ಕ್ರೀಡಾಪಟುಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೆರವು ನೀಡುತ್ತಿದ್ದು, ಲಭ್ಯವಾದ ಅವಕಾಶಗಳ ಸಮರ್ಥವಾಗಿ ಬಳಕೆ ಮಾಡಿಕೊಂಡು ಕ್ರೀಡಾ ಉನ್ನತಿ ಸಾಧಿಸಬೇಕೆಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.
ಚಿತ್ರದುರ್ಗ (ಅ.15): ಕ್ರೀಡಾಪಟುಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೆರವು ನೀಡುತ್ತಿದ್ದು, ಲಭ್ಯವಾದ ಅವಕಾಶಗಳ ಸಮರ್ಥವಾಗಿ ಬಳಕೆ ಮಾಡಿಕೊಂಡು ಕ್ರೀಡಾ ಉನ್ನತಿ ಸಾಧಿಸಬೇಕೆಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಸರ್ಕಾರಿ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ 14 ಮತ್ತು 17 ವರ್ಷದೊಳಗಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಬೆಂಗಳೂರು ವಿಭಾಗ ಮತ್ತು ರಾಜ್ಯ ಮಟ್ಟದ ಹೊನಲು ಬೆಳಕಿನ ಹ್ಯಾಂಡ್‌ಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು ದೈಹಿಕ ಶಿಕ್ಷಕರು ಗುಣಮಟ್ಟದ ತರಬೇತಿ ನೀಡಿ ಉತ್ತಮ ಕ್ರೀಡಾಪಟುಗಳನ್ನು ಸೃಷ್ಟಿಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಕ್ರೀಡೆಗೆ ವಿಶೇಷ ಆಧ್ಯತೆ ನೀಡುವುದರ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿದ್ದಾರೆ.
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕಗಳ ಪಡೆಯಲು ಭಾರತ ಮುನ್ನುಗ್ಗುತ್ತಿದೆ. ದೇಶ ಪ್ರತಿನಿಧಿಸುವಂತಹ ಕ್ರೀಡಾಪಟುಗಳೊಂದಿಗೆ ಚಹಾ, ಔತಣ ಕೂಟಗಳನ್ನು ಏರ್ಪಡಿಸಿ ಗೌರವಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೆಚ್ಚು ಹಣಕಾಸಿನ ನೆರವು ನೀಡುವುದರ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ ಮಾತನಾಡಿ, ಹೊನಲು ಬೆಳಕಿನ ಹ್ಯಾಂಡ್‌ಬಾಲ್ ಪಂದ್ಯಾವಳಿಗೆ ರಾಜ್ಯದ 11 ಜಿಲ್ಲೆಗಳಿಂದ 600 ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದರು.
ಪಾದಯಾತ್ರೆಯಲ್ಲಿ ಕನ್ನಡದ ಸ್ವಾಭಿಮಾನಿ ಕಿಚ್ಚು ಹೊತ್ತಿಸಿದ ರಾಹುಲ್ ಗಾಂಧಿ
ಚಿತ್ರದುರ್ಗ, ದಾವಣಗರೆ, ಬೆಂಗಳೂರು, ತುಮಕೂರು, ಶಿವಮೊಗ್ಗ, ರಾಮನಗರ, ಮಧುಗಿರಿ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಕ್ರೀಡಾ ತಂಡಗಳು ಭಾಗಿಯಾಗಿದ್ದವು. ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಸದಸ್ಯರಾದ ಫಕ್ರುದ್ದೀನ್, ಅಂಗಡಿ ಮಂಜಣ್ಣ, ರಮೇಶ್, ಸುರೇಶ್, ಕೃಷ್ಣಪ್ಪ, ಭಾಗ್ಯಮ್ಮ, ಅನುರಾಧ, ನಾಗಮ್ಮ, ಮಂಜುಳಾ, ಪರಮೇಶ್, ಡಯಟ್ ಪ್ರಾಂಶುಪಾಲ ಎಸ್.ಕೆ.ಬಿ ಪ್ರಸಾದ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಪರಶುರಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ತಿಪ್ಪೇಸ್ವಾಮಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕೆ.ಸಂಪತ್‌ಕುಮಾರ್, ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಗಳಾದ ಎ.ನೀಲಕಂಠಚಾರ್, ಎಸ್.ಶಿವಮೂರ್ತಿ, ವಿ.ಮನೋಹರ್, ಬಿ.ಎಸ್.ಶಿವಕುಮಾರ್, ಕೆ.ಸತ್ಯನಾರಾಯಣ, ಟಿ.ತಿಪ್ಪೇಸ್ವಾಮಿ, ಚಿದಾನಂದ ಸ್ವಾಮಿ, ಜಿ.ಎಸ್.ಶಿವಣ್ಣ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಗೌರವಾಧ್ಯಕ್ಷ ಕೆ.ಹನುಮಂತಪ್ಪ, ಎಲ್.ಸಿ ಮಂಜುನಾಥ. ಡಿ.ಸುರೇಶ್, ಸರ್ಕಾರಿ ನೌಕರರ ಪ್ರಾಥಮಿಕ ಶಾಲಾ ಸಂಘದ ನಿರ್ದೇಶಕಿ ಕೆ.ಲತಾ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಧನಂಜಯರೆಡ್ಡಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಂದ್ರಪ್ಪ ಇದ್ದರು.
ಯಡಿಯೂರಪ್ಪ ಬಿಟ್ರೆ ಬಿಜೆಪಿಯಲ್ಲಿ ಲೀಡರ್‌ಶಿಪ್ ಎಲ್ಲಿದೆ?: ಸಿದ್ದರಾಮಯ್ಯ
ಬಿಜೆಪಿ ಸರ್ಕಾರದಿಂದ ಬಡವರ ಪರ ಕೆಲಸ: ಮನೆಯ ಮೇಲಿನ ಸಾಲದ ಹೊರೆಯನ್ನು ಇಳಿಸುವ ಮೂಲಕ ಬಡವರ ಪರ ಕೆಲಸ ಬಿಜೆಪಿ ಸರ್ಕಾರ ಮಾಡಿದೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಜೆಜೆ ಹಟ್ಟಿನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಚಿತ್ರದುರ್ಗ ನಗರದ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಹಕ್ಕಪತ್ರ ಮತ್ತು ಸಾಲ ಮನ್ನಾ ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಸಿಗದಿದ್ದವರು ನನ್ನ ಗಮನಕ್ಕೆ ತಂದರೆ ಕೊಡಿಸಲಾಗುತ್ತದೆ. ನಗರ ಸುಮಾರು 12 ಸಾವಿರ ಕುಟುಂಬಗಳಿಗೆ ಆಸ್ತಿ ಹಕ್ಕುಪತ್ರ ನೀಡುವ ಕೆಲಸ ಮಾಡಲಾಗುತ್ತಿದೆ. ಒಂದು ವೇಳೆ ಹಕ್ಕುಪತ್ರ ಇಲ್ಲದಿದ್ದರೂ ಸಹ ಎಸ್ಸಿ , ಎಸ್ಟಿಗಳು 75 ಸಾವಿರ, ಇತರೆ ಜನಾಂಗ 1 ಲಕ್ಷ 10 ಸಾವಿರ ರು. ಕಟ್ಟಿದರೆ 7.5 ಲಕ್ಷ ಸರ್ಕಾರದಿಂದ ಮನೆ ನಿರ್ಮಾಣ ಮಾಡಲಾಗುತ್ತದೆ. ಒಮ್ಮೆ ಕೊಳಚೆ ಪ್ರದೇಶ ಎಂದು ಘೋಷಣೆ ಮಾಡಿದ ಮೇಲೆ ಅವರನ್ನು ಯಾರು ಬಿಡಿಸಲು ಸಾಧ್ಯವಿಲ್ಲ ಯಾರು ಭಯ ಪಡಬೇಡಿ ಎಂದು ಧೈರ್ಯ ತುಂಬಿದರು.