ಶಿರಸಿಯಲ್ಲಿ ಎರಡನೇ ಮದುವೆಗೆ ತಯಾರಾಗಿದ್ದ ವೈದ್ಯನ ಭೀಕರ ಹತ್ಯೆ! ಆರೋಪಿಯ ಹೆಸರು ಬಹಿರಂಗಪಡಿಸದ ಪೊಲೀಸ್

Published : Apr 20, 2026, 05:10 PM IST
Ayurvedic Doctor killed in Sirsi

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಎರಡನೇ ಮದುವೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಆಯುರ್ವೇದ ವೈದ್ಯ ಡಾ. ರಮೇಶ್ ಕಲ್ಗುಟ್ಕರ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೊಲೀಸರ ತನಿಖೆಯ ಪ್ರಕಾರ, ಮದುವೆಗೆಂದು ಖರೀದಿಸಿದ್ದ ಚಿನ್ನಾಭರಣಗಳ ಆಸೆಗಾಗಿ ಅವರ ಸ್ನೇಹಿತನೇ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಸಂಭವಿಸಿದ ಆಯುರ್ವೇದ ವೈದ್ಯರ ಹತ್ಯೆ ಪ್ರಕರಣವು ಭಾರೀ ಸಂಚಲನ ಮೂಡಿಸಿದೆ. ಕೆಎಚ್‌ಬಿ ಕಾಲೋನಿಯ ಹೊಸ ಬಡಾವಣೆಯಲ್ಲಿ ವಾಸವಿದ್ದ ಡಾ. ರಮೇಶ್ ಎಫ್. ಕಲ್ಗುಟ್ಕರ್ ಅವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ.

ಭಾನುವಾರ ಬೆಳಗ್ಗೆ ಸಂಬಂಧಿಕರು ಮನೆಗೆ ಭೇಟಿ ನೀಡಿದಾಗ, ವೈದ್ಯರು ತಮ್ಮ ನಿವಾಸದಲ್ಲೇ ಅವರ ಮೃತದೇಹ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಶಿರಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎರಡನೇ ಮದುವೆಗೆ ರೆಡಿಯಾಗಿದ್ದ ವೈದ್ಯ

ಡಾ. ರಮೇಶ್ ಅವರು ಹುಬ್ಬಳ್ಳಿ ರಸ್ತೆಯಲ್ಲಿ ಆಯುರ್ವೇದಿಕ್ ಕ್ಲಿನಿಕ್ ನಡೆಸುತ್ತಿದ್ದರು. ಐದು ತಿಂಗಳ ಹಿಂದೆ ಅವರ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದು, ನಂತರ ಅವರು ತಮ್ಮ ಪತ್ನಿಯ ತಂಗಿಯೊಂದಿಗೆ ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು. ಮಂಜಗುಣಿಯ ದೇವಸ್ಥಾನದಲ್ಲಿ ವಿವಾಹ ನಿಗದಿಯಾಗಿದ್ದು, ಮದುವೆಗೆ ಕೇವಲ ಒಂದು ದಿನ ಬಾಕಿ ಇರುವಾಗಲೇ ಈ ದಾರುಣ ಘಟನೆ ನಡೆದಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತ್ವರಿತವಾಗಿ ತನಿಖೆ ಆರಂಭಿಸಿ, ಹತ್ಯೆಯ ರಹಸ್ಯವನ್ನು ಭೇದಿಸಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಡಾ. ರಮೇಶ್ ಅವರು ಮದುವೆಗೆಂದು ಚಿನ್ನಾಭರಣಗಳನ್ನು ಖರೀದಿ ಮಾಡಿದ್ದರು. ಈ ವಿಷಯ ತಿಳಿದಿದ್ದ ಅವರ ಸ್ನೇಹಿತನೇ ಹಣದ ಆಸೆಗಾಗಿ ಹತ್ಯೆ ನಡೆಸಿರುವುದು ಬಹಿರಂಗವಾಗಿದೆ. ಹತ್ಯೆ ಮಾಡಿದ ನಂತರ ಆರೋಪಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ವಿವಾಹಕ್ಕೆ ಒಂದು ದಿನ ಮುಂಚೆ ಕೊಲೆ

ವಿವಾಹದ ಮೊದಲ ದಿನ ಮನೆಗೆ ಬಂದ ಸಂಬಂಧಿಕರಿಗೆ ವೈದ್ಯನ ಕೊಲೆಯಾಗಿರುವುದು ತಿಳಿದು ಬಂದಿದೆ. ಆರೋಪಿ ಹೆಸರು ಇನ್ನೂ ಅಧಿಕೃತವಾಗಿ ಪೊಲೀಸರು ಬಹಿರಂಗಪಡಿಸದಿದ್ದರೂ, ಪೊಲೀಸರು ಅವನನ್ನು ಬಂಧಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಶಿರಸಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಶಿರಸಿ ನಗರದಲ್ಲಿ ಭೀತಿ ಮತ್ತು ಆತಂಕದ ವಾತಾವರಣವನ್ನು ಸೃಷ್ಟಿಸಿದ್ದು, ಮದುವೆಗೆ ಮುನ್ನವೇ ಸಂಭವಿಸಿದ ಈ ಹತ್ಯೆ ಎಲ್ಲರನ್ನೂ ಬೆಚ್ಚಿಬೀಳುವಂತೆ ಮಾಡಿದೆ.

PREV
Read more Articles on
click me!

Recommended Stories

ಮಹಿಳಾ ಮೀಸಲಾತಿಗಲ್ಲ, ಕ್ಷೇತ್ರ ವಿಂಗಡಣೆಗೆ ವಿಪಕ್ಷಗಳ ವಿರೋಧ: ಸಿಎಂ ಸಿದ್ದರಾಮಯ್ಯ
ಕಾರಿನಲ್ಲಿ ಬಂದರು, ಹಸು ಎಳೆದು ತಂದರು, ತುಂಬಿಕೊಂಡು ಹೋದರು; ಹಸು ಸಾಕಿದ ಪ್ರಸಾದ್ ಬೀದಿಗೆ ಬಿದ್ದರು!