ರಾಜ್ಯ ವಿಧಾನಸಭಾ ಚುನಾವಣಾ ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ನಿರ್ವಹಣಾ ಸಮಿತಿ ಸಂಚಾಲಕಿಯಾಗಿ ಶೋಭಾ ಕರಂದ್ಲಾಜೆ ನೇಮಕದಿಂದ ಬಿಜೆಪಿಗೆಯಾವುದೇ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಟೀಕಿಸಿದ್ದಾರೆ.
ಮೈಸೂರು : ರಾಜ್ಯ ವಿಧಾನಸಭಾ ಚುನಾವಣಾ ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ನಿರ್ವಹಣಾ ಸಮಿತಿ ಸಂಚಾಲಕಿಯಾಗಿ ಶೋಭಾ ಕರಂದ್ಲಾಜೆ ನೇಮಕದಿಂದ ಬಿಜೆಪಿಗೆಯಾವುದೇ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಟೀಕಿಸಿದ್ದಾರೆ.
ಬಸವರಾಜ್ ಬೊಮ್ಮಾಯಿ ಅವರು ಯಾವುದೇ ಕಾರ್ಯಕ್ರಮಗಳನ್ನು ಜನತೆಗೆ ನೀಡಿಲ್ಲ. ಈಗಾಗಲೇ ಯಲ್ಲಿ ಜನ ಭಾಗವಹಿಸಿಲ್ಲ. ಸರ್ಕಾರಿ ಹಣದಲ್ಲಿ ಸರ್ಕಾರದ ಸೌಲಭ್ಯಗಳನ್ನು ನೀಡಲು ವಿಜಯ ಸಂಕಲ್ಪ ಯಾತ್ರೆ ಉಪಯೋಗಿಸಿಕೊಂಡರು. ಜನತೆ ಕಾರ್ಯಕ್ರಮವನ್ನು ತಿರಸ್ಕರಿಸಿದ್ದಾರೆ. ಈಗ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿರುವುದು ಬಿಜೆಪಿ ಅಧಃಪತನಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಪ್ರಚಾರವನ್ನು ಜನ ತತ್ಸರದಿಂದ ನೋಡುತ್ತಾರೆ. ಮುಖ್ಯಮಂತ್ರಿಯಾಗಿ ಕೊಟ್ಟಅಧಿಕಾರವನ್ನು ಜನರ ಕಲ್ಯಾಣ ಕಾರ್ಯಕ್ರಮಗಳನ್ನು ನಡೆಸಲಾಗದ ಬಸವರಾಜ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವೇಷ ಬದಲಿಸಿದವರಂತೆ ಕಾಣುತ್ತಾರೆ ಎಂದು ಅವರು ಆರೋಪಿಸಿದ್ದಾರೆ.
undefined
ವೇಷ ಬದಲಾಯಿಸಿ ಬಂದು ಬಣ್ಣದ ಮಾತುಗಳಿಂದ ಜನರ ಮತ ಗಳಿಸಲು ಸಾಧ್ಯವಿಲ್ಲ. ರಾಜ್ಯದ ಜನ ಬಹಳ ಸಂಕಷ್ಟದಲ್ಲಿದ್ದಾರೆ. ಕಾಂಗ್ರೆಸ್ ಈಗಾಗಲೇ ಉಚಿತ 200 ಯೂನಿಟ್ ವಿದ್ಯುತ್ ಯೋಜನೆಯ ಗೃಹಭಾಗ್ಯ, ಸಂಕಷ್ಟದಲ್ಲಿರುವ ಜನತೆಯ ನಿಮ್ಮದಿಯ ಬದುಕಿಗೆ . 2000 ಪ್ರತಿ ತಿಂಗಳ ಹಣ ಗೃಹಲಕ್ಷ್ಮಿ, ತಿಂಗಳಿಗೆ ಹತ್ತು ಕೆಜಿ ಅಕ್ಕಿ ಅನ್ನಭಾಗ್ಯ ಯೋಜನೆ ನೀಡುವ ಬಗ್ಗೆ ಗ್ಯಾರಂಟಿ ಕಾರ್ಡ್ ವಿತರಣೆಗೆ ಜನ ಮೆಚ್ಚಿದ್ದಾರೆ. ಚುನಾವಣೆಗೆ ಮೊದಲೇ ಗ್ಯಾರಂಟಿ ಕಾರ್ಡ್ ವಿತರಣೆ ರಾಜಕೀಯ ಇತಿಹಾಸದಲ್ಲಿ ಒಂದು ಹೊಸ ಮೈಲಿ ಗಲ್ಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇಂತಹ ದೃಢಸಂಕಲ್ಪವನ್ನು ರಾಜ್ಯದ ಜನತೆಗೆ ಮುಟ್ಟಿಸುವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬಹಳ ಉತ್ಸಾಹದಿಂದ ಗ್ಯಾರೆಂಟಿ ಕಾರ್ಡ್ ಕಾರ್ಯಕ್ರಮಯಶಸ್ವಿಗೊಳಿಸುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಡಾ.ಜಿ. ಪರಮೇಶ್ವರ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಪ್ರಣಾಳಿಕೆಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವರು. ಪ್ರಣಾಳಿಕೆಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲಲಿದ್ದಾರೆ. ರಾಜ್ಯದ ಭವಿಷ್ಯದ ದೃಷ್ಟಿಯಿಂದ ಗ್ಯಾರೆಂಟಿ ಕಾರ್ಡ್ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಗ್ಯಾರಂಟಿಯಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಲ್ಲಾ ಶಾಸಕರಿಗೂ ಇಲ್ಲ ಟಿಕೆಟ್
ವಿಜಯಪುರ (ಮಾ.9): ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುತ್ತೆ. ಎಲ್ರಿಗೂ ಹಂಡ್ರೆಡ್ ಪರ್ಸೆಂಟ್ ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ. ಸರ್ವೇ, ಪರ್ಪಾರ್ಮೆನ್ಸ್ ಸೇರಿ ಎಲ್ಲಾ ಕ್ರೈಟೆರಿಯಾ ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ ಎನ್ನುವ ಮೂಲಕ ಕೆಲವರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಬೊಮ್ಮಾಯಿ ಸಹಮತ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ನಡೆದ KBJNL 3ನೇ ಹಂತದ ಪರಿಹಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮಗಳ ಜೊತೆಗೆ ಸಿಎಂ ಮಾತನಾಡಿದರು
ಬಿಜೆಪಿಯಲ್ಲಿ ಹಾಲಿ ಶಾಸಕರಿಗೆ ತಪ್ಪಲಿದೇಯಾ ಟಿಕೆಟ್:
ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಡಿಯೂರಪ್ಪನವರು ಸಂಸದೀಯ ಮಂಡಳಿ ಸದಸ್ಯರು, ಅವರಿಗೆ ಮಾಹಿತಿ ಇರಬಹುದು, 70 ವಯಸ್ಸು ದಾಟಿದವರಿಗೆ ಟಿಕೆಟ್ ನೀಡಬೇಕೇ? ಬೇಡವೇ? ಎನ್ನುವ ವಿಚಾರ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿಯೊಂದು ಕ್ಷೇತ್ರದ ಕುರಿತು ಸಂಸದೀಯ ಮಂಡಳಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದರು. ಆದರೆ ನೂರಕ್ಕೆ ನೂರರಷ್ಟು ಎಲ್ಲರಿಗೂ ಟಿಕೆಟ್ ಸಿಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಲೋಕಾಯುಕ್ತರು ಸರ್ವಸ್ವತಂತ್ರರು: ಸಿಎಂ
ವಿಜಯಪುರದ ಚಿಕ್ಕಗಲಗಲಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ವಿಚಾರದಲ್ಲಿ ತನಿಖೆ ನಡೆಸಲು ಲೋಕಾಯುಕ್ತರು ಸರ್ವಸ್ವತಂತ್ರರು, ನ್ಯಾಯಾಲಯ ತೀರ್ಮಾನಕ್ಕೆ ನಾವೆಲ್ಲಾ ತಲೆ ಬಾಗಬೇಕಾಗುತ್ತದೆ, ಇದರ ನಂತರ ಲೋಕಾಯುಕ್ತರು ಮುಂದಿನ ತನಿಖೆ ನಡೆಸಿದ್ದಾರೆ. ಇದರಲ್ಲಿ ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.