, ಪಿ.ಜಿ. ಹುಂಡಿ ಮಹೇಶ್, ವರಕೋಡು ಪ್ರಕಾಶ್ ನೂರಾರು ಕಾರ್ಯಕರ್ತರು ಇದ್ದರು.
ಸೀಮೆ ಎಣ್ಣೆ ನೀಡಲಾಗದಿದ್ದರೆ ತೊಲಗಿ
: ರಾಜ್ಯದಲ್ಲಿ ನಾಡದೋಣಿ ಮೂಲಕ ಮೀನು ಹಿಡಿಯುವ ಮೀನುಗಾರರಿಗೆ ಸೀಮೆ ಎಣ್ಣೆ ಪೂರೈಸಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಕಳೆದ ನಾಲ್ಕು ತಿಂಗಳಿಂದ ಸೀಮೆಎಣ್ಣೆ ಪೂರೈಸದೆ ನಿದ್ದೆ ಮಾಡುತ್ತಿದ್ದೀರಾ? ನಿಮಗೆ ಕೈಲಾಗದಿದ್ದರೆ ಅಧಿಕಾರ ಬಿಟ್ಟು ಹೋಗಿ ಎಂದು ಹರಿಹಾಯ್ದರು.
ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಸುಕುಮಾರ ಶೆಟ್ಟಿಪರವಾಗಿ ಸಂಜೀವ್ ಮಠಂದೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೀನುಗಾರಿಕೆ ಸಚಿವ ಎಸ್. ಅಂಗಾರ, ಕೇಂದ್ರದಿಂದ 18,618 ಲೀಟರ್ ಸೀಮೆಎಣ್ಣೆ ಬರಬೇಕಿತ್ತು. ಆದರೆ 3 ಸಾವಿರ ಲೀಟರ್ ಮಾತ್ರ ಬಂದಿದ್ದು, ಇದನ್ನು ಮೀನುಗಾರರಿಗೆ ವಿತರಿಸಲಾಗಿದೆ. ಹೆಚ್ಚುವರಿ ಸೀಮೆಎಣ್ಣೆಗಾಗಿ ಕೇಂದ್ರ ಸಚಿವರೊಂದಿಗೆ ಚರ್ಚಿಸಿದ್ದು, ತುರ್ತುಅಗತ್ಯಕ್ಕಾಗಿ ಕೈಗಾರಿಕಾ ಬಳಕೆಯ ಸೀಮೆಎಣ್ಣೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಎಸ್ಸಿ-ಎಸ್ಟಿ ಮೀಸಲು ಕಣ್ಣೊರೆಸೋ ತಂತ್ರವೇ?: ಸಿದ್ದರಾಮಯ್ಯ
ಇದಕ್ಕೆ ಗರಂ ಆದ ಸಿದ್ದರಾಮಯ್ಯ, ‘ಮೀನುಗಾರರಿಗೆ ಮಾಸಿಕ 300 ಲೀಟರ್ ಸೀಮೆ ಎಣ್ಣೆ ನೀಡಬೇಕು ಎಂಬ ನಿಯಮವಿದೆ. ನಮಗಿರುವ ಮಾಹಿತಿ ಪ್ರಕಾರ 10 ತಿಂಗಳಿಂದ ಸೀಮೆಎಣ್ಣೆ ಪೂರೈಸಿಲ್ಲ. ಸಚಿವರೇ ನಾಲ್ಕು ತಿಂಗಳಿಂದ ಸೀಮೆಎಣ್ಣೆ ಪೂರೈಸಿಲ್ಲ ಎಂದಿದ್ದಾರೆ. ನಾಲ್ಕು ತಿಂಗಳಿಂದ ಸರ್ಕಾರ ನಿದ್ದೆ ಮಾಡುತ್ತಿತ್ತಾ? ನಾಲ್ಕು ತಿಂಗಳಿಂದ ಸೀಮೆಎಣ್ಣೆ ನೀಡದಿದ್ದರೆ ಅವರ ಬದುಕು ಏನಾಗಬೇಕು? ಅವರು ಆತ್ಮಹತ್ಯೆ ಮಾಡಿಕೊಳ್ಳಬೇಕಾ? ನಿಮ್ಮ ಕೈಲಿ ಆಗದಿದ್ದರೆ ಅಧಿಕಾರ ಬಿಟ್ಟು ಹೋಗಿ’ ಎಂದು ತರಾಟೆಗೆ ತೆಗೆದುಕೊಂಡರು. ಪ್ರತಿಪಕ್ಷದ ಯು.ಟಿ. ಖಾದರ್, ಆರ್.ವಿ. ದೇಶಪಾಂಡೆ ಕೂಡ ದನಿಗೂಡಿಸಿದರು.