ಮಂಗಳೂರಲ್ಲಿ ಮತ್ತೆ ಅನ್ಯಕೋಮಿನ ಜೋಡಿಗೆ ಭಜರಂಗದಳ ಎಚ್ಚರಿಕೆ..!

By Girish Goudar  |  First Published Dec 8, 2022, 1:00 AM IST

ಮಂಗಳೂರಿನ ಕಂಕನಾಡಿಯ ಸುಲ್ತಾನ್ ಗೋಲ್ಡ್ ನೈತಿಕ ಪೊಲೀಸ್ ಗಿರಿ ಘಟನೆ ಹಸಿರಾಗಿರುವಾಗಲೇ ಮತ್ತೊಂದು ನೈತಿಕ ಪೊಲೀಸ್ ಗಿರಿಗೆ ಯತ್ನಿಸಿದ ಘಟನೆ ನಡೆದಿದೆ.


ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು

ಮಂಗಳೂರು(ಡಿ.08):  ನಗರದ ಹೊರವಲಯದ ತೊಕ್ಕೊಟ್ಟುವಿನ ಬಟ್ಟೆ ಮಳಿಗೆಯಲ್ಲಿ ಕೆಲಸದಲ್ಲಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯ ಮನೆ ಹತ್ತಿರಕ್ಕೆ ಬಂದು ಜತೆಯಲ್ಲಿ ಮಾತನಾಡುತ್ತಿರುವುದನ್ನು ಕಂಡು ಸ್ಥಳೀಯ ಭಜರಂಗದಳದ ಕಾರ್ಯಕರ್ತರು ಯುವಕನಿಗೆ ಎಚ್ಚರಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಬ್ಬಂಜರ ಎಂಬಲ್ಲಿ ಇಂದು ನಡೆದಿದೆ.

Tap to resize

Latest Videos

ತೊಕ್ಕೊಟ್ಟು ಸಾಗರ್ ಕಲೆಕ್ಷನ್ಸ್ ಬಟ್ಟೆ ಮಳಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲಿಯಾರ್ ಪದವು ನಿವಾಸಿ ಮುನೀರ್ ಎಂಬಾತ, ಅದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಹಿಂದೂ ಯುವತಿಯ ಜತೆಗೆ ಅಬ್ಬಂಜರ ಕಡೆಗೆ ತೆರಳಿ ಮಾತನಾಡುತ್ತಿದ್ದ ಎನ್ನಲಾಗಿದೆ. ಇದನ್ನು ಸ್ಥಳದಲ್ಲಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಗಮನಿಸಿದ್ದರು. ಕೂಡಲೇ ಉಳ್ಳಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಯುವಕನಿಗೆ ತಂಡ ಎಚ್ಚರಿಸಿದೆ. ಬಳಿಕ ಉಳ್ಳಾಲ ಪೊಲೀಸರು ಇಬ್ಬರನ್ನು ವಿಚಾರಣೆ ನಡೆಸಿ ಬಿಟ್ಟುಬಿಟ್ಟಿದ್ದಾರೆ.

ಚಿಕ್ಕಮಗಳೂರಲ್ಲಿ ದತ್ತಜಯಂತಿಯ ಶೋಭಾಯಾತ್ರೆ ಸಂಭ್ರಮ

ಮಂಗಳೂರಿನ ಕಂಕನಾಡಿಯ ಸುಲ್ತಾನ್ ಗೋಲ್ಡ್ ನೈತಿಕ ಪೊಲೀಸ್ ಗಿರಿ ಘಟನೆ ಹಸಿರಾಗಿರುವಾಗಲೇ ಮತ್ತೊಂದು ನೈತಿಕ ಪೊಲೀಸ್ ಗಿರಿಗೆ ಯತ್ನಿಸಿದ ಘಟನೆ ನಡೆದಿದೆ.
 

click me!