ವೈದ್ಯೆಯಾಗಬೇಕಿದ್ದಾಕೆ ಆತ್ಮಹತ್ಯೆಗೆ ಶರಣಾದಳು: ಕಾರಣವೇನು?

By Web Desk  |  First Published Jan 24, 2019, 4:44 PM IST

ವೈದ್ಯೆಯಾಗಬೇಕೆಂದು ಕನಸು ಕಂಡಿದ್ದ ವಿದ್ಯಾರ್ಥನಿಯೊಬ್ಬಳು ತನ್ನ ಕನಸು ನನಸಾಗಿಸುವ ಮುನ್ನವೇ ಆತ್ಮಹತ್ಯೆಗೆ ಶರಣಗಿದ್ದಾಳೆ. ಅಷ್ಟಕ್ಕೂ ಆಕೆ ಇಂತಹ ನಿರ್ಧಾರ ಕೈಗೊಂಡಿದ್ದೇಕೆ? ಇಲ್ಲಿದೆ ವಿವರ


ಬಳ್ಳಾರಿ[ಜ.24]: ಎಂಬಿಬಿಎಸ್ ಶಿಕ್ಷಣ ಪೂರೈಸಿ ವೈದ್ಯೆಯಾಗಬೇಕಿದ್ದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಸಿಕ್ಕಿವೆ ಎಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ  ಕೃಷ್ಣಾನಗರ ಕ್ಯಾಂಪ್ ನ ಎ.ವಿದ್ಯಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಎಂಬಿಬಿಎಸ್ 2 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ  ಈಕೆಗೆ ಮೈಕ್ರೋ ಬಯಾಲಜಿ ವಿಷಯದಲ್ಲಿ ಕಡಿಮೆ ಅಂಕಗಳು ಬಂದಿದ್ದವು. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

Tap to resize

Latest Videos

ಸದ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಮನೆ ನಡೆಸಿರುವ ಬಳ್ಳಾರಿ  ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

click me!