ಕಾರವಾರ: ಭಾರತ್ ಬಂದ್ ಪ್ರತಿಭಟನೆ ವೇಳೆ ಮಹಿಳೆ ಸಾವು..!

Published : Jan 08, 2019, 03:17 PM ISTUpdated : Jan 08, 2019, 03:38 PM IST
ಕಾರವಾರ: ಭಾರತ್ ಬಂದ್ ಪ್ರತಿಭಟನೆ ವೇಳೆ ಮಹಿಳೆ ಸಾವು..!

ಸಾರಾಂಶ

ಭಾರತ್ ಬಂದ್ ಪ್ರತಿಭಟನೆ ನಿರತ ಮಹಿಳೆಯೊಬ್ಬರು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕಾರವಾರ, (ಜ.8): ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಇಂದು (ಮಂಗಳವಾರ) ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆ ಮೆರವಣಿಗೆ ವೇಳೆ ಅಂಗನವಾಡಿ ಸಹಾಯಕ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ.

ಮೃತ ಮಹಿಳೆಯನ್ನು ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಅಂಗನವಾಡಿ ಸಹಾಯಕಿ ಶಾಂತವ್ವ ಚಕ್ರಸಾಲಿ (57) ಎಂದು ಗುರುತಿಸಲಾಗಿದೆ.

ಬಂದ್ ಬಿಸಿ: ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ? ಇಲ್ಲಿದೆ ಪಟ್ಟಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ತಾಲೂಕು ಪಂಚಾಯತಿ ಎದುರು ಮಂಗಳವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಶಾಂತವ್ವ ಏಕಾಏಕಿ ಕುಸಿದು ಬಿದ್ದಿದ್ದಾರೆ.

ಜನವರಿ 8 ಮತ್ತು 9 ಭಾರತ್‌ ಬಂದ್‌: ಏನಿರುತ್ತೆ, ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ಕೂಡಲೇ  ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

PREV
click me!

Recommended Stories

ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!