ಹೊಸಪೇಟೆ: ಹಂಪಿಯಲ್ಲಿ ದೇವರ ದರ್ಶನಕ್ಕೂ ಬಂತು ಡ್ರೆಸ್‌ ಕೋಡ್‌..!

By Kannadaprabha News  |  First Published Jan 28, 2024, 1:15 PM IST

ಹಂಪಿಯು ಬರೀ ಪ್ರವಾಸಿ ತಾಣವಲ್ಲ, ಅದು ವಿರೂಪಾಕ್ಷೇಶ್ವರ ದೇವರ ಪವಿತ್ರ ತಾಣವೂ ಆಗಿದೆ ಎಂದು ಮನವರಿಕೆ ಮಾಡಿ, ಸಾಂಪ್ರದಾಯಿಕ ಶೈಲಿಯ ಬಟ್ಟೆ ಧರಿಸಿ ದೇವರ ದರ್ಶನ ಪಡೆಯಲು ತಿಳಿಸಿ ಜನಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ 


ಹೊಸಪೇಟೆ(ಜ.28):  ಪ್ರಸಿದ್ಧ ಪ್ರವಾಸಿ ತಾಣವಾದ ವಿಜಯನಗರ ಜಿಲ್ಲೆಯ ಹಂಪಿಗೆ ಬರುವ ಪ್ರವಾಸಿಗರು ಹಾಗೂ ಭಕ್ತಾದಿಗಳಲ್ಲಿ ಭಕ್ತಿ ಭಾವನೆ ಮೂಡಿಸುವ ಸದುದ್ದೇಶದಿಂದ ಜಿಲ್ಲಾಡಳಿತವು ಹೊಸ ಹಜ್ಜೆ ಇರಿಸಿದೆ. ದೇವಸ್ಥಾನಗಳಲ್ಲಿ ಸಾಂಪ್ರದಾಯಿಕ ಬಟ್ಟೆ ಧರಿಸಲು ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಅವರು ಶುಕ್ರವಾರ ವಿರೂಪಾಕ್ಷೇಶ್ವರನ ಸನ್ನಿಧಿಯಲ್ಲಿ ತಾವೇ ಖುದ್ದು ಭಕ್ತರಿಗೆ, ಪ್ರವಾಸಿಗರಿಗೆ ಪಂಚೆ, ಶಲ್ಯ ನೀಡಿ, ತುಂಡುಡುಪು ಧರಿಸಿ ದೇವಸ್ಥಾನ ಪ್ರವೇಶಿಸದಂತೆ ಜಾಗೃತಿ ಮೂಡಿಸಿದರು.

ಈ ಮೂಲಕ ಜನರಲ್ಲಿ ದೇವಾಲಯದ ಬಗ್ಗೆ ಭಕ್ತಿ, ಭಾವನೆ ಬರುವಂತೆ ಇತರರಿಗೆ ಪ್ರೇರೇಪಣೆ ನೀಡಿ, ಜೀನ್ಸ್ ಪ್ಯಾಂಟ್ ಮತ್ತು ಬರ್ಮುಡಾ ತೊಟ್ಟು ಬಂದ ಭಕ್ತರೊಂದಿಗೆ ಆತ್ಮೀಯವಾಗಿ ಮಾತನಾಡಿದರು. ಹಂಪಿಯು ಬರೀ ಪ್ರವಾಸಿ ತಾಣವಲ್ಲ, ಅದು ವಿರೂಪಾಕ್ಷೇಶ್ವರ ದೇವರ ಪವಿತ್ರ ತಾಣವೂ ಆಗಿದೆ ಎಂದು ಮನವರಿಕೆ ಮಾಡಿದರು. ಸಾಂಪ್ರದಾಯಿಕ ಶೈಲಿಯ ಬಟ್ಟೆ ಧರಿಸಿ ದೇವರ ದರ್ಶನ ಪಡೆಯಲು ತಿಳಿಸಿ ಜನಜಾಗೃತಿ ಮೂಡಿಸಿದರು.

Tap to resize

Latest Videos

1200 ಪೆನ್‌ ರಿಫೀಲ್‌ನಲ್ಲಿ ಅರಳಿದ ಹಂಪಿ ಕಲ್ಲಿನ ತೇರು!

ಇದೀಗ ದೇವಸ್ಥಾನವನ್ನು ಸಂಪೂರ್ಣ ಗಣಕೀಕರಣಗೊಳಿಸುವುದಕ್ಕೆ ಸಹ ಜಿಲ್ಲಾಧಿಕಾರಿ ವಿಶೇಷ ಕ್ರಮವಹಿಸಿದ್ದು, ಮೊದಲನೇಯದಾಗಿ ಶಾಸಕರಿಂದಲೇ ಹಣ ಪಡೆದು ಗಣಕೀಕೃತ ರಸೀದಿ ನೀಡಿ ಸೇವೆಗೆ ಜಿಲ್ಲಾಧಿಕಾರಿ ಅವಕಾಶ ಕಲ್ಪಿಸಿದರು. ಇದರಿಂದ ಸೋರಿಕೆ ತಡೆದು ದೇವಸ್ಥಾನಕ್ಕೆ ಹೆಚ್ಚಿನ ಆದಾಯ ಬರುವಂತಾಗಲಿದೆ. ಜತೆಗೆ ದೇವಸ್ಥಾನದಲ್ಲಿ ಮೆಟಲ್ ಡಿಟೆಕ್ಟರ್‌ ಕೂಡಾ ಅಳವಡಿಸಲು ಜಿಲ್ಲಾಡಳಿತ ಕ್ರಮ ವಹಿಸಿತು. 

click me!