
ಬಾಗಲಕೋಟೆ: ಆಲಮಟ್ಟಿ ಅಣೆಕಟ್ಟಿನ ಹಿನ್ನೀರಿನಲ್ಲಿ ಮುಳುಗಡೆಯಾಗಲಿರುವ 184 ಗ್ರಾಮಗಳ ಜಮೀನುಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸುವುದು ಹಾಗೂ ಬಾಗಲಕೋಟೆ ಯುನಿಟ್-3ರ ವ್ಯಾಪ್ತಿಯಲ್ಲಿ ಭೂಸ್ವಾಧೀನಪಡಿಸಿಕೊಂಡಿರುವ ರೈತರಿಗೆ ಬಾಕಿ ಭೂ ಪರಿಹಾರ ಕೂಡಲೇ ಬಿಡುಗಡೆ ಮಾಡುವ ಕುರಿತು ಮಹತ್ವದ ಸಭೆಯಲ್ಲಿ ಚರ್ಚಿಸಲಾಯಿತು.
ವಿಧಾನಸೌಧದಲ್ಲಿ ಸೋಮವಾರ ನಡೆದ ಜಲ ಸಂಪನ್ಮೂಲ ಸಚಿವರು ಭಾಗವಹಿಸಿದ ಸಭೆಯಲ್ಲಿ ಶಾಸಕ ಉಮೇಶ್ ಮೇಟಿ ಅವರು ಭಾಗವಹಿಸಿ, ಭೂಸ್ವಾಧೀನ ಮತ್ತು ಪುನರ್ವಸತಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಒತ್ತಾಯಿಸಿದರು.
ಇದೇ ವೇಳೆ, ನಡುಗಡ್ಡೆ ಪ್ರದೇಶವಾದ ಕಿಲ್ಲಾದಲ್ಲಿರುವ ಅಂದಾಜು 1,100 ಮನೆಗಳನ್ನು ಕೂಡಲೇ ಸ್ಥಳಾಂತರಿಸಿ, ಅಲ್ಲಿನ ನಿವಾಸಿಗಳಿಗೆ ಬಾಗಲಕೋಟೆ ಯುನಿಟ್-2 ಅಥವಾ ಯುನಿಟ್-3ರಲ್ಲಿ ಸೂಕ್ತ ನಿವೇಶನ ಒದಗಿಸುವ ಕುರಿತು ಚರ್ಚಿಸಲಾಯಿತು.
ಆಲಮಟ್ಟಿ ಹಿನ್ನೀರಿನಿಂದ ಬಾಧಿತವಾಗುವ ಕುಟುಂಬಗಳ ಪುನರ್ವಸತಿ ಹಾಗೂ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆಯಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ವಿಚಾರ ವಿನಿಮಯ ನಡೆಯಿತು.
ಸಭೆಯಲ್ಲಿ ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ, ಸಚಿವರಾದ ಚೆಲುವರಾಯಸ್ವಾಮಿ, ಎಂ.ಬಿ. ಪಾಟೀಲ್, ವಿಜಯಾನಂದ ಕಾಶಪ್ಪನವರ, ಲಕ್ಷ್ಮಣ ಸವದಿ, ಮಾಜಿ ಸಚಿವ ಆರ್.ಬಿ. ತಿಮ್ಮಾಪುರ, ಶಾಸಕರಾದ ಜೆ.ಟಿ. ಪಾಟೀಲ್ ಹಾಗೂ ರಾಜ್ಯ ಸಕರ್ಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ 25 ಸಾವಿರ ರಾಸುಗಳಿಗೆ ವಿಮಾ ಸೌಲಭ್ಯ: ಎಷ್ಟು ವಿಮೆ?
ಇದನ್ನೂ ಓದಿ: ರಾಜ್ಯಕ್ಕೆ ಬರಗಾಲ ಬಂದಿದ್ರೂ ಹೇಮಾವತಿಯಿಂದ ತಮಿಳನಾಡಿಗೆ ನೀರು! ನಿಮ್ಮ ಜಿಲ್ಲೆಯ ಜಲಾಶಯದ ಇಂದಿನ ನೀರಿನ ಮಟ್ಟ ಎಷ್ಟಿದೆ?