ಕರ್ತವ್ಯನಿರತ ಎಎಸ್‌ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ಪೊಲೀಸ್ ಠಾಣೆಯಲ್ಲಿ ಇಂದು ನಡೆದಿದೆ. ಶಿರಾ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಗಂಗಣ್ಣ (56) ಮೃತರು.
ತುಮಕೂರು (ಜು.07): ಕರ್ತವ್ಯನಿರತ ಎಎಸ್‌ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ಪೊಲೀಸ್ ಠಾಣೆಯಲ್ಲಿ ಇಂದು ನಡೆದಿದೆ. ಶಿರಾ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಗಂಗಣ್ಣ (56) ಮೃತರು. ಗಂಗಣ್ಣ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಕರ್ತವ್ಯದಲ್ಲಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಜೊತೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ತುಮಕೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹೃದಯಾಘಾತದಿಂದ ಎಎಸ್‌ಐ ಸಾವು: ಕರ್ತವ್ಯದ ವೇಳೆ ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್‌ಸ್ಪೆಕ್ಟರ್ ರಾಮಾಂಜನೇಯ (48) ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಸಂಬಂಧ ಆರೋಪಿತರಿಗೆ ನೋಟಿಸ್ ಜಾರಿಗೊಳಿಸಲು ಬಸವೇಶ್ವರ ನಗರಕ್ಕೆ ಬೆಳಗ್ಗೆ 10.30ರ ಸುಮಾರಿಗೆ ಎಎಸ್‌ಐ ರಾಮಾಂಜನೇಯ ತೆರಳಿದ್ದರು. ಆ ವೇಳೆ ಚಹಾ ಅಂಗಡಿ ಬಳಿ ಅವರು ಚಹಾ ಸೇವಿಸುವಾಗ ದಿಢೀರ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಎಎಸ್‌ಐ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಪೊಲೀಸ್ ನಿಯಂತ್ರಣ ಕೊಠಡಿಗೆ ಸಾರ್ವಜನಿಕರು ಕರೆ ಮಾಡಿದ್ದಾರೆ.
ಕೆಆರ್‌ಎಸ್‌ನಲ್ಲಿ ನೀರು ಕಡಿಮೆ: ಸಂಸದೆ ಸುಮಲತಾ ಅಂಬರೀಶ್ ಕಳವಳ
ಆಸ್ಪತ್ರೆಯಲ್ಲಿ ವೈದ್ಯರು ಹೃದಯಾಘಾತದಿಂದ ರಾಮಾಂಜನೇಯ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಸಮೀಪದ ತಾವರೆಕೆರೆ ಗ್ರಾಮದ ರಾಮಾಂಜನೇಯ ಅವರು, ತಮ್ಮ ಕುಟುಂಬದ ಜತೆ ಕಾಮಾಕ್ಷಿಪಾಳ್ಯದಲ್ಲಿ ನೆಲೆಸಿದ್ದರು. 1998ರಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಆರಂಭಿಸಿದ್ದ ಅವರು, ವಿವಿಧ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ ಬಳಿಕ ಎಎಸ್‌ಐ ಹುದ್ದೆಗೆ ಮುಂಬಡ್ತಿ ಪಡೆದಿದ್ದರು. ಪ್ರಸುತ್ತ ಹಲಸೂರು ಸಂಚಾರ ಠಾಣೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಮಗಳನ್ನು ಅಗಲಿದ್ದಾರೆ.
ಕಾಲು ಜಾರಿ ಕೆರೆಗೆ ಬಿದ್ದು ವಿಕಲನಚೇತನ ಸಾವು: ಕಳೆದ ಬುಧವಾರ ರಾತ್ರಿ ಮತ್ತು ಗುರುವಾರ ನಿರಂತರ ಸುರಿದ ಭಾರಿ ಮಳೆಗೆ ಮೂಡುಬಿದಿರೆ ತಾಲೂಕು ವ್ಯಾಪ್ತಿಯಲ್ಲಿ ಹಲವೆಡೆ ತಗ್ಗು ಪ್ರದೇಶಗಳು, ಮನೆಗಳು ಜಲಾವೃತವಾಗಿದ್ದು ಓರ್ವ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಘಟನೆ ನಡೆದಿದೆ. ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಂಟ್ರಾಡಿಯ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕಾಲು ಜಾರಿ ಕೆರೆಗೆ ಬಿದ್ದು, ಮೃತಪಟ್ಟಿದ್ದಾರೆ. ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತರು. ವಿಕಲಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು.
ಎತ್ತಿನಹೊಳೆ ಕಾಮಗಾರಿ ಸರ್ಕಾರ ಪೂರ್ಣಗೊಳಿಸಲಿದೆ: ವೀರಪ್ಪ ಮೊಯ್ಲಿ
ಮೂಡುಬಿದಿರೆ ಜ್ಯೋತಿನಗರ ಪರಿಸರದಲ್ಲಿ ಭಾರಿ ಸಾಲು ಮರವೊಂದು ಅಂಗಡಿಯೊಂದರ ಮೇಲೆ ಬೀಳುವುದು ಪವಾಡ ಸದೃಶ್ಯ ಎಂಬಂತೆ ತಪ್ಪಿದ್ದು ಸಂಭಾವ್ಯ ದುರಂತವೊಂದು ತಪ್ಪಿದಂತಾಗಿದೆ. ಕೆಲವೆಡೆ ಮನೆಯೊಳಗೆ ನೀರು ಒಸರಿನಂತೆ ಹರಿದು ಬರುವ ಸಮಸ್ಯೆಗಳು ಕಾಣಿಸಿಕೊಂಡಿವೆ. ಮನೆಗಳು ಜಲಾವೃತ: ಪುರಸಭೆ ವ್ಯಾಪ್ತಿಯ, ಆಲಂಗಾರು ಉಳಿಯ, ಬೈಲಾರೆಯ ಮೂರು ಮನೆಗಳು ಜಲಾವೃತಗೊಂಡಿವೆ. ಇಲ್ಲಿನ ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದೆ. ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಯರ್ ಪುಂಡು ಕಾಲನಿಯಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರು ರಸ್ತೆ, ತೋಟದತ್ತ ಸಾಗಿ ತುಂಬಿಕೊಂಡಿತ್ತು.