Religious Conversion: ದಲಿತ ಮಹಿಳೆ ಮೇಲೆ ಸುಡುವ ಸಾಂಬಾರು ಎಸೆದು ಹಲ್ಲೆ ಯತ್ನ

By Suvarna News  |  First Published Jan 1, 2022, 3:09 PM IST

ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ದಲಿತ ಕುಟುಂಬದ ಮೇಲೆ ಹಲ್ಲೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 29ರಂದು ತುಕ್ಕಾನಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಏಳು ಜನರ ವಿರುದ್ಧ ಹಲ್ಲೆ ಆರೋಪವನ್ನು ಘಟಪ್ರಭಾ ಪೊಲೀಸ್ ಠಾಣೆಗೆ ಕವಿತಾ ಕರಗಣವಿ ಎಂಬುವರು ದೂರು ನೀಡಿದ್ದಾರೆ.


ಬೆಳಗಾವಿ (ಜ. 1): ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ದಲಿತ ಕುಟುಂಬದ ಮೇಲೆ ಹಲ್ಲೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 29ರಂದು ತುಕ್ಕಾನಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಏಳು ಜನರ ವಿರುದ್ಧ ಹಲ್ಲೆ ಆರೋಪವನ್ನು ಘಟಪ್ರಭಾ ಪೊಲೀಸ್ ಠಾಣೆಗೆ ಕವಿತಾ ಕರಗಣವಿ ಎಂಬುವರು ದೂರು ನೀಡಿದ್ದಾರೆ.

ಪ್ರಾರ್ಥನೆ ಮಾಡುತ್ತಿದ್ದ ವೇಳೆ ಮನೆಗೆ ನುಗ್ಗಿ, ಜನರನ್ನು ಕ್ರೈಸ್ತ ಧರ್ಮಕ್ಕೆ ಏಕೆ ಮತಾಂತರ ಮಾಡಿಸುತ್ತಿದ್ದೀರಿ ಅಂತಾ ಪ್ರಶ್ನಿಸಿ, ಮಹಿಳೆ ಮೇಲೆ ಸುಡುವ ಸಾಂಬಾರು ಎಸೆಯಲು ಯತ್ನಿಸಿದ್ದರೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ತುಕ್ಕಾನಟ್ಟಿಯ ಶಿವಾನಂದ ಗೋಟೂರು, ರಮೇಶ ದಂಡಾಪೂರ, ಪರಸಪ್ಪ ಬಾಬು ಫಕ್ಕೀರಪ್ಪ ಬಾಗೇವಾಡಿ, ಕೃಷ್ಣಾ ಕಾನಿಟ್ಕರ್, ಕಂಕನವಾಡಿಯ ಚೇತನ ಗಡಾಡಿ, ಹತ್ತರಕಿ ಗ್ರಾಮದ ಮಹಾಂತೇಶ ಹತ್ತರಗಿ ವಿರುದ್ಧ ದೂರು ದಾಖಲಾಗಿದೆ.

Tap to resize

Latest Videos

ಘಟನೆ ನಡೆದು ಎರಡು ದಿನ ಕಳೆದರೂ ಇನ್ನೂ ಪೋಲಿಸರು ಯಾರನ್ನೂ ಬಂಧಿಸದೆ, ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆಂದು ನೊಂದ ಕುಟುಂಬಸ್ಥರು ಆರೋಪಿಸಿದ್ದು, ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Robbery in Bengaluru: ಮಾಳಗಾಳ ಮೇಲ್ಸೇತುವೆಯಲ್ಲಿ ಕೋಳಿ ಸಾಗಣೆ ಟೆಂಪೋ ಅಡ್ಡಗಟ್ಟಿ ₹1.30 ಲಕ್ಷ ದರೋಡೆ!

ಕೊರಗರ ಮದುವೆಗೆ ನುಗ್ಗಿ ಪೊಲೀಸ್‌ ದಾಂಧಲೆ: ಕೊರಗ ಸಮುದಾಯದ ಯುವಕನ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಅಳವಡಿಸಿದ್ದನ್ನು ಆಕ್ಷೇಪಿಸಿ ಮದುಮಗನೂ ಸೇರಿದಂತೆ ಮೆಹಂದಿ ಕಾರ್ಯಕ್ರಮಕ್ಕೆ ಬಂದ ಕೊರಗ ಸಮುದಾಯದವರ ಮೇಲೆ ಪೊಲೀಸರು ಮನಬಂದಂತೆ ಥಳಿಸಿದ ಘಟನೆ ರಾಜ್ಯ ಸಮಾಜ ಕಲ್ಯಾಣ ಸಚಿವರ ತವರೂರಾದ ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಮದುಮಗ ರಾಜೇಶ್‌, ಕೊರಗ ಸಮುದಾಯದ ಮುಖಂಡ ಗಣೇಶ್‌ ಕೊರಗ, ಸುಂದರಿ, ಲಕ್ಷ್ಮೇ, ಬೇಬಿ, 12 ವರ್ಷ ಪ್ರಾಯದ ಬಾಲಕಿ, ಮದುಮಗನ ತಾಯಿ ಗಿರಿಜಾ, ಪ್ರವೀಣ್‌, ಶೇಖರ್‌ ಮೊದಲಾದವರಿಗೆ ಕೈ, ಕಾಲು, ತಲೆ, ಕುತ್ತಿಗೆ ಮೊದಲಾದೆಡೆ ಗಾಯಗಳಾಗಿವೆ.

ಅಂಗಡಿಯವನಿಗೆ ಅಂಕಲ್ ಅಂದಿದ್ದೆ ತಪ್ಪಾಯ್ತು, ಯುವತಿ ಆಸ್ಪತ್ರೆಗೆ!

ತನಿಖೆಯ ಭರವಸೆ: ಘಟನೆ ನಡೆದ ಕೊರಗ ಕಾಲನಿಗೆ ಬ್ರಹ್ಮಾವರ ಸರ್ಕಲ್‌ ಇನ್ಸ್‌ಪೆಕ್ಟರ್‌ ಅನಂತ ಪದ್ಮನಾಭ ಮಂಗಳವಾರ ಭೇಟಿ ನೀಡಿದರು. ಕೊರಗ ಸಮುದಾಯದವರು, ಸ್ಥಳೀಯ ನಾಗರಿಕರು ಮಾತನಾಡಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಪಿಐ, ಘಟನೆ ಬಗ್ಗೆ ಈಗಾಗಾಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ವೀಡಿಯೋ ದೃಶ್ಯಾವಳಿಗಳನ್ನು ಗಮನಿಸಿ ಸೂಕ್ತ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿದರು.

click me!