ಪ್ಯಾಸೆಂಜರ್ ಆಟೋಗೆ ಲಾರಿ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದುಂಡನಹಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದೆ.
ಮಂಡ್ಯ(ಫೆ.05): ಪ್ಯಾಸೆಂಜರ್ ಆಟೋಗೆ ಲಾರಿ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದುಂಡನಹಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದೆ.
ಪ್ಯಾಸೆಂಜರ್ ಆಟೋಗೆ ಲಾರಿ ಡಿಕ್ಕಿಯಾಗಿದ್ದು, ಆಟೋದಲ್ಲಿದ್ದ 3 ಜನ ಸ್ಥಳದಲ್ಲೇ ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮದ್ದೂರು ತುಮಕೂರು ರಸ್ತೆಯಲ್ಲಿರೊ ದುಂಡನಹಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದೆ.
ಮದುವೆ ನಿರಾಕರಿಸಿದ ಅತ್ತೆ ಮಗಳ ಕಿಡ್ನಾಪ್, ಬಲವಂತವಾಗಿ ತಾಳಿ ಕಟ್ಟಿದ!
ಚಲಿಸುತ್ತಿದ್ದ ಆಟೋಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯ ಪ್ರಶಾಂತ್ (25) ಮದ್ದೂರು ತಾಲೂಕಿನ ಮಲ್ಲನಕುಪ್ಪೆ ಗ್ರಾಮದ ಸೂರ್ಯ(24) ದುಂಡನಹಳ್ಳಿ ಗ್ರಾಮದ ಅಭಿ (25) ಮೃತ ಯುವಕರು. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.