ಬೆಂಗಳೂರಿನ ಬೋರ್‌ವೆಲ್‌ಗಳಿಗೆ ಎಐ ತಂತ್ರಜ್ಞಾನ ಅಳವಡಿಕೆ; ನೀರು ಎಷ್ಟಿದೆ ಎಂದು ಹೇಳಲಿದೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್

Published : Mar 25, 2024, 09:01 PM ISTUpdated : Mar 25, 2024, 09:38 PM IST
ಬೆಂಗಳೂರಿನ ಬೋರ್‌ವೆಲ್‌ಗಳಿಗೆ ಎಐ ತಂತ್ರಜ್ಞಾನ ಅಳವಡಿಕೆ; ನೀರು ಎಷ್ಟಿದೆ ಎಂದು ಹೇಳಲಿದೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್

ಸಾರಾಂಶ

ಬೆಂಗಳೂರಿನಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿಯ ಕೊಳವೆ ಬಾವಿಗಳು ಬತ್ತಿ ಹೋಗುವುದನ್ನು ತಡೆಯುವ ನಿಟ್ಟಿನಲ್ಲಿ ಎಲ್ಲ ಬೋರ್‌ವೆಲ್‌ಗಳಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ)  ತಂತ್ರಜ್ಞಾನ ಅಳವಡಿಸಲಾಗುತ್ತಿದೆ.

ಬೆಂಗಳೂರು (ಮಾ.25): ಸಿಲಿಕಾನ್‌ ಸಿಟಿ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊಳವೆ ಬಾವಿಗಳು ಬತ್ತಿ ಹೋಗುವುದನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವತಿಯಿಂದ ಎಲ್ಲ ಬೋರ್‌ವೆಲ್‌ಗಳಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿದೆ ಎಂದು ಜಲ ಮಂಡಳಿ ಅಧ್ಯಕ್ಷರಾದ ಡಾ.ರಾಮ್ ಪ್ರಸಾತ್ ಮನೋಹರ್ ಹೇಳಿದರು.

ನಗರದ ಚಿನ್ನಪ್ಪ ಗಾರ್ಡನ್ ನಲ್ಲಿ ಎ ಐ ಮತ್ತು ಐಓಟಿ(IOT) ತಂತ್ರಜ್ಞಾನ ಅಳವಡಿಸಲಾಗಿರುವ ಕೊಳವೆ ಬಾವಿಯ ಟ್ರಯಲ್ ರನ್ ಪರಿಶೀಲಿಸಿ ಮಾತನಾಡಿದರು. ನಗರದಲ್ಲಿ 14 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೊಳವೆ ಬಾವಿಗಳ ಪಂಪ್‌ ಸೆಟ್‌ಗಳನ್ನ ಹೆಚ್ಚಿನ ಸಮಯ ಬಳಸುವುದು. ನೀರು ಇಲ್ಲದೇ ಇರುವುದು ಗೊತ್ತಾಗದೆ ಮೋಟಾರ್‌ ಓಡಿಸುವುದರಿಂದ ಬಹಳಷ್ಟು ಕೊಳವೆ ಬಾವಿಗಳು ರಿಪೇರಿಗೆ ಬರುತ್ತಿವೆ.  ಕೊಳವೆಬಾವಿಗಳು ಪದೇಪದೇ ತಾಂತ್ರಿಕ ಸಮಸ್ಯೆಗೆ  ಸಿಲುಕುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಧುನಿಕ ಎ ಐ ಮತ್ತು ಐಓಟಿ(IOT) ತಂತ್ರಜ್ಞಾನ ಅಳವಡಿಸಿರುವ ಕೊಳವೆ ಬಾವಿಯ ಟ್ರಯಲ್ ರನ್ ನ ಕಾರ್ಯವನ್ನು ಇಂದು ಪರಿಶೀಲಿಸಲಾಗಿದೆ ಎಂದು ತಿಳಿಸಿದರು.

ಕೆಂಗೇರಿ ಕೆರೆ ನೀರನ್ನು ಕುಡಿಯಲು ಹಾಗೂ ಗೃಹಬಳಕೆಗೆ ಬಳಸಬೇಡಿ; ಬೆಂಗಳೂರು ಜಲಮಂಡಳಿ ಮನವಿ

ಹೊಸ ತಂತ್ರಜ್ಞಾನದ ಅಳವಡಿಕೆಯಿಂದ ಆಗುವ ಉಪಯೋಗಗಳು: ಈ ನೂತನ ತಂತ್ರಜ್ಞಾನದ ಅಳವಡಿಕೆಯಿಂದ ಕೊಳವೆ ಬಾವಿಗಳನ್ನು ಸಮರ್ಥವಾಗಿ ಹಾಗೂ ವೈಜ್ಞಾನಿಕವಾಗಿ ನಿರ್ವಹಿಸುವುದು ಹಾಗೂ ಅವುಗಳ ಅನಗತ್ಯ ಬಳಕೆಯನ್ನ ತಪ್ಪಿಸುವುದು ಸಾಧ್ಯವಾಗಲಿದೆ. ಬಾವಿಯಲ್ಲಿ ನೀರಿಲ್ಲದೆ ಇರುವಂತಹ ಸಮಯದಲ್ಲಿ ಬಳಸುವುದನ್ನ ತಪ್ಪಿಸುವುದರ ಮೂಲಕ ಕೊಳವೆ ಬಾವಿಗಳು ನಿಷ್ಕ್ರಿಯ ವಾಗುವುದನ್ನ ತಪ್ಪಿಸಬಹುದಾಗಿದೆ. ಕೊಳವೆ ಬಾವಿಗಳನ್ನು ಸುಸ್ಥಿರವಾಗಿ ಹಾಗೂ ತಾಂತ್ರಿಕವಾಗಿ ಬಳಸುವುದು ಅಲ್ಲದೆ, ಪದೇಪದೇ ಮೋಟಾರ್ ಸುಟ್ಟು ಹೋಗುವಂತಹ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗೆ ಸಿಲುಕುವುದನ್ನು ತಪ್ಪಿಸುವುದಲ್ಲದೆ ನಿರ್ವಹಣೆಯ ವೆಚ್ಚವನ್ನು ಕಡಿಮೆಗೊಳಿಸಬಹುದಾಗಿದೆ ಎಂದು ಜಲ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪುಸ್ತಕ ನೋಡಿ ಪರೀಕ್ಷೆ ಬರೆಯುವ ರೂಲ್ಸ್ ತರುತ್ತಿದ್ದೆನು; ಮಾಜಿ ಶಿಕ್ಷಣ ಸಚಿವ ಎನ್. ಮಹೇಶ್

ಜನರ ಕುಡಿಯುವ ನೀರನ್ನು ಮಾರಿಕೊಂಡ ಟ್ಯಾಂಕರ್‌ ಚಾಲಕನ ವಿರುದ್ಧ ಎಫ್‌ಐಆರ್: ಸಾರ್ವಜನಿಕರಿಗೆ ಕುಡಿಯುವ ನೀರನ್ನು ಪೂರೈಸಲು  ಸುನೀಲ್ ‌ಎನ್ನುವವರಿಗೆ ಸೇರಿದ ಖಾಸಗಿ ಟ್ಯಾಂಕರ್ ಕೆಎ-52 ಸಿ-0204 ಪಡೆದುಕೊಳ್ಳಲಾಗಿತ್ತು. ವಾರ್ಡ್ ನಂ 130ರಲ್ಲಿರುವ ಸಾರ್ವಜನಿಕರಿಗೆ ವಿತರಿಸಲು ಸೂಚಿಸಲಾಗಿತ್ತು. ಆದರೇ ಸದರಿ ಖಾಸಗಿ ಟ್ಯಾಂಕರ್ ಮಾಲೀಕ‌ ಸುನೀಲ್ ಅವರು ಶೆಟ್ಟಿಹಳ್ಳಿ ಮುಖ್ಯ ರಸ್ತೆಯ ಮಲ್ಲಸಂದ್ರ ವಾರ್ಡ್ ಸಂ 14ರಲ್ಲಿ ವಾಣಿಜ್ಯ ಉದ್ದೇಶಕ್ಕೆ ನೀರು ವಿತರಿಸಿರುವುದು ಮಾ.24ರಂದು  ಕಂಡುಬಂದ ಹಿನ್ನೆಲೆಯಲ್ಲಿ ಅವರ ಖಾಸಗಿ ಟ್ಯಾಂಕರ್ ನ ಸುನೀಲ್ ಎನ್ನುವವರ ವಿರುದ್ಧ ಬಿಡಬ್ಲ್ಯೂಎಸ್‌ಎಸ್‌ಬಿ ಸಹಾಯಕ ಎಂಜನಿಯರ್ ಕಾರ್ತಿಕ್ ಮಂಜು ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ