ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ಸಾಗರ ಬಂದ್ ಗೆ ಕರೆ: ಆರೋಪಿ ಬಂಧನಕ್ಕೆ 3 ತಂಡ ರಚನೆ

By Gowthami K  |  First Published Jan 9, 2023, 4:23 PM IST

ಭಜರಂಗದಳದ ಕಾರ್ಯಕರ್ತನೊಬ್ಬನ ಮೇಲೆ ಅನ್ಯಕೋಮಿನ ಯುವಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಲು ಯತ್ನಿಸಿರುವ  ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ  ಸಾಗರ ಟೌನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಮಂಗಳವಾರ ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಿದ್ದಾರೆ.


ಶಿವಮೊಗ್ಗ (ಜ.9): ಭಜರಂಗದಳದ ಕಾರ್ಯಕರ್ತನೊಬ್ಬನ ಮೇಲೆ ಅನ್ಯಕೋಮಿನ ಯುವಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಲು ಯತ್ನಿಸಿರುವ  ಘಟನೆ ಇಂದು ಸಾಗರ ಪಟ್ಟಣ ಬಿ.ಹೆಚ್ ರಸ್ತೆಯಲ್ಲಿ ನಡೆದಿದೆ. ಸಾಗರದ ನೆಹರು ನಗರ ನಿವಾಸಿ  ಸುನೀಲ್  ಬೈಕ್​ನಲ್ಲಿ ಬರುತ್ತಿದ್ದ ಆತನ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.  ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. 

ಘಟನೆಗೆ ಕಾರಣ: ಸುನೀಲ್ ಮತ್ತು ಸಮೀರ್ ಸಾಗರದ  ನೆಹರು ನಗರದ ನಿವಾಸಿಗಳು, ಹಳೇ  ವೈಷಮ್ಯದ ಹಿನ್ನಲೆಯಲ್ಲಿ ಈ  ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ .ಈ ಘಟನೆ ಸಂಬಂಧ  ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Latest Videos

undefined

Raichur: ಗ್ರಾಮ ಪಂಚಾಯತ್ ನಿರ್ಲಕ್ಷ್ಯಕ್ಕೆ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಬಲಿ!

ಎಸ್ಪಿ ಮಾಹಿತಿ: ಸಾಗರದ ಆಭರಣ ಜ್ಯುವೆಲರಿ ಸಮೀಪ ಬರುತ್ತಿದ್ದ ಸುನೀಲ್​ ಎಂಬಾತನ ಮೇಲೆ ಸಮೀರ್​ ಎಂಬಾತ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ತನ್ನ ಬೈಕ್​ನಿಂದ ಆಯುಧವನ್ನು ತೆಗೆದುಕೊಂಡು ಹಲ್ಲೆ ಮುಂದಾಗಿದ್ದಾನೆ. ಈ ಸಂಬಂಧ ಮೂರು ತಂಡಗಳನ್ನು ರಚಿಸಲಾಗಿದ್ದು, ಘಟನೆಗೆ ಕಾರಣ ತಿಳಿಯಲಾಗುತ್ತಿದೆ. ಇನ್ನೂ ಈ ಸಂಬಂದ ಒಂದು ಕೇಸ್​ ದಾಖಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

Shivamogga: ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕನಿಂದ ತಲ್ವಾರ್ ಅಟ್ಯಾಕ್, ಜಸ್ಟ್ ಮಿಸ್!

ಸ್ವಯಂ ಘೋಷಿತ ಬಂದ್ ಗೆ ಕರೆ: ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನಿಸಿರುವ ಹಿನ್ನಲೆಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು,ಕಾರ್ಯಕರ್ತರು ಸಾಗರ ಟೌನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಮಂಗಳವಾರ ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಿದ್ದಾರೆ. ಹಲ್ಲೆಗೆ ಯತ್ನಿಸಿರುವ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

click me!