ಯುಪಿಐ ಬಳಸಿ ರೈತನ ₹1.60 ಕೋಟಿ ವಂಚನೆ

Kannadaprabha News   | Kannada Prabha
Published : Aug 04, 2025, 08:51 AM IST
UPI

ಸಾರಾಂಶ

ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರುಪಾಯಿಯನ್ನು ಆನ್‌ಲೈನ್ ಮೂಲಕ ವಂಚಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜರುಗಿದೆ.

ಮದ್ದೂರು: ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರುಪಾಯಿಯನ್ನು ಆನ್‌ಲೈನ್ ಮೂಲಕ ವಂಚಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜರುಗಿದೆ. 

ತಾಲೂಕಿನ ಕೊಪ್ಪ ಹೋಬಳಿ ರಾಂಪುರ ಗ್ರಾಮದ ರೈತ ಚಂದ್ರಶೇಖರ್ ಅವರ ಸೇವಿಂಗ್ಸ್ ಖಾತೆಯಲ್ಲಿದ್ದ ₹1.60 ಕೋಟಿಯನ್ನು ಗ್ರಾಹಕರ ಗಮನಕ್ಕೆ ಬಾರದೇ ಯುಪಿಐ ಸಂಪರ್ಕ ಸಾಧಿಸಿ ವಂಚಕರು ಪಂಗನಾಮ ಹಾಕಿದ್ದಾರೆ.

 ಈ ಪ್ರಕರಣ ಕುರಿತು ಚಂದ್ರಶೇಖರ್ ಮಂಡ್ಯ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆನ್‌ಲೈನ್ ವಂಚಕರು ಯುಪಿಐ ಕೋಡ್ ಬಳಸಿ ಜು.24ರಂದು ₹1.10ಕೋಟಿ, ನಂತರ ಜು.27ಕ್ಕೆ ₹49,99,299 ಲಕ್ಷ ಸೇರಿದಂತೆ ₹1.60 ಲಕ್ಷವನ್ನು ಹಂತ ಹಂತವಾಗಿ ಲಪಟಾಯಿಸಲಾಗಿದೆ ಎಂದು ರೈತ ಚಂದ್ರಶೇಖರ್ ಆರೋಪಿಸಿದ್ದಾರೆ. ಮಂಡ್ಯ ಸೈಬರ್ ಕ್ರೈಂ ಪೊಲೀಸರು ಬಿಎನ್‌ಎಸ್‌ ಕಾಯ್ದೆ 2023ರನ್ವಯ 318, 319 ರೀತ್ಯ ಪ್ರಕರಣ ದಾಖಲಿಸಿದ್ದಾರೆ.

PREV
Read more Articles on
click me!

Recommended Stories

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!