ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ ಎಂದು ಸಂಸದ ಪ್ರತಾಪ್‌ಸಿಂಹ ತಿಳಿಸಿದ್ದಾರೆ.
ಮೈಸೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ ಎಂದು ಸಂಸದ ಪ್ರತಾಪ್‌ಸಿಂಹ ತಿಳಿಸಿದ್ದಾರೆ.
2014 ರಲ್ಲಿ ಜೊತೆಯಾಗಿ ಸಂಸತ್ತಿಗೆ ಕಾಲಿಟ್ಟ ದಿನದಿಂದಲೂ ಪ್ರೀತಿಯಿಂದ ನನ್ನನ್ನು ನೋಡಿಕೊಂಡ ಅವರು, 2016 ರಲ್ಲಿ ಅವರು ರಾಜ್ಯಾಧ್ಯಕ್ಷರಾದಾಗ ನನ್ನನ್ನು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಾಗಿ ಮಾಡಿ ಪ್ರೋತ್ಸಾಹಿಸಿ ಬೆಳೆಸಿದರು ಎಂದು ಅವರು ಸ್ಮರಿಸಿದ್ದಾರೆ.
undefined
ಶೆಟ್ಟರ್ ಸೇರ್ಪಡೆಯಿಂದ ಅನುಕೂಲ
ನವದೆಹಲಿ(ಜ.26): ಜಗದೀಶ್ ಶೆಟ್ಟರ್ ಅವರ ಸೇರ್ಪಡೆಯಿಂದ ಬಲ ಬಂದಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25ಕ್ಕೂ ಅಧಿಕ ಕ್ಷೇತ್ರ ಗೆಲ್ಲಲು ಸಹಕಾರಿಯಾಗಲಿದೆ. ಮತ್ತೆ ಅವರಿಗೆ ಬಿಜೆಪಿಗೆ ಸ್ವಾಗತಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಬಿಜೆಪಿಗೆ ಬರಮಾಡಿಕೊಂಡು ಮಾತನಾಡಿದ ಅವರು, ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಶೆಟ್ಟರ್ ಜೊತೆ ಹೋಗಿ ಭೇಟಿ ಮಾಡಿದ್ದೇವೆ. ಅಮಿತ್ ಶಾ ಅವರು ಶೆಟ್ಟರ್ ಅವರನ್ನು ಸಂತಸದಿಂದ ಸ್ವಾಗತಿಸಿದ್ದು, ಬಿಜೆಪಿ ಸೇರುವಂತೆ ತಿಳಿಸಿದ್ದರು. ಶಾ ಅಣತಿಯಂತೆ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದರು.
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಉಳಿಯಲ್ಲ, ಇದನ್ನರಿತೇ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿದ್ದಾರೆ: ಬೊಮ್ಮಾಯಿ
ಶೆಟ್ಟರ್ ಈ ಹಿಂದೆ ಮಾಜಿ ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ ಅನನ್ಯ ಜವಾಬ್ದಾರಿ ನಿರ್ವಹಿಸಿದ್ದಾರೆ. ಅವರ ಅನುಭವ ಪಕ್ಷಕ್ಕೆ ಅಗತ್ಯವಾಗಿತ್ತು. ಅಲ್ಲದೆ, ಶೆಟ್ಟರ್ ಮರಳಿ ಬಿಜೆಪಿಗೆ ಬರಬೇಕು ಎಂಬುದು ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆಯೂ ಆಗಿತ್ತು ಎಂದು ತಿಳಿಸಿದ್ದಾರೆ.