ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಪಮಾನಕರ ಭಾಷಣ: ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ಮಂಜೂರು

By Girish Goudar  |  First Published Oct 4, 2024, 7:06 PM IST

ಜನವರಿ 18 ,2024 ರಂದು ಸಿರವಾರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು.  ಭಾಷಣದಲ್ಲಿ ಕಲಬುರ್ಗಿ ಇಎಸ್‌ಐ ಆಸ್ಪತ್ರೆ ವಿಚಾರವಾಗಿ ಮಾತನಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. 


ರಾಯಚೂರು(ಅ.04):  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಪಮಾನಕರ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. 

ಚಕ್ರವರ್ತಿ ಸೂಲಿಬೆಲೆ ವಿರುದ್ಧ ರಾಯಚೂರಿನ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಚಕ್ರವರ್ತಿ ಸೂಲಿಬೆಲೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ರಾಯಚೂರಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. 

Latest Videos

undefined

ಕಾರ್ಗಿಲ್ ಗೆದ್ದಾಯ್ತು, ಇನ್ನೀಗ ಟಾರ್ಗೆಟ್ ಪಿಒಕೆ: ಚಕ್ರವರ್ತಿ ಸೂಲಿಬೆಲೆ

ಜನವರಿ 18 ,2024 ರಂದು ಸಿರವಾರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು.  ಭಾಷಣದಲ್ಲಿ ಕಲಬುರ್ಗಿ ಇಎಸ್‌ಐ ಆಸ್ಪತ್ರೆ ವಿಚಾರವಾಗಿ ಮಾತನಾಡಿ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. 

ಈ ಸಂಬಂಧ ಜನವರಿ 20ರಂದು ಸಿರವಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮೂಲ ಎಫ್‌ಐಆರ್ ನಲ್ಲಿ ಜಾತಿನಿಂದನೆ ಆರೋಪ ಮಾಡಲಾಗಿತ್ತು. ಕಲಬುರ್ಗಿ ಹೈಕೋರ್ಟ್ ಜಾತಿನಿಂದನೆ ಆರೋಪದ ಎಫ್‌ಐಆರ್ ರದ್ದುಗೊಳಿಸಿತ್ತು. ಸದ್ಯ ಚಕ್ರವರ್ತಿ ಸೂಲಿಬೆಲೆ ಅಪಮಾನಕರ ಭಾಷಣ, ದ್ವೇಷ ಭಾಷಣ ಪ್ರಕರಣ ಎದುರಿಸುತ್ತಿದ್ದಾರೆ. ಕಲಬುರ್ಗಿಯ ಕಾಂಗ್ರೆಸ್ ಮುಖಂಡ ದೂರು ದಾಖಲಿಸಿದ್ದರು.  

click me!