ಭೂಸಾರ ಹಾಗೂ ಇ-ಸ್ಯಾಪ್ ಆ್ಯಪ್‌ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಾಮಕಾರಿಯಾಗಿ ನೆರವಾಗಲಿವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಬೆಂಗಳೂರು (ಸೆ.19): ಭೂಸಾರ ಹಾಗೂ ಇ-ಸ್ಯಾಪ್ ಆ್ಯಪ್‌ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಾಮಕಾರಿಯಾಗಿ ನೆರವಾಗಲಿವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ವಿಕಾಸಸೌಧದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ ಯುವ ನವೋದ್ಯಮಿಗಳನ್ನು ಭೇಟಿಯಾಗಿ ಚರ್ಚಿಸಿದ ಅವರು, ರೈತರಿಗೆ ಇನ್ನಷ್ಟು ವೈಜ್ಞಾನಿಕ ಹಾಗೂ ತಾಂತ್ರಿಕ ನೆರವು ನೀಡಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೃಷಿ ಅಭ್ಯುದಯಕ್ಕೆ ಸರ್ಕಾರ ಹತ್ತಾರು ಪ್ರಮುಖ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದರು.
ರಾಜ್ಯದಲ್ಲಿ ಬಹುತೇಕ ಮಳೆಯಾಶ್ರಿತ ಜಮೀನು ಹೊಂದಿದ್ದು, ಬರ ಹಾಗೂ ಅತಿವೃಷ್ಟಿ ನಮ್ಮ ಮುಂದಿರುವ ಬಹುದೊಡ್ಡ ಸವಾಲಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರವೂ ಶ್ರಮಿಸುತ್ತಿದೆ. ಕೃಷಿ ಯಾಂತ್ರೀಕರಣ, ಮೌಲ್ಯವರ್ಧನೆ, ಉತ್ಪಾದನೆ ಹೆಚ್ಚಳ ಸರ್ಕಾರದ ಆದ್ಯತೆಯಾಗಿದ್ದು, ಮಾರುಕಟ್ಟೆ ಬಲ ಪಡಿಸಲು ಗಮನ ಹರಿಸಿದೆ ಎಂದು ತಿಳಿಸಿದರು.
undefined
ಕನಸಿನ ರಾಣಿ ಮಾಲಾಶ್ರೀ ನಟನೆಯ ಹೊಸ ಸಿನಿಮಾ ತಾಯಿನೇ ದೇವರ?
ದೇಶದಲ್ಲಿ ಕರ್ನಾಟಕ ತಂತ್ರಜ್ಞಾನ ಬಳಕೆಯಲ್ಲಿ ನಾಲ್ಕನೆಯ ಸ್ಥಾನದಲ್ಲಿದೆ. ಜಲಾನಯನ ಅಭಿವೃದ್ಧಿಯಲ್ಲಿಯೂ ವಿಶ್ವಬ್ಯಾಂಕ್ ರಾಜ್ಯವನ್ನು ಮುಂಚೂಣಿ ನಾಯಕನಂತೆ ಗುರುತಿಸಿದೆ. ರಾಜ್ಯದಲ್ಲಿ ಬೆಳೆ ವಿಮೆ ನೋಂದಣಿ, ಪರಿಹಾರ ಇತ್ಯರ್ಥ, ಬೆಳೆ ಸಮೀಕ್ಷೆಗಳು ಪರಿಣಾಮಕಾರಿಯಾಗಿ ನಡೆಯುತ್ತಿವೆ. ಸಮಗ್ರ ಕೃಷಿ ಹೆಚ್ಚು ಲಾಭದಾಯಕ ಹಾಗೂ ಸುಸ್ಥಿರ ಅಭಿವೃದ್ಧಿಗೆ ಸಹಕಾರಿಯಾಗಿದೆ. ರೈತರು ಅದನ್ನು ಅನುಸರಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.
ಪ್ರಜಾಪ್ರಭುತ್ವ ದಿನದ ಬಗ್ಗೆ ಜಾಗೃತಿ ಅವಶ್ಯ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಮಂಡ್ಯ ಮಿಮ್ಸ್ ನ ಆವರಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ, ಸಾರ್ವಜನಿಕರಿಗೆ ಪ್ರಜಾಪ್ರಭುತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ.
1997ರ ಸೆ.15 ರಂದು ವಿಶ್ವಸಂಸ್ಥೆಯು ವಿಶ್ವ ಪ್ರಜಾಪ್ರಭುತ್ವ ದಿನವೆಂದು ತೀರ್ಮಾನಿಸಿ ಘೋಷಣೆ ಮಾಡಿತು. ತದನಂತರ 2007ರಲ್ಲಿ ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಅದೇ ದಿನ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವುದಾಗಿ ಸಹಿ ಹಾಕಿ ಒಪ್ಪಂದ ಮಾಡಿಕೊಂಡವು ಎಂದು ಹೇಳಿದರು. ಈ ದಿನ ನಮ್ಮ ರಾಷ್ಟ್ರಕ್ಕೆ ಹಾಗೂ ಪ್ರಜಾಪ್ರಭುತ್ವ ಇರುವಂತಹ ಎಲ್ಲಾ ರಾಷ್ಟ್ರಗಳಿಗೂ ಪವಿತ್ರವಾದ ದಿನ. ಯಾವುದೇ ಸರ್ಕಾರ ರಚನೆಯಾಗಬೇಕೆಂದರೆ ಪ್ರಜೆಗಳಿಂದ ಪ್ರತಿನಿಧಿಗಳು ಆಯ್ಕೆಯಾಗಿ ಮುಂದೆ ಸರ್ಕಾರವನ್ನು ರಚಿಸಿ ನಡೆಸಿಕೊಂಡು ಹೋಗಲಾಗುತ್ತದೆ. ಈ ಮೂಲಕ ಪ್ರಜೆಗಳ ತೀರ್ಮಾನದ ಮಹತ್ವವನ್ನು ತಿಳಿಯಬಹುದು ಎಂದು ನುಡಿದರು.
ಬೇಕಿದ್ರೆ ಐದಾರು ಮದುವೆ ಆಗ್ತೀನಿ, ನಿರ್ದೇಶನ ಅದಕ್ಕಿಂತ ಕಷ್ಟ: ತಲೆಗೆ ಹುಳ ಬಿಟ್ಟ ಉಪೇಂದ್ರ
ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಭಾರತ ಸಂವಿಧಾನದಲ್ಲಿ ಪ್ರಜಾಪ್ರಭುತ್ವವನ್ನು ರಚಿಸುವ ಮೂಲಕ ದೇಶದ ಪ್ರತಿಯೊಬ್ಬರ ಬದುಕಿಗೆ ಶಕ್ತಿ ತುಂಬುವಂತಹ ಕೆಲಸವನ್ನು ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಸಾಕಷ್ಟು ಶ್ರಮಿಸಿದ್ದಾರೆ. ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಂವಿಧಾನವನ್ನು ಪ್ರಶಂಸಿಸುವಂತೆ ಮಾಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯನ್ನು ಪ್ರತಿಯೊಬ್ಬರೂ ನೆನೆಯಬೇಕು ಎಂದು ಹೇಳಿದರು.