ಕಲಬುರಗಿ ಆಯ್ತು, ಈಗ ಮಡಿಕೇರಿಯಲ್ಲೂ ಬಫರ್ ಜೋನ್..!

By Kannadaprabha News  |  First Published Mar 20, 2020, 12:37 PM IST

ಮಡಿಕೇರಿಯಲ್ಲಿ ಕೊರೋನಾ ವೈರಸ್ ಪ್ರಕರಣ ದೃಢಪಟ್ಟಿದ್ದು ವ್ಯಕ್ತಿ ವಾಸವಿದ್ದ ಸ್ಥಳದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಬಫರ್ ಜೋನ್ ಎಂದು ಪರಿಗಣಿಸಲಾಗಿದೆ. ಹಾಗೆಯೇ ಗ್ರಾಮದ 306 ಜನರ ಮೇಲೆ ನಿಗಾ ಇರಿಸಲಾಗಿದೆ. 


ಮಡಿಕೇರಿ(ಮಾ.20): ಮಡಿಕೇರಿಯಲ್ಲಿ ಕೊರೋನಾ ವೈರಸ್ ಪ್ರಕರಣ ದೃಢಪಟ್ಟಿದ್ದು ವ್ಯಕ್ತಿ ವಾಸವಿದ್ದ ಸ್ಥಳದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಬಫರ್ ಜೋನ್ ಎಂದು ಪರಿಗಣಿಸಲಾಗಿದೆ. ಹಾಗೆಯೇ ಗ್ರಾಮದ 306 ಜನರ ಮೇಲೆ ನಿಗಾ ಇರಿಸಲಾಗಿದೆ. 

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು, ಮೈಸೂರಿನ ಮೆಡಿಕಲ್‌ ಕಾಲೇಜಿನ ವರದಿ ಪ್ರಕಾರ ವಿದೇಶಕ್ಕೆ ತೆರಳಿ ವಾಪಸ್ಸಾಗಿದ್ದ ವ್ಯಕ್ತಿಯಲ್ಲಿ ಕೊರೋನಾ ವೈರಸ್‌ ಪತ್ತೆಯಾಗಿದೆ. ಹೀಗಾಗಿ ಕೊಡಗಿನಲ್ಲಿ ಕೊರೋನಾ ವೈರಸ್‌ ಪತ್ತೆಯಾದ ವ್ಯಕ್ತಿ ವಾಸವಿದ್ದ ಗ್ರಾಮದ 500 ಮೀಟರ್‌ ಪ್ರದೇಶವನ್ನು ಬಫರ್‌ ಜೋನ್‌ ಎಂದು ಘೋಷಿಸಲಾಗಿದ್ದು, ಗ್ರಾಮದ 306 ಜನರ ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ವಿವರಿಸಿದದ್ದಾರೆ.

Latest Videos

undefined

ಗ್ರಾಮದ 306 ಜನರ ಮೇಲೆ ಪೊಲೀಸ್‌ ಹಾಗೂ ಆರೊಗ್ಯ ಇಲಾಖೆಯಿಂದ ಚೆಕ್‌ಪೋಸ್ಟ್‌ ನಿರ್ಮಿಸಿ ತೀವ್ರ ನಿಗಾ ವಹಿಸಲಾಗಿದೆ. ಮಾಚ್‌ರ್‍ 31 ರವರೆಗೆ ಗ್ರಾಮದಲ್ಲೇ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಲಾಗುವುದು. ಗ್ರಾಮಸ್ಥರು ಯಾವುದೇ ಕಾರಣಕ್ಕೂ ಮದುವೆ, ಶುಭ-ಸಮಾರಂಭಗಳಿಗೆ ಹೋಗುವಂತಿಲ್ಲ ತಿಳಿಸಿದ್ದಾರೆ.

"

click me!