ಹಸಿರು ಪಟಾಕಿ ಹೊರತುಪಡಿಸಿ ಇತರೆ ಪಟಾಕಿಗಳ ನಿಷೇಧ

By Kannadaprabha News  |  First Published Nov 3, 2023, 9:30 AM IST

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15 ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದಮಾಲಿನ್ಯ ಹಾಗೂ ವಾಯು ಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮವಾಗುವುದನ್ನು ನಿಯಂತ್ರಿಸಲು ತಡೆಗಟ್ಟಲು ಸುಪ್ರೀಂಕೋರ್ಟ್ ಹೊರಡಿಸಿರುವ ಆದೇಶಗಳನ್ನು ತಪ್ಪದೇ ಪಾಲಿಸುವುದು ಸಾರ್ವಜನಿಕರ ಜವಾಬ್ದಾರಿಯಾಗಿರುತ್ತದೆ.


 ಮೈಸೂರು :  ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15 ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದಮಾಲಿನ್ಯ ಹಾಗೂ ವಾಯು ಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮವಾಗುವುದನ್ನು ನಿಯಂತ್ರಿಸಲು ತಡೆಗಟ್ಟಲು ಸುಪ್ರೀಂಕೋರ್ಟ್ ಹೊರಡಿಸಿರುವ ಆದೇಶಗಳನ್ನು ತಪ್ಪದೇ ಪಾಲಿಸುವುದು ಸಾರ್ವಜನಿಕರ ಜವಾಬ್ದಾರಿಯಾಗಿರುತ್ತದೆ.

ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಗಳನ್ನು ಸ್ಫೋಟಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.

Latest Videos

undefined

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಪಟಾಕಿಗಳನ್ನು ಬಿಟ್ಟು ಇತರೆ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ.

ಪಟಾಕಿಗಳನ್ನು ಬಳಸುವ ಸಂದರ್ಭದಲ್ಲಿ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದoತೆ ಬಳಸಬೇಕು. ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತಲಿನ ಹಾಗೂ ಇನ್ಯಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಫೋಟಿಸುವಂತಿಲ್ಲ. ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಗಳ ಮೇಲೆ ಹಸಿರು ಪಟಾಕಿಯ ಚಿಹ್ನೆ ಇರುತ್ತದೆ ಹಾಗೂ ಕ್ಯೂ ಆರ್ ಕೋಡ್ ಸಹ ಇರುತ್ತದೆ.

ಪಟಾಕಿ ಮಾರಾಟಗಾರರಿಗೆ ವಿಶೇಷ ಸೂಚನೆ

ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಿ, ಅಲ್ಲಿ ಹಸಿರು ಪಟಾಕಿಯಲ್ಲದೇ ಇನ್ಯಾವುದಾರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಇಡೀ ಗೋದಾಮುನ್ನು ಮುಟ್ಟುಗೋಲು ಮಾಡಲಾಗುವುದು. ಯಾವುದೇ ಹಸಿರು ಪಟಾಕಿಗಳ ಪ್ಯಾಕೇಟ್ ಗಳನ್ನು ರ್ಯಾಂ ಡಮ್ ಆಗಿ ಸಂಗ್ರಹಿಸಿ ನಿಗಧಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಿ, ಅದು ಗುಣಮಾಪನಗಳಿಗೆ ಸರಿ ಹೊಂದದ್ದಿದಲ್ಲಿ ಅವುಗಳನ್ನು ಸಹ ಕೂಡಲೇ ಮುಟ್ಟುಗೋಲು ಮಾಡಿಕೊಳ್ಳಲಾಗುವುದು.

ಹಸಿರು ಪಟಾಕಿಗಳನ್ನಲ್ಲದೆ ಬೇರೆ ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಪರಿಸರ ಸಂರಕ್ಷಣೆ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

click me!