ಬಾಗಲಕೋಟೆ: ಆಯುಷ್ ವೈದ್ಯರ ಮುಷ್ಕರ ಆರಂಭ

By Kannadaprabha News  |  First Published May 25, 2020, 9:06 AM IST

ಸಮಾನ ವೇತನಕ್ಕಾಗಿ ರಾಜ್ಯ​ವ್ಯಾಪಿ ಆಯುಷ್ ವೈದ್ಯರ ಮುಷ್ಕರ| ಆಯುಷ್‌ ವೈದ್ಯರ ಹೋರಾಟಕ್ಕೆ ಬಾಗಲಕೋಟೆ ಜಿಲ್ಲೆಯಲ್ಲೂ ಬೆಂಬಲ| ಬೇಡಿಕೆ ಈಡೇರಿಸುವ ತನಕ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಪಟ್ಟು ಹಿಡಿದ ವೈದ್ಯರು|


"

ಬಾಗಲಕೋಟೆ(ಮೇ.25): ಸಮಾನ ಕೆಲಸಕ್ಕೆ ಸಮಾನ ವೇತನ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಯುಷ್‌ ವೈದ್ಯರು ರಾಜ್ಯವ್ಯಾಪಿ ಮುಷ್ಕರ ಆರಂಭಿಸಿದ್ದಾರೆ. 

Tap to resize

Latest Videos

ಆಯುಷ್‌ ವೈದ್ಯರ ಹೋರಾಟಕ್ಕೆ ಜಿಲ್ಲೆಯಲ್ಲೂ ಬೆಂಬಲ ವ್ಯಕ್ತವಾಗಿದ್ದು, ಜಿಲ್ಲೆಯ ವೈದ್ಯರು ಪ್ರತಿಭಟನೆಗಿಳಿದಿದ್ದಾರೆ.

ಹುನಗುಂದ: ಕೈಯಲ್ಲಿ ನಯಾಪೈಸೆ ಇಲ್ಲ: 2 ಸಾವಿರ ಕಿಮೀ ನಡೆದು ಬಿಹಾರಕ್ಕೆ ಹೊರಟ ಕಾರ್ಮಿಕರು!

ರಾಜ್ಯ ಆಯುಷ್‌ ವೈದ್ಯಾಧಿಕಾರಿಗಳ ಸಂಘ ಕರೆ ನೀಡಿರುವ ಮುಷ್ಕರಕ್ಕೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಎನ್‌ಎಚ್‌ಎಂ(ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ) ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯುಷ್‌ ವೈದ್ಯರು ಸಾಥ್‌ ನೀಡಿದ್ದು, ಬೇಡಿಕೆ ಈಡೇರಿಸುವ ತನಕ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
 

click me!