ಕರ್ತವ್ಯದಲ್ಲಿದ್ದ ಎಎಸ್ಐ ಬೈಕ್ ಅಪಘಾತದಲ್ಲಿ ಸಾವು

By Suvarna News  |  First Published Jul 23, 2020, 10:56 AM IST

ಬೈಕ್‌ಗಳ‌ ನಡುವೆ ಅಪಘಾತ ಕರ್ತವ್ಯದಲ್ಲಿದ್ದ ಎಎಸ್ಐ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಶಿವಪುರ ಗ್ರಾಮದ ಬಳಿ ಘಟನೆ ನಡೆದಿದೆ.


ಕೋಲಾರ(ಜು.23): ಬೈಕ್‌ಗಳ‌ ನಡುವೆ ಅಪಘಾತ ಕರ್ತವ್ಯದಲ್ಲಿದ್ದ ಎಎಸ್ಐ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಶಿವಪುರ ಗ್ರಾಮದ ಬಳಿ ಘಟನೆ ನಡೆದಿದೆ.

ಕರ್ತವ್ಯದ ಮೇಲೆ‌ ತೆರಳುವ ವೇಳೆ ಎದುರಿಗೆ ಬಂದ ಬೈಕ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯ ಎಎಸ್ಐ ಮಂಜುನಾಥ್ (52) ಮೃತರು. ಸ್ಥಳಕ್ಕೆ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tap to resize

Latest Videos

ರಾಮ ಮಂದಿರಕ್ಕೆ ಪ್ರಧಾನಿ ಮೋದಿ ಅಡಿಗಲ್ಲು..!

ಶಿವಮೊಗ್ಗದಲ್ಲಿ ರಸ್ತೆ ಅಪಘಾತದಲ್ಲಿ ಒರ್ವ ಮೃತಪಟ್ಟಿದ್ದಾನೆ. ಲಾರಿ ಪಲ್ಟಿಯಾಗಿ ಬೈಕ್ ‌ಸಹಿತ ಸವಾರ ಲಾರಿ ಅಡಿ ಸಿಲುಕಿದ ಘಟನೆ ನಡೆದಿದೆ. ಶಿವಮೊಗ್ಗದ ಕೆಇಬಿ ಸರ್ಕಲ್ ನಲ್ಲಿ ಲಾರಿ ಮಗುಚಿ ಬಿದ್ದಿದ್ದು ಸೈಕಲ್ ಸವಾರನೊಬ್ಬ ಲಾರಿ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಗೊಂದಿ ಚಟ್ನಹಳ್ಳಿಯ ಹಾಲು ಹಾಕುವ ಅಜಯ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

click me!