ಶಾಸಕನಾಗಿ ಆಯ್ಕೆಯಾದ ಎರಡು ವರ್ಷದ ಅವಧಿಯಲ್ಲಿ ಕೋವಿಡ್ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸಿದ್ದೇನೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಐದು ವರ್ಷದ ಅವಧಿಗೆ ಆಯ್ಕೆ ಮಾಡಿದರೆ ಶಿರಾ ಕ್ಷೇತ್ರವನ್ನು ರಾಜ್ಯದಲ್ಲಿ ಮಾದರಿ ಕ್ಷೇತ್ರ ಮಾಡುತ್ತೇನೆ ಎಂದು ಶಾಸಕ ಡಾ.ಸಿ.ಎಂ. ರಾಜೇಶ್‌ಗೌಡ ಹೇಳಿದರು.
ಶಿರಾ: ಶಾಸಕನಾಗಿ ಆಯ್ಕೆಯಾದ ಎರಡು ವರ್ಷದ ಅವಧಿಯಲ್ಲಿ ಕೋವಿಡ್ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸಿದ್ದೇನೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಐದು ವರ್ಷದ ಅವಧಿಗೆ ಆಯ್ಕೆ ಮಾಡಿದರೆ ಶಿರಾ ಕ್ಷೇತ್ರವನ್ನು ರಾಜ್ಯದಲ್ಲಿ ಮಾದರಿ ಕ್ಷೇತ್ರ ಮಾಡುತ್ತೇನೆ ಎಂದು ಶಾಸಕ ಡಾ.ಸಿ.ಎಂ. ರಾಜೇಶ್‌ಗೌಡ ಹೇಳಿದರು.
ಅವರು ತಾಲೂಕಿನ ಗಂಗನಹಳ್ಳಿ ಗೊಲ್ಲರಹಟ್ಟಿಹಾಗೂ ಗಂಗನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು. ತಾಲೂಕಿನ ಐತಿಹಾಸಿಕ ಪ್ರಸಿದ್ಧ ಜುಂಜಪ್ಪನ ಕ್ಷೇತ್ರ ಅಭಿವೃದ್ಧಿ ಪಡಿಸಲು ಸರ್ಕಾರ 1 ಕೋಟಿ ರೂಪಾಯಿ ಅನುದಾನ ನೀಡಿದೆ. ಕಾಡುಗೊಲ್ಲ ಸಮುದಾಯದ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ 17 ಕೋಟಿ ರು. ಅನುದಾನ ನೀಡುವುದರ ಜೊತೆಗೆ ಶಿರಾ ಕ್ಷೇತ್ರದ ಚಂಗಾವರ ಮಾರಣ್ಣರವರಿಗೆ ಅಧ್ಯಕ್ಷ ಸ್ಥಾನ ನೀಡಿರುವುದು ಬಿಜೆಪಿ ಸರ್ಕಾರದ ಸಾಮಾಜಿಕ ನ್ಯಾಯದ ಬದ್ಧತೆಯನ್ನು ತೋರಿಸುತ್ತದೆ ಎಂದರು.
ಕ್ಷೇತ್ರಕ್ಕೆ ಜನತೆಗೆ ಕೊಟ್ಟಮಾತಿನಂತೆ ಮದಲೂರು ಕೆರೆಗೆ ಹೇಮಾವತಿ ನೀರು ಮೂರು ಬಾರಿ ಹರಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಿದೆ. ಅಲ್ಲದೆ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ತಾಲೂಕಿನ 65 ಕೆರೆಗಳಿಗೆ ನೂರು ನೀರು ಹರಿಸುತ್ತಿರುವುದು, ಅನ್ನದಾತನ ಬದುಕು ಬಂಗಾರವಾಗಲು ಕಾರಣವಾಗುತ್ತದೆ.
ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಧ್ಯಕ್ಷ ಚಂಗಾವರ ಮಾರಣ್ಣ ಮಾತನಾಡಿ ಹಿರಿಯೂರು ಕ್ಷೇತ್ರದಲ್ಲಿ ಕಾಡುಗೊಲ್ಲ ಸಮುದಾಯದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಶಾಸಕರನ್ನಾಗಿ ಮಾಡಿ, ಶಿರಾ ಕ್ಷೇತ್ರದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅತಿ ಹಿಂದುಳಿದ ಕಾಡುಗೊಲ್ಲರ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿರುವ ಕಾರಣ ಈ ಬಾರಿ ಕಾಡುಗೊಲ್ಲ ಸಮುದಾಯ ಬಿಜೆಪಿ ಬೆಂಬಲಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಈರಣ್ಣ, ಮೂಡಲಗಿರಿಯಪ್ಪ, ಮಾರಪ್ಪ, ಗೌಡಪ್ಪ, ಗುಮ್ಮನಹಳ್ಳಿ ಈರಣ್ಣ ಸೇರಿದಂತೆ ಹಲವರು ಹಾಜರಿದ್ದರು.
ಮಧ್ಯವರ್ತಿಗಳಿಲ್ಲದೆ ಸೌಲಭ್ಯ
ಶಿರಾ : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಿಂದ ಸರ್ಕಾರದ ಯೋಜನೆಗಳು ಯಾವುದೇ ಮಧ್ಯವರ್ತಿಗಳಿಂದ ತಲುಪದೆ, ನೇರವಾಗಿ ಫಲನುಭವಿಗಳಿಗೆ ತಲುಪಿ ಯೋಜನೆ ಪ್ರಯೋಜನಾಕಾರಿಯಾಗಿ ಯಶಸ್ವಿಯಾಗಿದೆ ಎಂದು ಶಾಸಕ ಡಾ.ಸಿಎಂ ರಾಜೇಶ್ ಗೌಡ ಹೇಳಿದರು.
ತಾಲೂಕಿನ ಹುಲಿಕುಂಟೆ ಹೋಬಳಿಯ ಬರಗೂರು ಗ್ರಾಮದಲ್ಲಿ ಶನಿವಾರ ಕಂದಾಯ ಇಲಾಖೆ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆಗೆ ಹಳ್ಳಿ ಕಡೆಗೆ ಕಾರ್ಯಕ್ರಮದಲ್ಲಿ ವಿವಿಧ ಫಲಾನುಭವಿಗಳಿಗೆ ಮಾಸಾಶನ ಪತ್ರ ವಿತರಣೆ ಮಾಡಿ ಮಾತನಾಡಿದರು.
ವೃದ್ಧರಿಗೆ ಕಚೇರಿಗೆ ಬಂದು ಸವಲತ್ತು ಪಡೆಯಲು ತೊಂದರೆಯಾಗುವ ಕಾರಣ ತಾಲೂಕು ಆಡಳಿತ ಮತ್ತು ಅಧಿಕಾರಿಗಳೆ ನೇರವಾಗಿ ಮನೆಗೆ ತೆರಳಿ ಪಿಂಚಣಿ ಪತ್ರ ನೀಡುವ ಕಾರ್ಯ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ 102 ಫಲಾನುಭವಿಗಳಿಗೆ ಪಿಂಚಣಿ ನೀಡಲಾಗಿದೆ ಎಂದರು.
ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂಗಾವರ ಮಾರಣ್ಣ ಮಾತನಾಡಿ, ಇಲಾಖೆಗಳ ಸೌಲಭ್ಯಗಳು ನೇರವಾಗಿ ಜನರಿಗೆ ತಲುಪಿವೆ. ಮದಲೂರಿನ ಕೆರೆಗೆ ಹೇಮಾವತಿ ನೀರು ಹರಿಸಿದ ಹಿನ್ನೆಲೆ ಈ ಭಾಗದಲ್ಲಿ ಅಂತರ್ಜಲ ಹೆಚ್ಚಿ ರೈತರಿಗೆ ಸಾಕಷ್ಟುಅಭಿವೃದ್ಧಿ ಕೆಲಸಗಳಿಗೆ ಅನುಕೂಲವಾಗಿದೆ. ಶಿರಾ ತಾಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆಯಿಂದ ಸುಮಾರು ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ನಡೆಯುತ್ತಿದೆ. ನೀರು ತುಂಬಿಸುವ ಮಹತ್ವಕಾಂಕ್ಷೆಯ ಯೋಜನೆಗೆ ಸರ್ಕಾರ ಸಹಕಾರ ನೀಡಿದೆ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮುರಳಿಧರ್, ಗ್ರೇಡ್-2 ತಹಸೀಲ್ದಾರ್ ಮಂಜುನಾಥ್, ಹುಲಿಕುಂಟೆ ನಾಡ ಕಚೇರಿ ಉಪ ತಹಸೀಲ್ದಾರ್ ಹೊನ್ನಪ್ಪ, ಸಹಾಯಕ ಕೃಷಿ ನಿದೇರ್ಶಕ ರಂಗನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಿರಿಯ ಮೇಲ್ವಿಚಾರಕಿ ಸುರೇಖ ಟಾಕೆ, ಡಾ.ವಿ.ನಂದೀಶ್, ಬರಗೂರು ಗ್ರಾಪಂ ಅಧ್ಯಕ್ಷ ಲಕ್ಷ್ಮಣ, ಉಪಾಧ್ಯಕ್ಷೆ ಮಂಜುಳ, ಮುಖಂಡರಾದ ಬಿ ಹಲಗುಂಡೇಗೌಡ, ಪ್ರಕಾಶ್ ಗೌಡ, ದಯಾನಂದ್ ಗೌಡ, ಮಹೇಂದ್ರ ಗೌಡ ಸೇರಿದಂತೆ ಹಲವರು ಹಾಜರಿದ್ದರು.