ಬೆಂಗಳೂರು ವಿವಿ ವಿದ್ಯಾರ್ಥಿನಿ ಶಿಲ್ಪಾ ಮರಣೋತ್ತರ ಪರೀಕ್ಷೆ ಅಂತ್ಯ: ಕುಟುಂಬಸ್ಥರಿಗೆ ಮೃತ ದೇಹ ಹಸ್ತಾಂತರ

Published : Oct 23, 2022, 12:37 PM IST
ಬೆಂಗಳೂರು ವಿವಿ ವಿದ್ಯಾರ್ಥಿನಿ ಶಿಲ್ಪಾ ಮರಣೋತ್ತರ ಪರೀಕ್ಷೆ ಅಂತ್ಯ: ಕುಟುಂಬಸ್ಥರಿಗೆ ಮೃತ ದೇಹ ಹಸ್ತಾಂತರ

ಸಾರಾಂಶ

ಬೆಂಗಳೂರು ವಿವಿ ವಿದ್ಯಾರ್ಥಿನಿ ಶಿಲ್ಪಾ ಮರಣೋತ್ತರ ಪರೀಕ್ಷೆ ಅಂತ್ಯವಾಗಿದ್ದು, ಕುಟುಂಬಸ್ಥರಿಗೆ ಮೃತ ದೇಹ ಹಸ್ತಾಂತರ ಮಾಡಲಾಗಿದೆ. ಕೋಲಾರದ ಬಂಗಾರಪೇಟೆಗೆ ಮೃತ ದೇಹ ರವಾನೆ ಮಾಡಲಾಗುತ್ತಿದ್ದು, ಬಂಗಾರಪೇಟೆಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಬೆಂಗಳೂರು (ಅ.23): ಕಳೆದ ಅಕ್ಟೋಬರ್‌ 10ರಂದು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬಿಎಂಟಿಸಿ ಬಸ್ ಹರಿದು ಶಿಲ್ಪಾ ಎಂಬ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಶಿಲ್ಪಾ ಇಂದು ಮುಂಜಾನೆ 4:30ರ ಸುಮಾರಿಗೆ ಕೊನೆಯುಸಿರೆಳೆದಿದ್ದರು. ಇದೀಗ ಶಿಲ್ಪಾ ಮರಣೋತ್ತರ ಪರೀಕ್ಷೆ ಅಂತ್ಯವಾಗಿದ್ದು, ಕುಟುಂಬಸ್ಥರಿಗೆ ಮೃತ ದೇಹ ಹಸ್ತಾಂತರ ಮಾಡಲಾಗಿದೆ. ಕೋಲಾರದ ಬಂಗಾರಪೇಟೆಗೆ ಮೃತ ದೇಹ ರವಾನೆ ಮಾಡಲಾಗುತ್ತಿದ್ದು, ಬಂಗಾರಪೇಟೆಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಸರ್ಕಾರ ನಮ್ಮ ಕುಟುಂಬಕ್ಕೆ ಸರ್ಕಾರಿ ಕೆಲಸವನ್ನು ಕೊಡಬೇಕು: ನಮ್ಮ ಅಪ್ಪ ಅಮ್ಮ ಕೂಲಿ ಕೆಲಸವನ್ನು ಮಾಡಕೊಂಡಿದ್ದರು. ನಮಗೆ ಒಳ್ಳೆಯ ಶಿಕ್ಷಣವನ್ನು ಕೊಡಿಸಿದ್ದರು. ಮಾತ್ರವಲ್ಲದೇ ಅವಳನ್ನೇ ನಂಬಿಕೊಂಡು ಕೂಡ ಇದ್ದರು ಎಂದು ಮೃತ ಶಿಲ್ಪಾಳ ಅಕ್ಕ ನಂದಿತ ಹೇಳಿದ್ದಾರೆ. ಶಿಲ್ಪಾ ಮುಂದೆ ಸರ್ಕಾರಿ ಕೆಲಸವನ್ನು ತೆಗೆದುಕೊಳ್ಳುಬೇಕು ಅನ್ನೋ ಹಂಬಲವನ್ನು‌ ಇಟ್ಟುಕೊಂಡಿದ್ದು, ಸರ್ಕಾರಿ ಕೆಲಸಕ್ಕೆ ಟ್ರೈ ಕೂಡಾ ಮಾಡುತ್ತಿದ್ದಳು. ಸರ್ಕಾರ ನಮ್ಮ ಕುಟುಂಬಕ್ಕೆ ಸರ್ಕಾರಿ ಕೆಲಸವನ್ನು ಕೊಡಬೇಕು. ಎರಡು ದಿನದ ಹಿಂದೆ ನನ್ನ ಜೊತೆ ಚೆನ್ನಾಗಿ ಮಾತನಾಡಿದ್ದಳು. ಅದರೆ ಇದೀಗ ಬೆಳ್ಳಗ್ಗೆ ಸಡನ್ ಆಗಿ ಹೀಗೇ ಆಗಿದೆ ಎಂದು ಭಾವುಕರಾಗಿ ಶಿಲ್ಪಾಳ ಅಕ್ಕ ನಂದಿತ ತಿಳಿಸಿದರು.

ಬೆಂಗಳೂರು ವಿ.ವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಆ್ಯಕ್ಸಿಡೆಂಟ್ ಪ್ರಕರಣ: ಚಿಕ್ಸಿತೆ ಫಲಕಾರಿಯಾಗದೆ ಶಿಲ್ಪ ಸಾವು

ಶಿಲ್ಪಾಶ್ರೀಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು: ಸರ್ಕಾರ ಮಾತು ಕೊಟ್ಟಿತ್ತು, ತಾತ್ಸರ ಮಾಡೋದು ಬೇಡ, ಶಿಲ್ಪಾಶ್ರೀಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಸ್ಟೂಡೆಂಟ್ ಯೂನಿಯನ್  ಲೀಡರ್ ಚಂದ್ರು ಪೆರಿಯರ್ ಹೇಳಿಕೆ ನೀಡಿದ್ದಾರೆ. ವೈದ್ಯಕೀಯ ಖರ್ಚು, ಹಾಗೂ ಕುಟುಂಬಕ್ಕೂ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವು. ಆದರೆ ಸರ್ಕಾರ ತಾತ್ಸರ ಮಾಡಿದೆ. ಇವರೆಗೆ ವೈದ್ಯಕೀಯ ಖರ್ಚು ಬಿಎಂಟಿಸಿ ಆಡಳಿತ ನೋಡಿಕೊಂಡಿದೆ. ನಮ್ಮ ಭರವಸೆಗೆ ಸ್ಪಂದಿಸದಿದ್ರೆ ಹೋರಾಟಕ್ಕೆ ಇಳಿಯುತ್ತೇವೆ. ಟೀಚರ್ಸ್ ಯೂನಿಯನ್‌ಗಳ ಜೊತೆ ಮಾತುಕತೆ ನಡೆಸಿ ಹೋರಾಟದ ಬಗ್ಗೆ ನಿರ್ಧಾರ ಮಾಡ್ತೇವೆ. ಆಕೆಯ‌ ಕುಟುಂಬಕ್ಕೆ ಸರ್ಕಾರಿ ಕೆಲಸವನ್ನು ಕೊಡಬೇಕು. ಪ್ರತಿಭಟನೆ ಸಂದರ್ಭದಲ್ಲಿ ಸಚಿವ ಸೋಮಣ್ಣ ಬೇಡಿಕೆ ಈಡೇರಿಸುತ್ತೇವೆ ಅಂತಾ ಭರವಸೆ ನೀಡಿದ್ದರು. ಹಾಗಾಗಿ ಭರವಸೆ ನೀಡಿದ ಹಾಗೇ ಈಡೇರಿಸುವ ಕೆಲಸ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಚಂದ್ರು ಪೆರಿಯರ್ ಎಚ್ಚರಿಸಿದರು.

Bengaluru: ಸಿಲಿಕಾನ್ ಸಿಟಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು

ಏನಿದು ಘಟನೆ: ಕೋಲಾರ ಮೂಲದ ಶಿಲ್ಪಾಶ್ರೀ (22) ಬೆಂಗಳೂರು ವಿಶ್ವವಿದ್ಯಾಲಯದ ಎಂಎಸ್ಸಿ ಗಣಿತ ವಿಷಯದ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅಕ್ಟೋಬರ್‌ 10 ಬೆಳಗ್ಗೆ 10.30ರ ಸುಮಾರಿಗೆ ಜ್ಞಾನಭಾರತಿ ಕ್ಯಾಂಪಸ್‌ನ ಮುಖ್ಯರಸ್ತೆಯಲ್ಲಿ ಬಿಎಂಟಿಸಿ ಬಸ್‌ಗಾಗಿ ಕಾಯುತ್ತಿದ್ದರು. ಈ ವೇಳೆ ಬಸ್‌ ಬಂದಿದ್ದು, ಶಿಲ್ಪಾಶ್ರೀ ಬಸ್‌ನ ಮಧ್ಯದ ಬಾಗಿಲಿನಲ್ಲಿ ಬಸ್‌ ಏರಲು ಮುಂದಾಗಿದ್ದಾರೆ. ಈ ವೇಳೆ ಬಸ್‌ ಏಕಾಏಕಿ ಮುಂದೆ ಚಲಿಸಿದ್ದರಿಂದ ಶಿಲ್ಪಾಶ್ರೀ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಬಸ್‌ನ ಎಡಭಾಗದ ಹಿಂಬದಿ ಚಕ್ರ ಶಿಲ್ಪಾಶ್ರೀಯ ಸೊಂಟದ ಎಡ ತೊಡೆಯ ಮೇಲೆ ಉರುಳಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿಲ್ಪಾಶ್ರೀಯನ್ನು ವಿದ್ಯಾರ್ಥಿಗಳು ಕೂಡಲೇ ಬನ್ನೇರುಘಟ್ಟದ ಫೋರ್ಟೀಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದ 14 ದಿನಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿನಿ ಇಂದು ಚಿಕ್ಸಿತೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

PREV
Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ