Mangaluru: ಕಲ್ಲಡ್ಕದ ಬಸ್‌ನಲ್ಲಿದ್ದ ಹಿಂದೂ-ಮುಸ್ಲಿಂ ಜೋಡಿ ತಡೆದ ಭಜರಂಗದಳ ಕಾರ್ಯಕರ್ತರು!

By Govindaraj S  |  First Published Dec 16, 2022, 1:02 PM IST

ಬಸ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ತಡೆದ ಭಜರಂಗದಳ ಕಾರ್ಯಕರ್ತರು ಯುವತಿ ಜೊತೆ ಮಾತಿನ ಚಕಮಕಿ ನಡೆಸಿದ ಘಟನೆ ದ‌‌.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ದಾಸಕೋಡಿ ಬಳಿ ನಿನ್ನೆ (ಗುರುವಾರ) ರಾತ್ರಿ ನಡೆದಿದೆ. 
 


ಕಲ್ಲಡ್ಕ (ಡಿ.16): ಬಸ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ತಡೆದ ಭಜರಂಗದಳ ಕಾರ್ಯಕರ್ತರು ಯುವತಿ ಜೊತೆ ಮಾತಿನ ಚಕಮಕಿ ನಡೆಸಿದ ಘಟನೆ ದ‌‌.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ದಾಸಕೋಡಿ ಬಳಿ ನಿನ್ನೆ (ಗುರುವಾರ) ರಾತ್ರಿ ನಡೆದಿದೆ. ಮುಸ್ಲಿಂ ಹುಡುಗನೊಂದಿಗೆ ಹಿಂದೂ ಹುಡುಗಿ ಪ್ರಯಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮಂಗಳೂರಿನ ಪಂಪ್ ವೆಲ್ ಬಳಿ ತಡೆಯಲು ಯತ್ನಿಸಿ ವಿಫಲವಾದ ಕಾರ್ಯಕರ್ತರು ಕಲ್ಲಡ್ಕದ ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಕಲ್ಕಡ್ಕದ ದಾಸಕೋಡಿ ಬಳಿ ರಾತ್ರಿ ವೇಳೆ ದುರ್ಗಾಂಬ ಬಸ್ ತಡೆದು ಜೋಡಿ ಇಳಿಸಿ ಮಾತಿನ ಚಕಮಕಿ ನಡೆಸಿದ್ದಾರೆ. 

ಯುವತಿಗೆ ಬೈದು ಅಡ್ಡಿಪಡಿಸಿದ ಭಜರಂಗದಳ ಕಾರ್ಯಕರ್ತರು ಜೊತೆಯಾಗಿ ಪ್ರಯಾಣ ಬೆಳೆಸುವುದನ್ನ ಪ್ರಶ್ನೆ ಮಾಡಿ ಗಲಾಟೆ ಮಾಡಿದ್ದಾರೆ. ಮಹಮ್ಮದ್ ರಾಯಿಫ್ ಮತ್ತು ನಿಧಿ ಶೆಟ್ಟಿ ಎಂಬ ಯುವತಿ ಜೊತೆಯಾಗಿ ಪ್ರಯಾಣ ಬೆಳೆಸುತ್ತಿದ್ದರು ಎನ್ನಲಾಗಿದೆ. ಮಾಹಿತಿ ತಿಳಿದು ಬಸ್ ತಡೆದು ಅಡ್ಡಿ ಪಡಿಸಿ ಗಲಾಟೆ ಮಾಡಿದ ಬಳಿಕ ಬಂಟ್ವಾಳ ಪೊಲೀಸರಿಗೆ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ. ‌ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪ್ರಕರಣ ಠಾಣೆಯ ಮೆಟ್ಟಿಲೇರಿದ್ದು, ಯಾವುದೇ ಪ್ರಕರಣ ದಾಖಲಾದ ಮಾಹಿತಿ ಇಲ್ಲ. ಭಟ್ಕಳ ಮೂಲದ ಯುವಕ ಮತ್ತು ಮಂಗಳೂರಿನ ಯುವತಿ ಬಸ್‌ನಲ್ಲಿ ಇದ್ದರು ಎಂದು ತಿಳಿದು ಬಂದಿದೆ.

Tap to resize

Latest Videos

ಮಂಗಳೂರಲ್ಲಿ ಮತ್ತೆ ಭಜರಂಗದಳದ ನೈತಿಕ ಪೊಲೀಸ್ ಗಿರಿ; ಮಧ್ಯರಾತ್ರಿ ಭಿನ್ನ ಕೋಮಿನ ಜೋಡಿಗೆ ಹಲ್ಲೆ!

ಹಿಂದೂ ಮುಸ್ಲಿಂ ವಿದ್ಯಾರ್ಥಿಗಳ ಲವ್ ಸ್ಟೋರಿ: ಖಾಸಗಿ ಪದವಿಪೂರ್ವ ಕಾಲೇಜಿನ ಹಿಂದೂ ಸಮುದಾಯದ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ನಡುವಿನ ಪ್ರೇಮ ಪ್ರಕರಣದ ವಿಚಾರದಲ್ಲಿ ವಿವಾದ ಉಂಟಾಗಿ ಒಟ್ಟು 18 ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆವರೆಗೆ ಕಾಲೇಜು ಪ್ರಾಂಶುಪಾಲರು ಅಮಾನತು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ವಿಠಲ್ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ. 

ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಡುವೆ ಮಾತುಕತೆ ನಡೆದು ಮುನ್ನೆಚ್ಚರಿಕೆ ದೃಷ್ಟಿಯಿಂದ ಸುಮಾರು 18 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಲಾಗಿದೆ. ಕೆಲವು ಸಮಯದಿಂದ ಹಿಂದೂ ಸಮುದಾಯದ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ವಿದ್ಯಾರ್ಥಿ ನಡುವೆ ಪ್ರೇಮ ಪ್ರಕರಣ ನಡೆದಿರುವುದರ ಗಮನಕ್ಕೆ ಬಂದ ಕಾಲೇಜು ಆಡಳಿತ ವರ್ಗ ಪೊಷಕರನ್ನು ಕರೆಸಿ ವಿಷಯವನ್ನು ತಿಳಿಸಿತ್ತು. ಈ ಬಳಿಕ ಕೆಲವು ಸಮಯ ಯಾವುದೇ ಗೊಂದಲವಿರಲಿಲ್ಲ. 

ಕಾಂತಾರ ಸಿನಿಮಾ ನೋಡಲು ಬಂದಿದ್ದ ಮುಸ್ಲಿಂ ಜೋಡಿ ಮೇಲೆ ನೈತಿಕ ಪೊಲೀಸ್ ಗಿರಿ!

ವಿದ್ಯಾರ್ಥಿನಿ ಕೈಯಲ್ಲಿ ಪ್ರೇಮಪತ್ರ: ಆದರೆ ಕಾಲೇಜು ವಾರ್ಷಿಕೋತ್ಸವ ಸಮಯ ಮತ್ತೆ ಪ್ರೇಮ ಪ್ರಕರಣ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಉಪನ್ಯಾಸಕರ ತಂಡ ತರಗತಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವ ಬಗ್ಗೆ ತಪಾಸಣೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಸಮುದಾಯದ ವಿದ್ಯಾರ್ಥಿನಿಯ ಕೈಯಲ್ಲಿ ಪ್ರೇಮ ಪತ್ರ ಪತ್ತೆಯಾಗಿತ್ತು. ಈ ದಿನ ಮುಸ್ಲಿಂ ವಿದ್ಯಾರ್ಥಿ ಕಾಲೇಜಿಗೆ ಬಂದಿರಲಿಲ್ಲ. ಯುವತಿಯ ಪೋಷಕರಲ್ಲಿ ಮಾತುಕತೆ ನಡೆಸಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಯುವತಿಯನ್ನು ಪರೀಕ್ಷೆಗೆ ಮಾತ್ರ ಆಗಮಿಸುವಂತೆ ಸೂಚನೆ ನೀಡಿದ್ದಾರೆ. 

click me!