ರೆಹಮಾನ್ ಹ*ತ್ಯೆ ಪ್ರಕರಣ: RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನೋಟಿಸ್, ಮುಂದೇನು?

Published : Sep 26, 2026, 02:20 PM IST
kalladka prabhakar bhat

ಸಾರಾಂಶ

ಬಂಟ್ವಾಳದ ಬಡಗಬೆಳ್ಳೂರಿನಲ್ಲಿ ನಡೆದ ಅಬ್ದುಲ್ ರೆಹಮಾನ್ ಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಶನಿವಾರ ಅವರ ನಿವಾಸದಲ್ಲೇ ವಿಚಾರಣೆ ನಡೆಯಲಿದ್ದು, ಪ್ರಕರಣದ ಹೆಚ್ಚಿನ ಸತ್ಯಾಂಶ ಕಲೆಹಾಕಲು ಈ ಕ್ರಮ ಕೈಗೊಳ್ಳಲಾಗಿದೆ.

ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರಿನಲ್ಲಿ ನಡೆದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ. ಗ್ರಾಮಾಂತರ ಠಾಣೆಯ ಸಹಾಯಕ ತನಿಖಾಧಿಕಾರಿ ಕಲೈಮಾರ್.ಪಿ. ಅವರು ನೋಟಿಸ್ ಜಾರಿ ಮಾಡಿದ್ದು, ಪ್ರಕರಣಕ್ಕೆ ಸ೦ಬ೦ಧಿಸಿದ ಕೆಲವು ಸತ್ಯಾಂಶಗಳು ಹಾಗೂ ಸನ್ನಿವೇಶ ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ವಿಚಾರಣೆ ನಡೆಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಮನೆಯಲ್ಲೇ ವಿಚಾರಣೆಗೆ ಹಾಜರು

ಶನಿವಾರ ಕಲ್ಲಡ್ಕದಲ್ಲಿರುವ ತಮ್ಮ ನಿವಾಸದಲ್ಲೇ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

2025ರ ಮೇ 27ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ನಡೆದಿತ್ತು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇದುವರೆಗೆ 23 ಮಂದಿಯನ್ನು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನೂ ಸಲ್ಲಿಸಿದ್ದಾರೆ.

ಕೋಕಾ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿಗೆ ಜಾಮೀನು

ಪ್ರಕರಣದ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ಪ್ರಕರಣದಲ್ಲಿ ಕೋಕಾ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿಗೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಕಲ್ಲಡ್ಕ ಪ್ರಭಾಕರ ಭಟ್‌ಗೆ ನೀಡಿರುವ ನೋಟಿಸ್ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿದ್ದು, ಪೊಲೀಸರು ವಿಚಾರಣೆಯ ಮೂಲಕ ಕೆಲವು ಅಂಶಗಳನ್ನು ಪರಿಶೀಲಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಡಾ. ಕದ್ರಿ ಗೋಪಾಲನಾಥ್ ಅವರ ಸ್ಮರಣಾರ್ಥ ಸ್ಥಾಪಿಸಲಾಗಿದ್ದ ಸ್ಯಾಕ್ಸೋಫೋನ್ ಕಳವು!

ಇದನ್ನೂ ಓದಿ: ಧರ್ಮಸ್ಥಳ ಸೌಜನ್ಯ ಕೇಸ್ ಮರುತನಿಖೆ: SIT ಸದಸ್ಯರ ಬಗ್ಗೆ ತಾಯಿ ಕುಸುಮಾವತಿ ಅಸಮಾಧಾನ!

PREV
Read more Articles on
click me!

Recommended Stories

Mandya: ಒಂದು ವರ್ಷದಲ್ಲಿ ಡೈರಿಗೆ ಬರೋಬ್ಬರಿ 87 ಸಾವಿರ ಲೀ. ಹಾಲು ಪೂರೈಸಿದ ಕುಟುಂಬ
ಬೆಂಗಳೂರಿನ AI ಕ್ಯಾಮೆರಾದ ಕಮಾಲ್: ಹೆಲ್ಮೆಟ್ ಹಾಕಿಲ್ಲವೆಂದು ಬೆನ್ನಲ್ಲಿದ್ದ 'ಗಿಟಾರ್‌'ಗೆ ಬಿತ್ತು ₹500 ಟ್ರಾಫಿಕ್ ದಂಡ!