ಹಾಸ್ಟೆಲ್ ವಿದ್ಯಾರ್ಥಿನಿಯರ ಬಳಿ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಕೊಡಗು (ಏ.10): ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪದಡಿಯಲ್ಲಿ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಸಸ್ಪೆಂಡ್ ಮಾಡಲಾಗಿದೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ.ಮಲ್ಲಿಕಾರ್ಜುನ್ ಎಂಬಾತನನ್ನು ಅಮಾನತುಗೊಳಿಸಿ ಇಂದು ಕೊಡಗು ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ವಿಜಯಪುರ: ನಂಬಿಸಿ ವಂಚನೆ, ಗೆಳತಿಯ ನಗ್ನ ಚಿತ್ರ ಹರಿಬಿಟ್ಟ ಯುವಕ .
ಪೊನ್ನಂಪೇಟೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿರುವ ವಿದ್ಯಾರ್ಥಿನಿಯರ ಬಳಿ ಈತ ಅಸಭ್ಯವಾಗಿ ನಡೆದುಕೊಂಡಿದ್ದು ಈ ಸಂಬಂಧ ಜಿಲ್ಲಾ ಪಂಚಾಯತ್ ಸದಸ್ಯೆಗೆ ದೂರು ನೀಡಲಾಗಿತ್ತು.
ಇದೀಗ ವಿಸ್ತರಣಾಧಿಕಾರಿ ಮೇಲಿನ ಕಿರುಕುಳದ ಆರೋಪ ಸಾಬೀತಾದ ಹಿನ್ನೆಲೆ ಅಮಾನತುಗೊಳಿಸಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.