ರಾಜ್ಯ ಸರ್ಕಾರದ ವತಿಯಿಂದ 5 ಕೆ.ಜಿ. ಆಹಾರಧಾನ್ಯದ ಬದಲಾಗಿ ಪ್ರತಿ ಫಲಾನುಭವಿಗೆ 170 ರು.ನಂತೆ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣವನ್ನು ವರ್ಗಾಯಿಸುವ ಬಗ್ಗೆ ಆದೇಶ ಹೊರಡಿಸಲಾಗಿದೆ ಎಂದು ತಹಸೀಲ್ದಾರ್ ಪವನ್‌ಕುಮಾರ್ ತಿಳಿಸಿದ್ದಾರೆ.
ತಿಪಟೂರು: ರಾಜ್ಯ ಸರ್ಕಾರದ ವತಿಯಿಂದ 5 ಕೆ.ಜಿ. ಆಹಾರಧಾನ್ಯದ ಬದಲಾಗಿ ಪ್ರತಿ ಫಲಾನುಭವಿಗೆ 170 ರು.ನಂತೆ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣವನ್ನು ವರ್ಗಾಯಿಸುವ ಬಗ್ಗೆ ಆದೇಶ ಹೊರಡಿಸಲಾಗಿದೆ ಎಂದು ತಹಸೀಲ್ದಾರ್ ಪವನ್‌ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಎಲ್ಲಾ ಪಡಿತರ ಚೀಟಿದಾರರು ಈ ಯೋಜನೆಯ ಫಲಾನುಭವಿಯಾಗಲು ಯಾವುದೇ ಕಂಪ್ಯೂಟರ್ ಸೆಂಟರ್, ಸೈಬರ್ ಸೆಂಟರ್‌ನಲ್ಲಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಎಎವೈ ಮತ್ತು ಆದ್ಯತಾ ಪಡಿತರ ಚೀಟಿಗೆ ಆಧಾರ್‌ಕಾರ್ಡ್ ಲಿಂಕ್ ಆಗಿದ್ದು ಸದರಿ ಆಧಾರ್‌ಕಾರ್ಡ್ ನಂಬರ್ ಬ್ಯಾಂಕ್ ಖಾತೆಗೆ ಜೋಡಣೆಯಾಗಿದ್ದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆಯಾಗುತ್ತದೆ. ಚಾಲ್ತಿಯಲ್ಲಿಲ್ಲದ ಖಾತೆ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದ ಪಡಿತರ ಚೀಟಿಗಳ ಪಟ್ಟಿಯನ್ನು ನ್ಯಾಯಬೆಲೆ ಅಂಗಡಿಯವರಿಗೆ ನೀಡಲಾಗಿರುತ್ತದೆ. ಸದರಿ ಪಟ್ಟಿಯಲ್ಲಿನ ಫಲಾನುಭವಿಗಳು ಮಾತ್ರ ಪರಿಶೀಲಿಸಿಕೊಂಡು ಕ್ರಮವಹಿಸಬೇಕು.
undefined
ಇದನ್ನು ಹೊರತುಪಡಿಸಿ ಯಾವುದೇ ಸೈಬರ್ ಸೆಂಟರ್, ಗ್ರಾಮ ಒನ್, ಕರ್ನಾಟಕ ಒನ್, ಸಿಎಸ್‌ಸಿ ಸೆಂಟರ್‌ಗಳನ್ನೊಳಗೊಂಡಂತೆ ಇತರೆ ಯಾವುದೇ ಕಂಪ್ಯೂಟರ್ ಸೆಂಟರ್‌ಗಳಲ್ಲಿ ಪರಿಶೀಲಿಸುವ ಅಥವಾ ಜೋಡಣೆ ಮಾಡುವ ಅವಕಾಶ ಇರುವುದಿಲ್ಲ ಮತ್ತು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಯಾರಾದರೂ ಈ ಸರ್ಕಾರಿ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡು ಹಣ ಪಡೆಯುತ್ತಿರುವುದು ಕಂಡುಬಂದಲ್ಲಿ ತಾಲೂಕು ಕಚೇರಿಯ ಆಹಾರ ಶಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು. ಈ ಯೋಜನೆಯ ಬಗ್ಗೆ ಇತರೆ ಯಾವುದೇ ಗೊಂದಲಗಳಿದ್ದಲ್ಲಿ ನೇರವಾಗಿ ತಾಲೂಕು ಕಚೇರಿಯ ಆಹಾರ ಶಾಖೆಯನ್ನು ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.
ಪಡಿತರ ಕುಟುಂಬಕ್ಕೆ ಹಣ ವರ್ಗಾವಣೆ
ಬಾಗಲಕೋಟೆ(ಜು.13): ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ವಿತರಿಸಲಾಗುವ 5 ಕೆಜಿ ಅಕ್ಕಿ ಬದಲಿಗೆ ಹಣ ಸಂದಾಯ ಮಾಡುವ ಯೋಜನೆಗೆ ಚಾಲನೆ ನೀಡಲಾಗಿದ್ದು, ಜಿಲ್ಲೆಯ 2,99,293 ಪಡಿತ ಚೀಟಿ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ .17,78,08,440ಗಳ ಹಣ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಒಟ್ಟು 4,18,560 ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿಗಳ (ಪಿಎಎಚ್‌ಎಚ್ ಚಾಲ್ತಿಯಲ್ಲಿದ್ದು, ಈ ಪೈಕಿ ಎನ್‌ಐಸಿ ಯಿಂದ ಸ್ವೀಕೃತವಾದ ಸಕ್ರಿಯವಾಗಿರುವ ಹಾಗೂ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿರುವ 2,99,293 ಪಡಿತರ ಚೀಟಿಗಳ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಹಣ ಜಮೆಯಾಗದೇ ಉಳಿದಿರುವ ಪಡಿತರ ಚೀಟಿದಾರರು ಕುಟುಂಬದ ಮುಖ್ಯಸ್ಥರು ಜುಲೈ 20ರೊಳಗಾಗಿ ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಮತ್ತು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಸಿ ಖಾತೆಯನ್ನು ಸಕ್ರಿಯಗೊಳಿಸಿದಲ್ಲಿ ಮಾತ್ರ ಮುಂದಿನ ತಿಂಗಳಿನಿಂದ ಹಣ ಜಮೆಯಾಗುತ್ತದೆ. ಅರ್ಹ ಪಡಿತರ ಚೀಟಿದಾರರು ಡಿಬಿಟಿ ಮೂಲಕ ಹಣ ವರ್ಗಾವಣೆಯಾದ ಬಗ್ಗೆ ಹಾಗೂ ಇತರೆ ವಿವರಗಳಿಗೆ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.