ಯಡಿಯೂರಪ್ಪ, ಬೊಮ್ಮಾಯಿ ಅನ್ಯಾಯ ಮಾಡಿದ್ದರಿಂದಲೇ ಬಿಜೆಪಿಗೆ ಹಿನ್ನಡೆ: ಕೂಡಲ ಶ್ರೀ

By Kannadaprabha News  |  First Published Sep 22, 2023, 8:35 PM IST

ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬೊಮ್ಮಾಯಿಯವರು 2ಎ ಮೀಸಲಾತಿ ನೀಡುವುದಾಗಿ ಹೇಳಿ ಅನ್ಯಾಯ ಮಾಡಿದ ಪರಿಣಾಮವಾಗಿಯೇ ಇಂದು ಬಿಜೆಪಿಗೆ ಹಿನ್ನಡೆಯಾಗಿದೆ. ನಮ್ಮ ಪಂಚಮಸಾಲಿ ಸಮಾಜವು ಪ್ರತಿಯೊಂದನ್ನೂ ಹೋರಾಟ ಮಾಡಿ ಪಡೆದುಕೊಳ್ಳುವ ಸ್ಥಿತಿಯಿದೆ ಎಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ. 


ಸಿಂದಗಿ(ಸೆ.22): ಸತ್ಯಾಗ್ರಹ, ಹೊಸ ತಾತ್ವಿಕತೆಗೆ ಮುನ್ನುಡಿ, ಉಪವಾಸ ಸತ್ಯಾಗ್ರಹಕ್ಕೆ ಸಿಂದಗಿಯ ಕೊಡುಗೆ ಸಿಂಹಪಾಲು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮಿಗಳು ನುಡಿದರು.

ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜ, ಜಗದ್ಗುರುಗಳ ಸಾನ್ನಿಧ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಹಾಗೂ ಉಪ ಮೀಸಲಾತಿಗಳನ್ನು ಕೇಂದ್ರ ಸರ್ಕಾರ ಒಬಿಸಿ ಮೀಸಲಾತಿಗಾಗಿ ವಿಜಯಪುರ ಜಿಲ್ಲಾಮಟ್ಟದ ಸಾಮೂಹಿಕ ಇಷ್ಟಲಿಂಗ ಪೂಜೆಯೊಂದಿಗೆ ಹಮ್ಮಿಕೊಂಡ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ 2ಎ ಮೀಸಲಾತಿಗಾಗಿ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬೊಮ್ಮಾಯಿಯವರು 2ಎ ಮೀಸಲಾತಿ ನೀಡುವುದಾಗಿ ಹೇಳಿ ಅನ್ಯಾಯ ಮಾಡಿದ ಪರಿಣಾಮವಾಗಿಯೇ ಇಂದು ಬಿಜೆಪಿಗೆ ಹಿನ್ನಡೆಯಾಗಿದೆ. ನಮ್ಮ ಪಂಚಮಸಾಲಿ ಸಮಾಜವು ಪ್ರತಿಯೊಂದನ್ನೂ ಹೋರಾಟ ಮಾಡಿ ಪಡೆದುಕೊಳ್ಳುವ ಸ್ಥಿತಿಯಿದೆ ಎಂದರು.

Tap to resize

Latest Videos

ಪಂಚಮಸಾಲಿ ಸಮಾಜಕ್ಕೆ ಡಿಸಿಎಂ ಸ್ಥಾನ ನೀಡಲಿ: ಕೂಡಲ ಶ್ರೀ

ಇದೇ ವೇಳೆ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ, ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಡಾ.ಅರವಿಂದ ಮನಗೂಳಿ, ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಪಂಚಮಸಾಲಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಆಸಂಗಿಹಾಳದ ಶಂಕರಾನಂದ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ಬಾಗೇವಾಡಿ ತಾಲೂಕಾಧ್ಯಕ್ಷ ಶಿವಾನಂದ ಮಂಗನವರ, ಸೋಮನಗೌಡ ಬಿರಾದಾರ, ಶ್ರೀಶೈಲ ಯಳಮೇಲಿ, ಆನಂದ ಶಾಬಾದಿ, ಮಲ್ಲನಗೌಡ ಪಾಟೀಲ, ಶಿವರಾಜ ಪಾಟೀಲ, ಚಂದ್ರಶೇಖರ ನಾಗರಬೆಟ್ಟ, ಶಿವು ಬಡಾನೂರ, ಡಾ.ಅಂಬರೀಶ ಬಿರಾದಾರ ಸೇರಿದಂತೆ ಸಮಾಜದರು ಉಪಸ್ಥಿತರಿದ್ದರು.

click me!