ಬಿಜೆಪಿ ಕಾರ್ಯಕರ್ತನಿಗೆ ಮಾರಣಾಂತಿಕ ಹಲ್ಲೆ

Kannadaprabha News   | Asianet News
Published : Feb 06, 2020, 07:56 AM ISTUpdated : Feb 06, 2020, 08:20 AM IST
ಬಿಜೆಪಿ ಕಾರ್ಯಕರ್ತನಿಗೆ ಮಾರಣಾಂತಿಕ ಹಲ್ಲೆ

ಸಾರಾಂಶ

ನಾಲ್ವರ ತಂಡವೊಂದು ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಮೂಲ್ಕಿ ಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ಮುಂಚೂರು ನಿವಾಸಿ ಯಶೋಧರ(28) ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು(ಫೆ.06): ನಾಲ್ವರ ತಂಡವೊಂದು ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆಗೈದು ಕೊಲೆ ಬೆದರಿಕೆಯೊಡ್ಡಿರುವ ಘಟನೆ ಮೂಲ್ಕಿ ಸುರತ್ಕಲ್‌ ಠಾಣಾ ವ್ಯಾಪ್ತಿಯ ಮುಂಚೂರು ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಮುಂಚೂರು ನಿವಾಸಿ ಯಶೋಧರ(28) ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಶೋಧರ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದು, ಸ್ಥಳೀಯವಾಗಿ ಪಕ್ಷ ಸಂಘಟನೆಯಲ್ಲಿ ದುಡಿಯುತ್ತಿದ್ದರು ಎನ್ನಲಾಗಿದೆ.

ಸತ್ತವರ ಹೆಸರಲ್ಲೂ ಮತದಾನ: ರಮಾನಾಥ ರೈ ಆರೋಪ

ಕಳೆದ ಬಾರಿ ವಿಧಾನಸಭಾ ಚುನಾವಣೆ ಸಂದರ್ಭ ಪಕ್ಷದ ಪರ ದುಡಿದಿದ್ದ ಅವರ ಮೇಲೆ ಕಣ್ಣಿಟ್ಟಿದ್ದ ತಂಡ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ. ದಿವಾಕರ, ದಿನೇಶ್‌ ಶೆಟ್ಟಿ, ಅಶ್ವಿತ್‌ ಕುಲಾಲ್‌, ಯಶೋಧರ ಅಗರಮೇಲು ಹಲ್ಲೆ ನಡೆಸಿದ ಆರೋಪಿಗಳಾಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿದ್ದಾರೆ. ಸುರತ್ಕಲ್‌ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!