ಮಂತ್ರಾಲಯ ಮಠದಲ್ಲಿ ಭಕ್ತರಿಗೆ ಪ್ರವೇಶಕ್ಕೆ ಮತ್ತೆ ನಿಷೇಧ| ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿರುವ ಮಂತ್ರಾಲಯ| ರಾಘವೇಂದ್ರ ಮಠದಲ್ಲಿ ಭಕ್ತರಿಗೆ ಪ್ರತ್ಯಕ್ಷ ದರ್ಶನ, ತೀರ್ಥಪ್ರಸಾದ ವ್ಯವಸ್ಥೆಗೆ ನಿಷೇಧ| ಮುಂದಿನ ಸೂಚನೆವರೆಗೆ ಭಕ್ತರು ಮಂತ್ರಾಲಯಕ್ಕೆ ಬರದಂತೆ ಮನವಿ|
ರಾಯಚೂರು(ಮೇ.01): ದೇಶಾದ್ಯಂತ ಮಹಾಮಾರಿ ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೆ ತಂದಿದೆ. ಹೀಗಾಗಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಮಂತ್ರಾಲಯ ಮಠದಲ್ಲಿ ಭಕ್ತರಿಗೆ ಪ್ರವೇಶಕ್ಕೆ ಮತ್ತೆ ನಿಷೇಧ ಹೇರಲಾಗಿದೆ.
ಈ ಸಂಬಂಧ ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀ ರಾಘವೇಂದ್ರಸ್ವಾಮಿ ಮಠದ ಆಡಳಿತ ಮಂಡಳಿಯ ಮಠದ ವ್ಯವಸ್ಥಾಪಕ ವೆಂಕಟೇಶ ಜೋಶಿ ಅವರು, ಇಂದಿನಿಂದ(ಮೇ1) ರಿಂದ ರಾಘವೇಂದ್ರ ಮಠದಲ್ಲಿ ಭಕ್ತರಿಗೆ ಪ್ರತ್ಯಕ್ಷ ದರ್ಶನ, ತೀರ್ಥಪ್ರಸಾದ ವ್ಯವಸ್ಥೆಯಿರುವುದಿಲ್ಲ ಎಂದು ತಿಳಿಸಿದೆ.
undefined
ಮಂತ್ರಾಲಯದ ಪೀಠಾಧಿಪತಿಗಳ ʼಆಪ್ತ ಕಾರ್ಯದರ್ಶಿ ಕೊರೋನಾಗೆ ಬಲಿ
ಮಂತ್ರಾಲಯದಲ್ಲಿ ಸ್ಥಳೀಯವಾಗಿ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಭಕ್ತರು ಆನ್‌ಲೈನ್ ಮೂಲಕ ಸೇವೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಮುಂದಿನ ಸೂಚನೆವರೆಗೆ ಭಕ್ತರು ಮಂತ್ರಾಲಯಕ್ಕೆ ಬರದಂತೆ ವೆಂಕಟೇಶ ಜೋಶಿ ಅವರು ಮನವಿ ಮಾಡಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona