ಆಜಾನ್ V/S ಸುಪ್ರಭಾತ ವಿವಾದ ಹಿನ್ನೆಲೆ ಶ್ರೀರಾಮ ಸೇನೆ ಕರೆ ನೀಡಿದ ಸುಪ್ರಭಾತ ಸ್ತುತಿಗೆ ತುಮಕೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತುಮಕೂರು (ಮೇ.9) : ಆಜಾನ್ V/S ಸುಪ್ರಭಾತ ವಿವಾದ ಹಿನ್ನೆಲೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕರೆ ನೀಡಿದ ಸುಪ್ರಭಾತ ಸ್ತುತಿಗೆ ತುಮಕೂರು (Tumakuru) ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತುಮಕೂರು ನಗರದ ಟೌನ್ ಸರ್ಕಲ್ ಬಳಿ ಇರುವ ನಾಗರಕಟ್ಟೆ ದೇವಾಲಯದಲ್ಲಿ ಆಜಾನ್ (Azaan) ಗೆ ಪ್ರತಿಯಾಗಿ ಸುಪ್ರಭಾತ ಕೂಗಲು ಹಿಂದೂಪರ ಸಂಘಟನೆಗಳು ಮುಂದಾಗಿದ್ದವು. ಆದರೆ ಕೊನೆ ಕ್ಷಣದಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದ್ದಾರೆ. ಹೀಗಾಗಿ ತುಮಕೂರು ನಗರದಲ್ಲಿ ದೇವಾಲಯದಲ್ಲಿ ಸುಪ್ರಭಾತ ಮೊಳಗಲಿಲ್ಲ.
ಪಾವಗಡದ ಕೋಟೆ ಆಂಜನೇಯ ದೇವಾಸ್ಥಾನದಲ್ಲಿ ಮೊಳಗಿದ ಹನುಮಾನ್ ಚಾಲಿಸ್: ಇನ್ನೊಂದೆಡೆ ತುಮಕೂರು ಜಿಲ್ಲೆ ಪಾವಗಡ ಪಟ್ಟಣದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು, ಆಜಾನ್‌ಗೆ ಪ್ರತಿಯಾಗಿ ಸುಪ್ರಭಾತ ಮೊಳಗಿಸಿದ್ದಾರೆ. ಪಾವಗಡ ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನಕ್ಕೆ ದೇವಸ್ಥಾನಕ್ಕೆ ಮುಂಜಾನೆ 5ಕ್ಕೆ ಆಗಮಿಸಿದ ಕಾರ್ಯಕರ್ತರು, ಲೋಡ್ ಸ್ಪೀಕರ್ ಮೂಲಕ ಹನುಮಾನ್ ಚಾಲಿಸಾ ಪಠಿಸಿದ್ದಾರೆ.
ಪೊಲೀಸ್ ಬೀಗಿ ಭದ್ರತೆ: ತುಮಕೂರು ನಗರ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಧಾರ್ಮಿಕ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿಕೊಂಡಿರುವ ಸ್ಥಳಗಳಲ್ಲಿ ಪೊಲೀಸ್ ಪಡೆಗಳನ್ನು ನಿನ್ನೆ ರಾತ್ರಿಯಿಂದ ನಿಯೋಜನೆ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಮಾಡಲಾಗಿತ್ತು.
ONGC RECRUITMENT 2022: ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ
ರಾಜ್ಯದಲ್ಲೀಗ ಆಜಾನ್ VS ಸುಪ್ರಭಾತ: ಮಸೀದಿಗಳಲ್ಲಿನ ಅಜಾನ್‌ಗೆ ವಿರುದ್ಧವಾಗಿ ಈ ಹಿಂದೆ ಘೋಷಿಸಿದಂತೆ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ ಸೋಮವಾರ ಹನುಮಾನ್ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಲಾರಂಭಿಸಿದೆ. ಮುಸಲ್ಮಾನರು ನಮಾಜ್ ಮಾಡುವ ಸಮಯಕ್ಕೆ ಸರಿಯಾಗಿ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳಲ್ಲಿ ಸುಪ್ರಭಾತ ಮೊಳಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಿಂದೂ ಭಕ್ತಿಗೀತೆಗಳ ಸದ್ದು ಕೇಳಿ ಬಂದಿದೆಯಾದರೂ ತುಮಕೂರು ಹಾಗೂ ಶಿವಮೊಗ್ಗದಲ್ಲಿ ಈ ಅಭಿಯಾನಕ್ಕೆ ಬೆಂಬಲ ಸಿಕ್ಕಿಲ್ಲ ಎಂಬುವುದು ಉಲ್ಲೇಖನೀಯ.
ಶಬ್ದಮಾಲಿನ್ಯ ಉಂಟು ಮಾಡುವಂತಹ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ನ್ಯಾಯಾಲಯದ ಆದೇಶವಿರುವುದರಿಂದ ಮಸೀದಿಯಲ್ಲಿ ಆಜಾನ್ ಮೈಕ್‌ಗಳನ್ನು ಮೇ 8ರ ಒಳಗೆ ತೆರವುಗೊಳಿಸಬೇಕು ಇಲ್ಲವಾದಲ್ಲಿ ಮೇ 9ರಂದು ರಾಜ್ಯದ ಸಾವಿರಕ್ಕೂ ಅಧಿಕ ದೇವಾಲಯಗಳಲ್ಲಿ ಹನುಮಾನ್ ಚಾಲೀಸ, ಸುಪ್ರಭಾತ, ಭಕ್ತಿಗೀತೆಗಳನ್ನು ಹಾಕಲಾಗುವುದು ಎಂದು ಶ್ರೀರಾಮ ಸೇನೆ ಸಂಘಟನೆ ಎಚ್ಚರಿಕೆ ನೀಡಿತ್ತು.
Nimhans Recruitment 2022: ಹಿರಿಯ ಸಂಶೋಧನಾ ಫೆಲೋ ಸೇರಿ 4 ಹುದ್ದೆಗಳಿಗೆ ನೇಮಕಾತಿ
ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ರಾಜ್ಯದ ಎಲ್ಲಾ ಜಿಲ್ಲೆಗಳ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಅಭಿಯಾನ ನಡೆಸಲಾಗುವುದು. ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ದೇವರ ಹಾಡುಗಳನ್ನು ಪ್ಲೇ ಮಾಡಲಾಗುವುದು. ಸದ್ಯಕ್ಕೆ ಮಸೀದಿಗಳ ಎದುರು ಯಾವುದೇ ಕಾರ್ಯಕ್ರಮ ನಡೆಸುವುದಿಲ್ಲ. ಒಂದು ವೇಳೆ ಸರ್ಕಾರ ನಮ್ಮ ಒತ್ತಡಕ್ಕೆ ಮಣಿಯದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ. ಉತ್ತರ ಪ್ರದೇಶದಲ್ಲಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತೆಗೆದುಕೊಂಡ ಕ್ರಮದ ಮಾದರಿಯಲ್ಲಿಯೇ ಇಲ್ಲಿಯೂ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕೋರ್ಟ್ ಆದೇಶ ಉಲ್ಲಂಘನೆಯಾಗುವುದನ್ನು ತಡೆಯಬೇಕು. ಈ ಬೆಳವಣಿಗೆ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಸಮಾಜಕ್ಕೆ ಅಪಾಯ ತಪ್ಪಿದ್ದಲ್ಲ ಎಂದಿದ್ದರು.
ಈ ಗಡುವು ಮುಗಿದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಅಭಿಯಾನಕ್ಕೆ ಮುಂದಾಗಿದೆ. ಹೀಗಿರುವಾಗ ಮುನ್ನೆಚ್ಚರಿಕಾ ಕ್ರಮವಾಗಿ ಹುಬ್ಬಳ್ಳಿ ಸೇರಿದಂತೆ ಹಲವೆಡೆ ಮಸೀದಿಗಳ ಆಸುಪಾಸು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಇನ್ನು ಮಲೆನಾಡು ಶಿವಮೊಗ್ಗದಲ್ಲಿ ಶ್ರೀರಾಮ ಸೇನೆಯ ಅಭಿಯಾನಕ್ಕೆ ಬೆಂಬಲ ಸಿಕ್ಕಿಲ್ಲ. ಶಿವಮೊಗ್ಗದ ದೇಗುಲಗಳಲ್ಲಿ ಸುಪ್ರಭಾತ, ಹನುಮಾನ್ ಚಾಲಿಸಾ ನಡೆದಿಲ್ಲ. ಮಿಕ್ಕಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುಪ್ರಭಾತ, ಬಜನೆಗಳು ನಡೆದಿದೆ.