ಧಾರವಾಡ: ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ ಗಣೇಶ ವಿಗ್ರಹ ವಿಸರ್ಜನೆ ಅಪರಾಧ, ಡಿಸಿ ಹೆಗಡೆ

By Girish GoudarFirst Published Aug 30, 2023, 7:18 AM IST
Highlights

ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‍ಗಳಲ್ಲಿ ಶಬ್ದ ಮಾಲಿನ್ಯ ನಿಬಂಧನೆ ಮತ್ತು ನಿಯಂತ್ರಣ ನಿಯಮಗಳು 2000 ರ ನಿಬಂಧನೆಗಳನ್ನು ಕಟ್ಟು ನಿಟ್ಟಾಗಿ ಅನುಷ್ಠಾನ ಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಧಾರವಾಡ ಜಿಲ್ಲೆಯ್ಯಾದಂತ ಗಣೇಶ ಹಬ್ಬದ ಸಂದರ್ಭದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಗಳನ್ನು ಬಳಸದಂತೆ ನಿಗಾವಹಿಸಲಾಗುವುದು ಎಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ 

ವರದಿ: ಪರಮೇಶ್ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ 

ಧಾರವಾಡ(ಆ.30): ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ ಕಾಯ್ದೆ 1974 ರ ಪ್ರಕಾರ ಕಲಂ 33 (ಆ) ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆ ನದಿ ಕಾಲುವೆ ಬಾವಿ ಹಾಗೂ ಇತರೆ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿರುತ್ತದೆ ರಾಜ್ಯ ಉಚ್ಚನ್ಯಾಯಲಯ ನೀಡಿರುವ ಆದೇಶದಲ್ಲಿ ಮಂಡಳಿಯ ಹೊರಡಿಸಿರುವ ಅಧಿಸೂಚನೆಯನ್ನು ಕ್ರಮಬದ್ಧಗೊಳಿಸಿದೆ ಹಾಗೂ ಅಂತಹ ಉಲ್ಲಂಘನೆ ಮಾಡುವವರಿಗೆ  ಐಪಿಸಿ 1860 ರ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

Latest Videos

ಈ ಕುರಿತು ಪ್ರಕಟಣೆ ನೀಡಿರುವ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿರುವ ಗಣಪತಿ ವಿಗ್ರಹಗಳ ತಯಾರಿಕಾ ಘಟಕ ಹಾಗೂ ಮಾರಾಟ ಮಾಡುವ ಮಳಿಗೆಗಳನ್ನು ಪರಿವೀಕ್ಷಿಸಿದಾಗ ನಿಷೇದಿತ ಪದಾರ್ಥ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ವಿಗ್ರಹಗಳನ್ನು ತಯಾರಿಸುತ್ತಿರುವುದು ಅವುಗಳನ್ನು ಹಾಗೂ ಬಣ್ಣಲೇಪಿತವಾದ ವಿಗ್ರಹಗಳನ್ನು ಮಾರಾಟಕ್ಕೆ ಇಟ್ಟಿರುವುದನ್ನು ಗಮನಿಸಿರುತ್ತಾರೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಉಪಯೋಗಿಸಿ ತಯಾರಿಸುತ್ತಿರುವ ವಿಗ್ರಹಗಳು ಬಣ್ಣಲೇಪಿತವಾದ ವಿಗ್ರಹಗಳು ಹಾಗೂ ಈಗಾಗಲೇ ತಯಾರಿಸಿ ಅಥವಾ ಇತರೆ ರಾಜ್ಯಗಳಿಂದ ಆಮದು ಮಾಡಿಕೊಂಡು ಮಾರಾಟಕ್ಕೆ ಇಟ್ಟಿರುವ ನಿಷೇಧಿತ ವಿಗ್ರಹಗಳನ್ನು ಮಾರಾಟ ಮಾಡುವ ವ್ಯಕ್ತಿ ,ಸಂಸ್ಥೆಗಳ ಮೇಲೆ ಕ್ರಮ ಕೈಕೊಳ್ಳುವಂತೆ ಪುರಸಭೆಯ ಪೌರಾಯುಕ್ತರು ಮತ್ತು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ಮುಂದೆ ಭಾರತವೇ ಇಡೀ ಜಗತ್ತನ್ನು ಮುನ್ನಡೆಸಲಿದೆ: ಜೋಶಿ ಭರವಸೆ

ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‍ಗಳಲ್ಲಿ ಶಬ್ದ ಮಾಲಿನ್ಯ ನಿಬಂಧನೆ ಮತ್ತು ನಿಯಂತ್ರಣ ನಿಯಮಗಳು 2000 ರ ನಿಬಂಧನೆಗಳನ್ನು ಕಟ್ಟು ನಿಟ್ಟಾಗಿ ಅನುಷ್ಠಾನ ಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಧಾರವಾಡ ಜಿಲ್ಲೆಯ್ಯಾದಂತ ಗಣೇಶ ಹಬ್ಬದ ಸಂದರ್ಭದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಗಳನ್ನು ಬಳಸದಂತೆ ನಿಗಾವಹಿಸಲಾಗುವುದು.

ಸದರಿ ಅಧಿಸೂಚನೆಯನ್ನು ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!