ಹಾಸನ: ಆಟೋದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಚಾಲಕ

Suvarna News   | Asianet News
Published : Dec 13, 2019, 03:06 PM IST
ಹಾಸನ: ಆಟೋದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಚಾಲಕ

ಸಾರಾಂಶ

ವ್ಯಕ್ತಿಯೋರ್ವ ಆಟೋದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು| ಎಂ.ಜಿ. ರಸ್ತೆಯಲ್ಲಿರುವ ಅನ್ನಪೂರ್ಣೇಶ್ವರಿ ವೈನ್ಸ್ ಬಳಿ ಆಟೋದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್| ಹಲವು ವರ್ಷಗಳಿಂದ ಆಟೋ ಚಾಲನೆ ಮಾಡುಕೊಂಡು ಜೀವನ ಸಾಗಿಸುತ್ತಿದ್ದರು ಶಿವಕುಮಾರ್| ಶಿವಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ| 

ಹಾಸನ(ಡಿ.13): ವ್ಯಕ್ತಿಯೋರ್ವ ಆಟೋದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಇಂದು(ಶುಕ್ರವಾರ) ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನ 52 ವರ್ಷದ ಶಿವಕುಮಾರ್ ಎಂದು ಗುರುತಿಸಲಾಗಿದೆ. 

ನಗರದ ವಿವೇಕನಗರದ ನಿವಾಸಿಯಾದ ಶಿವಕುಮಾರ್ ಅವರು ಎಂ.ಜಿ. ರಸ್ತೆಯಲ್ಲಿರುವ ಅನ್ನಪೂರ್ಣೇಶ್ವರಿ ವೈನ್ಸ್ ಬಳಿ ಆಟೋದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಕುಮಾರ್ ಅವರು ಹಲವು ವರ್ಷಗಳಿಂದ ಆಟೋ ಚಾಲನೆ ಮಾಡುಕೊಂಡು ಜೀವನ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಶಿವಕುಮಾರ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. 
 

PREV
click me!

Recommended Stories

ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!
BREAKING: ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ, ಚಿಕ್ಕಮಲ್ಲನಹೊಳೆ ಗ್ರಾಮಸ್ಥರಲ್ಲಿ ಆತಂಕ