
ಎಸ್.ಎಂ. ಸೈಯದ್, ಗಜೇಂದ್ರಗಡ
ಗದಗ : ಜೋವಿನಜೋಳ ಕಟಾವು ಆಗಿ ಮಾರುಕಟ್ಟೆ ಪ್ರವೇಶಿಸುವ ಹಂತದಲ್ಲಿ ಬೆಲೆ ಕುಸಿತವಾಗಿದೆ. ಉತ್ತಮಫಸಲು ಬಂದಿದ್ದರಿಂದಜೋವಿನಜೋಳ ಮಾರಾಟ ಮಾಡಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ಕನಸು ಕಾಣುತ್ತಿದ್ದ ರೈತರಿಗೆ ಆಘಾತವಾಗಿದೆ. ತಾಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಹೆಸರು ಬೆಳೆ ಸಂಪೂರ್ಣ ಹಾಳಾಗಿತ್ತು. ಆದರೆಗೋವಿನಜೋಳದ ಫಸಲು ರೈತರ ಕೈ ಸೇರಿತ್ತು. ಆಗ ಈಗ ಬೆಲೆ ಕುಸಿತವಾಗಿದೆ.
ತಾಲೂಕಿನ ರೈತರು ನೀರಾವರಿ ಮತ್ತು ಖುಷಿ ಜಮೀನುಗಳಲ್ಲಿ ಗೋವಿನ ಜೋಳ ಬೆಳೆದಿದ್ದು, ನಿತ್ಯ ಪಟ್ಟಣದ ಎಪಿಎಂಸಿಗೆ ಗೋವಿನ ಜೋಳ ಹೆಚ್ಚಿನ ಪ್ರಮಾಣದಲ್ಲಿ ಆವಕವಾಗುತ್ತಿದೆ. ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳಿಂದ ಪ್ರತಿ ದಿನ 10 ಸಾವಿರ ಚೀಲದಷ್ಟು ಗೋವಿನ ಜೋಳದ ಆವಕವಿದೆ. ಕಳೆದೊಂದು ತಿಂಗಳ ಹಿಂದೆ ಗೋವಿನ ಜೋಳ ಪ್ರತಿ ಕ್ವಿಂಟಲ್‌ಗೆ ₹2485 ಇದ್ದ ದರ ವ ಇದ್ದ ದರ ಮಾರುಕಟ್ಟೆಗೆ ರೈತರ ಫಸಲು ಬರುತ್ತಿದ್ದಂತೆ ದರದಲ್ಲಿ ಕುಸಿತವಾಗುತ್ತಿದೆ. ಸದ್ಯ ಪ್ರತಿ ಕ್ವಿಂಟಲ್‌ಗೆ ₹1700ರಿಂದ ₹2050ರವರೆಗೆ ಮಾರಾಟವಾಗುತ್ತಿದೆ. ಗುಣಮಟ್ಟವಿಲ್ಲದ ಗೋವಿನಜೋಳ ಪ್ರತಿ ಕ್ವಿಂಟಲ್ ಗೆ ಕನಿಷ್ಠ ₹1300ಕ್ಕೆ ಮಾರಾಟವಾಗುತ್ತಿದೆ.
ಗೋವಿನಜೋಳದ ಆರಂಭದಲ್ಲಿ ಅವಕ ಕಡಿಮೆಯಿದ್ದಾಗ ಪ್ರತಿ ಕ್ವಿಂಟಲ್‌ಗೆ ₹2485ಕ್ಕೆ ಮಾರಾಟವಾಗುತ್ತಿತ್ತು. ದಿನಕಳೆದಂತೆ ರಾಜ್ಯಾದ್ಯಂತ ಮಾರುಕಟ್ಟೆಗೆ ಫಸಲು ಹೆಚ್ಚಿನ ಪ್ರಮಾಣದಲ್ಲಿ ಆವಕ ಆಗುತ್ತಿರುವುದರಿಂದ ಬೆಲೆ ಕಡಿಮೆಯಾಗಿದೆ. ಅಲ್ಲದೆ ಬೇರೆ ಬೇರೆ ರಾಜ್ಯಗಳಲ್ಲಿಯೂ ರೈತರು ಹೆಚ್ಚಿನ ಪ್ರಮಾಣದಲ್ಲಿಗೋವಿನಜೋಳಬೆಳೆದಿರುವುದರಿಂದ ಹಾಗೂ ಮಾರುಕಟ್ಟೆಗೆ ಒಮ್ಮೆಲೆ ಫಸಲು ಆವಕ ಆಗುವುದರಿಂದ ಬೆಲೆ ಕಡಿಮೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಗಜೇಂದ್ರಗಡ ತಾಲೂಕಿನಲ್ಲಿ 20 ದಿನಗಳಿಂದ ಮಳೆ ಬಿಡುವು ನೀಡಿದ್ದು, ರೈತರು ಕಟಾವಿಗೆ ಬಂದಿರುವ ಗೋವಿನಜೋಳ ರಾಶಿ ಮಾಡಿ ಹಿಂಗಾರು ಬಿತ್ತನೆಗೆ ಹೊಲ ಹದಗೊಳಿಸುತ್ತಿದ್ದಾರೆ. ಈ ಬಾರಿ ನಿರಂತರ ಮಳೆಯಿಂದಾಗಿ ಎರಿಭೂಮಿಯಲ್ಲಿ ಕಟಾವಿಗೆ ಬಂದಿದ್ದ ಗೋವಿನಜೋಳದ ರಾಶಿ ಮಾಡಲು ಸಾಧ್ಯವಾಗಿರಲಿಲ್ಲ. ಸದ್ಯ ಮಳೆ ಬಿಡುವು ನೀಡಿದ್ದು, ರೈತರು ಬೃಹತ್ ರಾಶಿ ಯಂತ್ರಗಳು ಹಾಗೂ
ವೈಜ್ಞಾನಿಕ ಬೆಲೆ ಸಿಗಲಿ ಜಮೀನು ಹದಗೊಳಿಸುವುದು, ಬೀಜ-ಗೊಬ್ಬರ, ಆಳು, ಒಳಗುಂಟಿ ಹೊಡೆಯುವುದು, ಹೊಡೆಯುವುದು, ಕಟಾವು ಮಾಡುವುದು ಸೇರಿದಂತೆ ಎಕರೆಗೆ ಸುಮಾರು 15ರಿಂದ 20 ಸಾವಿರದಷ್ಟು ಖರ್ಚಾಗುತ್ತದೆ. ಅಲ್ಲದೆ ರಾಶಿ ಮಾಡಿದ ಫಸಲನ್ನು ಬಿಸಿಲಿನಲ್ಲಿ ಒಣಗಿಸಿ ಹದಗೊಳಿಸುತ್ತೇವೆ.
ಪ್ರತಿವರ್ಷ ರೈತರು ಗೋವಿನಜೋಳ ಮಾರುಕಟ್ಟೆಗೆ ತಂದಾಗಲೆಲ್ಲ ಬೆಲೆ ಕಡಿಮೆಯಾಗುತ್ತದೆ. ಚುನಾವಣೆ ವೇಳೆ ಭರಪೂರ ಭರವಸೆ ನೀಡುವ ಜನಪ್ರತಿನಿಧಿಗಳು ನಾಡಿಗೆ ಅನ್ನ ನೀಡುವ ರೈತರ ಫಸಲಿಗೆ ವೈಜ್ಞಾನಿಕ ಬೆಲೆ ಕೊಡಿಸುವಲ್ಲಿ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ದುರಂತ ಎಂದು ರೈತರು ಬೇಸರ ವ್ಯಕ್ತಪಡಿಸಿದರು. ಸಾಂಪ್ರದಾಯಿಕವಾಗಿ ತೆನೆ ಮುರಿದು ರಾಶಿ ಮಾಡುತ್ತಿದ್ದಾರೆ. ತೇವಾಂಶವಿರುವ ಗೋವಿನ ಜೋಳದ ಕಾಳು ಒಣಗಿಸಲು ರೈತರು ಬಯಲು ಜಾಗ, ನೂತನ ಬಡಾವಣೆಗಳ ಸಿಸಿ ರಸ್ತೆಯಲ್ಲಿ ಒಣ ಹಾಕಿರುವುದು ಸಾಮಾನ್ಯವಾಗಿದೆ.
ಈಗಾಗಲೇ ಹಿಂಗಾರು ಬಿತ್ತನೆಗೆ 10-15 ದಿನಗಳಿರುವುದರಿಂದ ಗೋವಿನಜೋಳ ಬಿತ್ತನೆ ಮಾಡಿದ್ದ ರೈತ ಕುಟುಂಬದ ಕೆಲವರು ರಾಶಿ ಮಾಡಿರುವ ಗೋವಿನಜೋಳ ಒಣಗಿಸುವ ಕಾಯಕದಲ್ಲಿ ತೊಡಗಿದ್ದರೆ, ಇನ್ನು ಕೆಲವರು ಹೊಲ ಹದಗೊಳಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಅಲ್ಲದೆ ಮಾರುಕಟ್ಟೆಯಲ್ಲಿ ಬೀಜ ಗೊಬ್ಬರ ಖರೀದಿಸಿ ಬಿತ್ತನೆಗೆ ಬಿತ್ತನೆಗೆ ಅಣಿಯಾಗುತ್ತಿದ್ದಾರೆ.