ಇಳಕಲ್ - ಕಾರವಾರ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಿ; ಸಚಿವ ನಿತಿನ್ ಗಡ್ಕರಿಗೆ ಸಂಸದ ಬೊಮ್ಮಾಯಿ ಮನವಿ

By Sathish Kumar KH  |  First Published Jul 3, 2024, 7:57 PM IST

ಇಳಕಲ್ - ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.


ನವ ದೆಹಲಿ (ಜು.03): ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ  ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ನವ ದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಭೇಟಿ ಮಾಡಿದ ಅವರು, ನಾನು ಕರ್ನಾಟಕದ ಮುಖ್ಯಮಂತ್ರಿ ಕೆಲಸ ಮಾಡಿದ್ದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ. ನನ್ನ ಅವಧಿಯಲ್ಲಿ ಕರ್ನಾಟಕದಲ್ಲಿ ರಸ್ತೆ ಹಾಗೂ ಹೆದ್ದಾರಿ ಮೂಲ ಸೌಕರ್ಯ  ಅಭಿವೃದ್ದಿಯಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ. ಪ್ರಸ್ತುತ ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸುವುದು ಅಗತ್ಯವಿದೆ. ಜೊತೆಗೆ, ರೋಣ ತಾಲೂಕಿನ ಗಜೇಂದ್ರಗಢ ರಿಂಗ್ ರಸ್ತೆ ಹಾಗೂ ಗದಗ ರಿಂಗ್ ರಸ್ತೆ ಯೋಜನೆಗಳನ್ನು ಜಾರಿಗೊಳಿಸುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದರು.

Tap to resize

Latest Videos

undefined

ಕೊಪ್ಪಳ:11 ಹಳ್ಳಕ್ಕೆ 39.80 ಕೋಟಿಯಲ್ಲಿ ಬ್ರಿಜ್‌ ಕಂ ಬ್ಯಾರೇಜ್ ನಿರ್ಮಾಣಕ್ಕೆ ಅನುಮೋದನೆ

ಚಿಕ್ಕಬಳ್ಳಾಪುರ ಹೆದ್ದಾರಿ ಯೋಜನೆಗಳಿಗೆ ಮನವಿ:
ಇದೇ ವೇಳೆ ಹಾಜರಿದ್ದ ಸಂಸದ ಡಾ.ಕೆ. ಸುಧಾಕರ್ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆದ್ದಾರಿ ಯೋಜನೆಗಳನ್ನು ಜಾರಿ ಮಾಡಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ NH-44 ಮತ್ತು NH-69 ರ ನಡುವೆ ಚತುಷ್ಫಥ ಹೊರವರ್ತುಲ ರಸ್ತೆ ನಿರ್ಮಿಸಲು ಕಾರ್ಯಸಾಧ್ಯತಾ ವರದಿ/ವಿಸ್ತೃತ ಯೋಜನಾ ವರದಿ ರೂಪಿಸಲು ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರ ದಿವಾಳಿಯಾಗಿದೆ, ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಹಣವಿಲ್ಲ: ಬಸವರಾಜ ಬೊಮ್ಮಾಯಿ

ಮುಂದುವರೆದು, ಚಿಕ್ಕಬಳ್ಳಾಪುರದಲ್ಲಿ NH-7 ನ ಎಲ್‌ಸಿ ನಂ. 39 ರಲ್ಲಿ ಚತುಷ್ಪಥ ರೈಲು ಮೇಲ್ಸೇತುವೆ ನಿರ್ಮಿಸಲು 40 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಬೇಕು. ಗೌರಿಬಿದನೂರಿನಲ್ಲಿ SH-9 ನಲ್ಲಿ ಚತುಷ್ಪಥ ರೈಲು ಮೇಲ್ಸೇತುವೆ ನಿರ್ಮಿಸಲು 75 ಕೋಟಿ ರೂ. ಅನುದಾನ ನೀಡಬೇಕು. NH-234 ರ ಅಗಲೀಕರಣದಿಂದ ಪ್ರಯಾಣದ ಅವಧಿ ಹಾಗೂ ದಟ್ಟಣೆ ಕಡಿಮೆಯಾಗಲಿದ್ದು, ಈ ಕುರಿತು ಕ್ರಮ ವಹಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದರು.

click me!