ನಗರ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರು ಹಾಗೂ ಖಾಸಗಿ ವ್ಯಕ್ತಿಗಳು ಎಲ್ಲಿಂದರಲ್ಲಿ ಕಟ್ಟಡ ತ್ಯಾಜ್ಯ ಸುರಿದು ಸೌಂದರ್ಯ ಹಾಳು ಮಾಡುವುದು ಕರ್ನಾಟಕ ಪೌರ ನಿಗಮಗಳ ಕಾಯ್ದೆ ಪ್ರಕರಣ 256ಕ್ಕೆ ವಿರುದ್ಧವಾಗಿದೆ. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ತಿಯಿಂದ ಮತ್ತು ಕೆಡವುವಿಕೆಯಿಂದ ಉತ್ಪತ್ತಿ ಆಗುವ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡುವುದಕ್ಕಾಗಿ ಮೈಸೂರು ನಗರದದಲ್ಲಿನ ಸಿಎ 05, ಹಂಚ್ಯಾ-ಸಾತಗಳ್ಳಿ ’ಎ’ ವಲಯದಲ್ಲಿ ಖಾಲಿ ಪ್ರದೇಶ ಗುರುತಿಸಲಾಗಿದೆ.
ಮೈಸೂರು : ನಗರ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರು ಹಾಗೂ ಖಾಸಗಿ ವ್ಯಕ್ತಿಗಳು ಎಲ್ಲಿಂದರಲ್ಲಿ ಕಟ್ಟಡ ತ್ಯಾಜ್ಯ ಸುರಿದು ಸೌಂದರ್ಯ ಹಾಳು ಮಾಡುವುದು ಕರ್ನಾಟಕ ಪೌರ ನಿಗಮಗಳ ಕಾಯ್ದೆ ಪ್ರಕರಣ 256ಕ್ಕೆ ವಿರುದ್ಧವಾಗಿದೆ. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ತಿಯಿಂದ ಮತ್ತು ಕೆಡವುವಿಕೆಯಿಂದ ಉತ್ಪತ್ತಿ ಆಗುವ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡುವುದಕ್ಕಾಗಿ ಮೈಸೂರು ನಗರದದಲ್ಲಿನ ಸಿಎ 05, ಹಂಚ್ಯಾ-ಸಾತಗಳ್ಳಿ ’ಎ’ ವಲಯದಲ್ಲಿ ಖಾಲಿ ಪ್ರದೇಶ ಗುರುತಿಸಲಾಗಿದೆ.
ಸಾರ್ವಜನಿಕರು ಹಾಗೂ ಖಾಸಗಿ ವ್ಯಕ್ತಿಗಳು ಸೂಚಿಸಿರುವ ಸ್ಥಳದಲ್ಲಿಯೇ ಕಡ್ಡಾಯವಾಗಿ ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡಬೇಕು. ಮುಂದಿನ ದಿನಗಳಲ್ಲಿ ನಗರ ಪ್ರದೇಶದ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ವಿಲೇವಾರಿ ಮಾಡಿದಲ್ಲಿ ಸಂಬಂಧಪಟ್ಟಕಟ್ಟಡದ ಮಾಲೀಕರು ಹಾಗೂ ವಾಹನದ ಮಾಲೀಕರಿಬ್ಬರಿಗೂ ಬಾರಿ ಮಟ್ಟದ ದಂಡ ವಿಧಿಸುವ ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ನಗರ ಪಾಲಿಕೆ ಆಯುಕ್ತರು ಎಚ್ಚರಿಸಿದ್ದಾರೆ.
undefined
ಸಿಗ್ನಲ್ ಫ್ರೀ ಟ್ರಾಫಿಕ್ ಮುಕ್ತ ಸಂಚಾರ- ಕಸ ಸಮಸ್ಯೆಗೆ ಮುಕ್ತಿ
ಬೆಂಗಳೂರು (ಫೆ.17): ಬೆಂಗಳೂರು ನಗರದ ಸಾರಿಗೆ ವ್ಯವಸ್ಥೆಗೆ ಸಂಪೂರ್ಣ ಚೇತರಿಕೆ ಒದಗಿಸಲು ಸಿಎಂ ಬಸವರಾಜ ಬೊಮ್ಮಾಯಿ ಪ್ರಯತ್ನಿಸಿದ್ದಾರೆ. ಫೆರಿಫೆರಲ್ ರಿಂಗ್ ರಸ್ತೆ, ಸಿಗ್ನಲ್ ಫ್ರೀ ಕಾರಿಡಾರ್, ಎಲಿವೇಟೆಡ್ ಕಾರಿಡಾರ್, ಮೆಟ್ರೋ ಮಾರ್ಗದ ವಿಸ್ತರಣೆ, ತ್ಯಾಜ್ಯ ನೀರು ಸಂಸ್ಕರಣೆ, ಘನತಯಾಜ್ಯ ನಿರ್ವಹಣೆ, ಉಪನಗರ ರೈಲು ಯೋಜನೆಗೆ ನೆರವು ಸೇರಿದಂತೆ ಸುಮಾರು 3 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ.
ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence)ನ ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಮೂಲಕ ಸೀಮ್‌ಲೆಸ್ ಸಿಗ್ನಲಿಂಗ್ (Seamless Signalling) ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.
ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿ.ಇ.ಎಲ್ ರಸ್ತೆಯ ವರೆಗೆ Integrated ಮೇಲೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು. 1,000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.
Karnataka Budget 2023-24: ಬೆಂಗಳೂರಿಗೆ 9,698 ಕೋಟಿ ರೂ. ಬಂಪರ್- 110 ಹಳ್ಳಿಗಳಿಗೆ ಕಾವೇರಿ ನೀರು ಲಭ್ಯ
ಕಳೆದ 2007ನೇ ಇಸವಿಯಲ್ಲಿ ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ 300ಕೋಟಿ ರೂಪಾಯಿ ಒದಗಿಸಲಾಗುವುದು. ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು 300 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.