ಉಡುಪಿ ಜಿಲ್ಲೆಯಲ್ಲಿ ಆಟೋ ಪ್ರಯಾಣ ದರ ಈಗಿನ ಕನಿಷ್ಠ 25 ರು.ಗಳನ್ನು 30 ರು.ಗೆ ಹೆಚ್ಚಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಹೆಚ್ಚಳವಾದ ದರ ಏ.1 ರಿಂದ ಅನ್ವಯವಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಉಡುಪಿ(ಫೆ.07): ಉಡುಪಿ ಜಿಲ್ಲೆಯಲ್ಲಿ ಆಟೋ ಪ್ರಯಾಣ ದರ ಈಗಿನ ಕನಿಷ್ಠ 25 ರು.ಗಳನ್ನು 30 ರು.ಗೆ ಹೆಚ್ಚಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಹೆಚ್ಚಳವಾದ ದರ ಏ.1 ರಿಂದ ಅನ್ವಯವಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಟೋ ಪ್ರಯಾಣ ದರ ಪರಿಷ್ಕರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.
ಮಂತ್ರಿಮಂಡಲ ವಿಸ್ತರಣೆ ರಾಜ್ಯದ ಕರಾಳ ದಿನ: ಉಗ್ರಪ್ಪ
undefined
ಜಿಲ್ಲೆಯಲ್ಲಿ 2014 ರಲ್ಲಿ ಆಟೋ ಪ್ರಯಾಣ ಪರಿಷ್ಕರಿಸಿದ ನಂತರ ದರ ಪರಿಷ್ಕರಣೆ ಆಗಿಲ್ಲ. ವಾಹನದ ವಿಮೆ, ಬಿಡಿಭಾಗ ಹೆಚ್ಚಳವಾಗಿದ್ದು, ಆಟೋ ಪ್ರಯಾಣದ ದರವನ್ನು ಹೆಚ್ಚಿಸುವಂತೆ ಆಟೋ ಚಾಲಕ ಸಂಘಟನೆಗಳ ಮುಖಂಡರು ಮತ್ತು ಚಾಲಕರು ಮಾಡಿದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಕನಿಷ್ಠ ಪ್ರಯಾಣ ದರವನ್ನು 30 ರು.ಗಳಿಗೆ ಹೆಚ್ಚಳ ಮಾಡಲು ಒಪ್ಪಿಗೆ ನೀಡಿದ್ದು, ರನ್ನಿಂಗ್ ದರವನ್ನು 17 ರು.ಗಳಿಗೆ ನಿಗದಿಪಡಿಸಲಾಯಿತು. ಅಲ್ಲದೇ ಕಡ್ಡಾಯವಾಗಿ ಎಲ್ಲ ಆಟೋಗಳಲ್ಲಿ ಮೀಟರ್ ಅಳವಡಿಸಿ, ಆ ಪ್ರಕಾರವೇ ಪ್ರಯಾಣಿಕರಿಂದ ದರ ಪಡೆಯುವಂತೆ ಜಿ. ಜಗದೀಶ್ ಆಟೋ ಚಾಲಕರಿಗೆ ಸೂಚಿಸಿದರು.
ನಂಗೂ ಡಿಸಿಎಂ ಆಗೋ ಆಸೆ ಇದೆ ಎಂದ್ರು ಶ್ರೀರಾಮುಲು...
ಆಟೋ ಚಾಲಕರು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ ಹಾಗೂ ಕಡ್ಡಾಯವಾಗಿ ಸಂಚಾರಿ ನಿಯಮಗಳ ಪಾಲನೆ ಮಾಡಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಿಂದ ಬರಬೇಡಿ, ಆಟೋಗಳಲ್ಲಿ ನಿಗದಿತ ಸಂಖ್ಯೆಯ ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಿರಿ, ಶಾಲಾ ಮಕ್ಕಳನ್ನು ಕರೆದೊಯ್ಯುವಾಗ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಿದರು.
ಆಟೋ ರಿಕ್ಷಾಗಳ ವಲಯ ನಿಗದಿ ಕುರಿತಂತೆ ಇರುವ ಗೊಂದಲಗಳ ಕುರಿತಂತೆ ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ ಮತ್ತು ವಿವಿಧ ರಿಕ್ಷಾ ಸಂಘಟನೆಗಳ ಮುಖಂಡರು ಹಾಗೂ ಆಟೋ ಚಾಲಕರು ಉಪಸ್ಥಿತರಿದ್ದರು.