ತಪಾಸಣೆ ವೇಳೆ ವ್ಯಕ್ತಿಯೋರ್ವ ಮೃತಪಟ್ಟಿದ್ದು ಇದರಿಂದ ಟ್ರಾಫಿಕ್ ಪೊಲೀಸರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ್ದು ಪ್ರಕರಣ ಸಂಬಂಧ 13 ಮಂದಿಯನ್ನು ಬಂಧಿಸಲಾಗಿದೆ.
ಮೈಸೂರು (ಮಾ.24): ಸಂಚಾರಿ ಪೊಲೀಸರು ಸೋಮವಾರ ವಾಹನ ತಪಾಸಣೆ ನಡೆಸುತ್ತಿರುವ ವೇಳೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪು ಪೊಲೀಸರ ಮೇಲೆ ಹಲ್ಲೆ ನಡೆಸಿ, ಪೊಲೀಸ್ ವಾಹನವನ್ನು ಜಖಂಗೊಳಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮೂವರು ಪೊಲೀಸರು ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಲವರ್ ಗಂಡನ ಕೊಲ್ಲಲು ಪ್ರಿಯತಮನಿಂದ ಸುಪಾರಿ : ಕೊಲೆಗಾರಗೆ ಜೀವಾವಧಿ ಶಿಕ್ಷೆ
ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ, ದೊಂಬಿ, ಸರ್ಕಾರಿ ಕೆಲಸಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರ ವರ್ತನೆಗೆ ಖಂಡನೆ:
ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ ದಂಡ ಹಾಕುವ ನೆಪದಲ್ಲಿ ಸಂಚಾರ ಪೊಲೀಸರು ವಾಹನಗಳನ್ನು ತಡೆದು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಹಾಗೂ ಸಂಚಾರ ಪೊಲೀಸರ ವರ್ತನೆ ಸರಿಯಲ್ಲ ಎಂದು ಮೈಸೂರು- ಹುಣಸೂರು ರಸ್ತೆಯಲ್ಲಿರುವ ಹಿನಕಲ್ ಹೊರ ವರ್ತುಲ ರಸ್ತೆಯ ಜಂಕ್ಷನ್‌ನಲ್ಲಿ ಸಾರ್ವಜನಿಕರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.