ಕರ್ನಾಟಕ ರಾಜ್ಯೋತ್ಸವ ದಿನವೇ ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ರಾ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ?

By Girish Goudar  |  First Published Nov 1, 2024, 6:57 PM IST

ನಮಗೂ ಸಹ ಅವರ ತರ ಐದು ಸಾವಿರ ಕೋಟಿ ನೀಡಬೇಕು.  ನಮಗೂ ಅವರ ತರ ವಿಶೇಷ ಅಭಿವೃದ್ಧಿ ಮಂಡಳಿ ರಚನೆಗೆ ಮಾಡಬೇಕು.  ನಮಗೆ ಹಣ ಕೊಟ್ಟರೆ ಪ್ರತ್ಯೇಕ ರಾಜ್ಯದ ಕೂಗು ಕೇಳುವುದಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟ ಅಥಣಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ 
 


ಚಿಕ್ಕೋಡಿ(ನ.01):  ಕರ್ನಾಟಕ ರಾಜ್ಯೋತ್ಸವ ದಿನವೇ ಅಥಣಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಅಸಮಾಧಾನ ಹೊರಹಾಕಿದ್ದಾರೆ. ಹೌದು,  ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ನಡುವೆ ಆಗುತ್ತಿರುವ ಅನ್ಯಾಯ ಬಗ್ಗೆ ಶಾಸಕ ಲಕ್ಷ್ಮಣ ಸವದಿ ಅಸಮಾಧಾನ ಹೊರಹಾಕಿದ್ದಾರೆ. 

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ, ಕಲ್ಯಾಣ ಕರ್ನಾಟಕ ರೀತಿಯಲ್ಲಿ ಕಿತ್ತೂರು ಕರ್ನಾಟಕಕ್ಕೆ ಆದ್ಯತೆ ನೀಡುವಂತೆ ಆಗ್ರಹಿಸಿದ್ದಾರೆ.  ಕಲ್ಯಾಣ ಕರ್ನಾಟಕ ಮಂಡಳಿಗೆ ವಿಶೇಷ ಐದು ಸಾವಿರ ಕೋಟಿ ಅನುದಾನ ನೀಡುತ್ತಾರೆ. ಆ ಭಾಗದ ಹಲವು ಜಿಲ್ಲೆಗಳು ಅಭಿವೃದ್ಧಿ ಆಗುತ್ತಿದೆ. ಕಿತ್ತೂರು ಕರ್ನಾಟಕಕ್ಕೆ ಅಭಿವೃದ್ಧಿ ಮಂಡಳಿ ರಚಿಸುವಂತೆ ಶಾಸಕ ಸವದಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. 

Tap to resize

Latest Videos

ಸಿಎಂ ಬದಲಾವಣೆ ಪ್ರಶ್ನೆಯೇ ಬರಲ್ಲ: ಸಚಿವ ಸತೀಶ್ ಜಾರಕಿಹೊಳಿ‌ಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟ ಲಕ್ಷ್ಮಣ ಸವದಿ!

ನಮಗೂ ಸಹ ಅವರ ತರ ಐದು ಸಾವಿರ ಕೋಟಿ ನೀಡಬೇಕು.  ನಮಗೂ ಅವರ ತರ ವಿಶೇಷ ಅಭಿವೃದ್ಧಿ ಮಂಡಳಿ ರಚನೆಗೆ ಸವದಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  ನಮಗೆ ಹಣ ಕೊಟ್ಟರೆ ಪ್ರತ್ಯೇಕ ರಾಜ್ಯದ ಕೂಗು ಕೇಳುವುದಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿದ್ದಾರೆ. 

ಅಭಿವೃದ್ಧಿ ಆಗಬೇಕಾದರೆ ಕಿತ್ತೂರು ಕರ್ನಾಟಕಕ್ಕೆ ಅನುದಾನ ನೀಡಬೇಕು ಎಂದು ಅಥಣಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಆಗ್ರಹಿಸಿದ್ದಾರೆ. 

click me!