ರಸ್ತೆ ಅಪಘಾತದ ವೇಳೆ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದ ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬಾಗಲಕೋಟೆ: ಬೈಕ್ ಅಪಘಾತದ ವೇಳೆ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದ ಇಬ್ಬರು ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಬಾಗಲಕೋಟೆ ಜಿಲ್ಲಾಧಿಕಾರಿ ಮಾನವೀಯತೆ ಮೆರೆದಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಕುಳಗೇರಿ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಸ್ವತಃ ನಿಂತು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಬಾದಾಮಿ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮ ಭೇಟಿಗೆ ಜಿಲ್ಲಾಧಿಕಾರಿಗಳು ತೆರಳಿದ್ದ ವೇಳೆ, ಬೈಕ್ ಸವಾರರಿಬ್ಬರು ಕುಡಿದ ಅಮಲಿನಲ್ಲಿ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದರು. ಈ ವೇಳೆ ಮಾನವೀಯತೆ ನೆರವು ನೀಡಿದ್ದಾರೆ.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕೆಂದು ಎಚ್ಚರಿಕೆ ನೀಡಿದರು. ಇನ್ನು ಜಿಲ್ಲಾಧಿಕಾರಿಗಳ ಈ ಕಾರ್ಯ ಕಂಡು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.