ಮುಂದಿನ ಅಧಿವೇಶನ ಬೆಳಗಾವಿಯಲ್ಲಿ ನಡೆಸಲು ನಿರ್ದೇಶನ: ಹೊರಟ್ಟಿ

Kannadaprabha News   | Asianet News
Published : Feb 13, 2021, 09:17 AM IST
ಮುಂದಿನ ಅಧಿವೇಶನ ಬೆಳಗಾವಿಯಲ್ಲಿ ನಡೆಸಲು ನಿರ್ದೇಶನ: ಹೊರಟ್ಟಿ

ಸಾರಾಂಶ

ಬಜೆಟ್‌ ಅಧಿವೇಶನ ಮುನ್ನ ಬೆಳಗಾವಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸುತ್ತೇನೆ| ಹಿಂದಿನ ಕಹಿ ಘಟನೆಗಳು ಮರುಕಳಿಸದಂತೆ, ಕಲಾಪವನ್ನು ಸುಗಮವಾಗಿ ನಡೆಸುವುದು, ಪ್ರಶ್ನೋತ್ತರ ಅವಧಿ ಹಾಗೂ ಸದನದ ಅಜೆಂಡಾಗಳನ್ನು ಪೂರ್ಣಗೊಳಿಸುವುದು ದೊಡ್ಡ ಸವಾಲಿನಿಂದ ಕೂಡಿದೆ: ಹೊರಟ್ಟಿ

ಹುಬ್ಬಳ್ಳಿ(ಫೆ.13): ಹಿಂದೆಯೇ ಸರ್ಕಾರ ನಿರ್ಧರಿಸಿರುವ ರಾಜ್ಯಮಟ್ಟದ ಕಚೇರಿಗಳನ್ನು ಬೆಳಗಾವಿ ಸುವರ್ಣ ಸೌಧಕ್ಕೆ ಸ್ಥಳಾಂತರ ವಿಷಯ ಸದನದಲ್ಲಿ ಚರ್ಚೆಗೆ ಬಂದಲ್ಲಿ ಖಂಡಿತವಾಗಿ ನಿರ್ದೇಶನ ನೀಡುತ್ತೇನೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವಂತೆ ನಿರ್ದೇಶನ ನೀಡಿದ್ದು, ಬಜೆಟ್‌ ಅಧಿವೇಶನ ಮುನ್ನ ಬೆಳಗಾವಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸುತ್ತೇನೆ ಎಂದು ತಿಳಿಸಿದರು.

 ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಬಗ್ಗೆ ಮಾತನಾಡಲ್ಲ: ಹೊರಟ್ಟಿ

ಹಿಂದಿನ ಕಹಿ ಘಟನೆಗಳು ಮರುಕಳಿಸದಂತೆ, ಕಲಾಪವನ್ನು ಸುಗಮವಾಗಿ ನಡೆಸುವುದು, ಪ್ರಶ್ನೋತ್ತರ ಅವಧಿ ಹಾಗೂ ಸದನದ ಅಜೆಂಡಾಗಳನ್ನು ಪೂರ್ಣಗೊಳಿಸುವುದು ದೊಡ್ಡ ಸವಾಲಿನಿಂದ ಕೂಡಿದೆ. ಎಲ್ಲ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮರ್ಥವಾಗಿ ಸದನ ನಡೆಸುತ್ತೇವೆ ಎಂದು ತಿಳಿಸಿದರು.
 

PREV
click me!

Recommended Stories

ಕಾರವಾರದಲ್ಲಿ ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ!
ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ