ಊಟ ಮಾಡ್ತಿದ್ದವನನ್ನು ಮನೆಯಿಂದ ಹೊರ ಕರೆಸಿ ಗಂಭೀರವಾಗಿ ಹಲ್ಲೆ ಮಾಡಿದ್ರು

By Suvarna News  |  First Published Dec 30, 2019, 9:45 AM IST

ಊಟ ಮಾಡುತ್ತಿದ್ದವನನ್ನು ಮನೆಯಿಂದ ಹೊರಗೆ ಕರೆಸಿ ಇರಿದು ಹಲ್ಲೆ  ಮಾಡಿರುವ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 


ಶಿವಮೊಗ್ಗ [ಡಿ.30]: ಭದ್ರಾವತಿ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮದಲ್ಲಿ ಶಾಂತಕುಮಾರ್ [50] ಎಂಬುವವರ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದೆ. 

Tap to resize

Latest Videos

ಶನಿವಾರ ರಾತ್ರಿ ಶಾಂತಕುಮಾರ್ ಅವರು ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಆಗಮಿಸಿದ ದುಷ್ಕರ್ಮಿಗಳು ಮನೆಯಿಂದ ಹೊರಗೆ ಕರೆಸಿಕೊಂಡು ಏಕಾ ಏಕಿ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. 

ಈ ವೇಳೆ ಗಂಭೀರವಾಗಿ ಗಾಯಗೊಂಡ ಶಾಂತಕುಮಾರ್ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಶಾಂತಕುಮಾರ್ ಮೇಲೆ ನಡೆದ ಹಲ್ಲೆ ಕಾರಣವೇನು ಎನ್ನುವುದು ತಿಳಿದು ಬಂದಿಲ್ಲ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

click me!