Latest Videos

ಬಕ್ರೀದ್‌ ಹಬ್ಬ: ಕೆಲವೆಡೆ ವಾಹನ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗಗಳು ಇಲ್ಲಿದೆ...

By Kannadaprabha NewsFirst Published Jun 16, 2024, 8:59 AM IST
Highlights

ಮೈಸೂರು ರಸ್ತೆಯ ಬಿ.ಬಿ. ಜಂಕ್ಷನ್ ಹತ್ತಿರದ ಮಸೀದಿ ಹಾಗೂ ಚಾಮರಾಜಪೇಟೆ 1ನೇ ಮುಖ್ಯರಸ್ತೆಯ 7ನೇ ಅಡ್ಡರಸ್ತೆ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಬೆಂಗಳೂರು (ಜೂ.16): ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯ ಸೋಮವಾರ (ಜೂ.17) ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಸಂಚಾರ ಪೊಲೀಸರು ನಗರದ ಮೈಸೂರು ರಸ್ತೆ ಮತ್ತು ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಸಾರ್ವಜನಿಕರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

ಮೈಸೂರು ರಸ್ತೆಯ ಬಿ.ಬಿ. ಜಂಕ್ಷನ್ ಹತ್ತಿರದ ಮಸೀದಿ ಹಾಗೂ ಚಾಮರಾಜಪೇಟೆ 1ನೇ ಮುಖ್ಯರಸ್ತೆಯ 7ನೇ ಅಡ್ಡರಸ್ತೆ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ಮೈಸೂರು ರಸ್ತೆ ಟೋಲ್‌ಗೇಟ್ ಜಂಕ್ಷನ್‌ನಿಂದ ಬಿಬಿ ಜಂಕ್ಷನ್ ಮೂಲಕ ಬಿಜಿಎಸ್ ಮೇಲ್ಸೇತುವೆಯಲ್ಲಿ ಟೌನ್‌ಹಾಲ್‌ವರೆಗೆ ಎಲ್ಲ ಮಾದರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಅಂತೆಯೇ ಟೌನ್ ಹಾಲ್ ಕಡೆಯಿಂದ ಮೈಸೂರು ಕಡೆಗೆ ಬಿಜಿಎಸ್ ಮೇಲ್ಸೇತುವೆಯಲ್ಲಿ ಬಿಬಿ ಜಂಕ್ಷನ್ ಮಾರ್ಗವಾಗಿ ಟೋಲ್‌ಗೇಟ್ ಜಂಕ್ಷನ್‌ವರೆಗೆ ಎಲ್ಲ ಮಾದರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್‌ನಿಂದ ತೈಲ ಬೆಲೆ ಹೆಚ್ಚಳ: ವಿಜಯೇಂದ್ರ

ಪರ್ಯಾಯ ಮಾರ್ಗಗಳು
* ಮೈಸೂರು ರಸ್ತೆ ಕಡೆಯಿಂದ ಟೌನ್‌ಹಾಲ್‌ ಕಡೆಗೆ ಹೋಗುವ ವಾಹನಗಳು ಕಿಮ್ಕೋ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ವಿಜಯನಗರದ ಮೂಲದ ಮುಂದಕ್ಕೆ ಸಾಗಬೇಕು

* ಟೌನ್‌ ಹಾಲ್‌ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಬರುವ ವಾಹನಗಳು ಬಿಜಿಎಸ್‌ ಮೇಲ್ಸೇತುವೆ ಕೆಳಗಿನ ಸರ್ವಿಸ್‌ ರಸ್ತೆ ಬಳಸಿಕೊಂಡು ವೆಟರ್ನರಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಗೂಡ್ಸ್‌ ಶೆಡ್‌ ರಸ್ತೆಯ ಮುಖಾಂತರ ಅಥವಾ ಸಿರಸಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಜೆ.ಜೆ.ನಗರ-ಟ್ಯಾಂಕ್‌ಬಂಡ್ ರಸ್ತೆ-ಹುಣಸೆಮರ ಮಾರ್ಗದಲ್ಲಿ ಸಾಗಬಹುದು

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಿರ್ಬಂಧ: ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಸಾಗರ್‌ ಆಸ್ಪತ್ರೆ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌ ವರೆಗೆ, ಜಿ.ಡಿ.ಮರ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌, 39ನೇ ಕ್ರಾಸ್‌ ರಸ್ತೆಯಲ್ಲಿ ಗುರಪ್ಪನಪಾಳ್ಯ ಜಂಕ್ಷನ್‌ನಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್‌ ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು
* ಡೇರಿ ಸರ್ಕಲ್‌ನಿಂದ ಬರುವ ವಾಹನಗಳು ಸಾಗರ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ತಿಲಕ್‌ನಗರ ಮುಖ್ಯರಸ್ತೆಯಲ್ಲಿ ಚಲಿಸಿ, ಸ್ವಾಗತ್ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಈಸ್ಟ್ ಎಂಡ್ ಮುಖ್ಯರಸ್ತೆಯಲ್ಲಿ ಚಲಿಸಬಹುದು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಬಲತಿರುವು ಪಡೆದು 28ನೇ ಮೇನ್ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು 8ನೇ ಮುಖ್ಯರಸ್ತೆಯಲ್ಲಿ ಚಲಿಸಿ ನೇರ ಡಾಲ್ಮಿಯಾ ಜಂಕ್ಷನ್ ವರೆಗೆ ಚಲಿಸಿ ಅಲ್ಲಿ ಎಡಕ್ಕೆ ಹೊರ ವರ್ತುಲ ರಸ್ತೆಯಲ್ಲಿ ಎಡಕ್ಕೆ ತಿರುವು ಪಡೆದು ಜಿ.ಡಿ. ಮರ ಜಂಕ್ಷನ್ ಕಡೆಗೆ ಚಲಿಸಿ ಅಲ್ಲಿ ಬಲಕ್ಕೆ ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು ಮುಂದೆ ಸಾಗಬಹುದು

ಪ್ರವಾಸೋದ್ಯಮಕ್ಕೆ ಹೊಸ ನೀತಿ, ಉದ್ದಿಮೆಗಳನ್ನು ಜಿಎಸ್‌ಟಿ ಕೊಲ್ಲುತ್ತಿದೆ: ಡಿಕೆಶಿ

* ಬನ್ನೇರುಘಟ್ಟ ಮುಖ್ಯರಸ್ತೆ ಬಿಳೇಕಹಳ್ಳಿ ಕಡೆಯಿಂದ ಡೈರಿ ಜಂಕ್ಷನ್‌ ಕಡೆಗೆ ಬರುವ ವಾಹನಗಳು ಜಿ.ಡಿ.ಮರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೊರ ವರ್ತುಲ ರಸ್ತೆಯಲ್ಲಿ ಚಲಿಸಿ, ಡಾಲ್ಮೀಯಾ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು 8ನೇ ಮೇನ್‌ ರಸ್ತೆಯಲ್ಲಿ ಚಲಿಸಿ 28ನೇ ಮುಖ್ಯರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸಾಗರ್‌ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಬನ್ನೇರುಘಟ್ಟ ಮುಖ್ಯರಸ್ತೆಗೆ ಸಂಪರ್ಕ ಪಡೆದು ಡೈರಿ ಜಂಕ್ಷನ್‌ ಕಡೆಗೆ ಸಂಚರಿಸಬಹುದು.

click me!