ಶಾಸಕ ಸ್ಥಾನಕ್ಕೆ ಜೂ.17ರಂದು ರಾಜೀನಾಮೆ ಸಲ್ಲಿಕೆ; ಬಸವರಾಜ ಬೊಮ್ಮಾಯಿ

By Sathish Kumar KH  |  First Published Jun 13, 2024, 6:49 PM IST

ಜೂನ್ 17ರಂದು ನಾನು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.


ಹಾವೇರಿ (ಜೂ.13): ನಾನು ಜೂನ್ 17ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ಬಳಿಕ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಕ್ರಿಯೆ ಶುರುವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ನೂತನ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಈಗಲೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿದ್ದೇನೆ. ನಾನು ರಾಜೀನಾಮೆ ಕೊಟ್ಟ ನಂತರವೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಲಿವೆ. ನಾನು ಜೂ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ಬಳಿಕ ಶಿಗ್ಗಾವಿ ಉಪಚುನಾವಣೆ ಪ್ರಕ್ರಿಯೆ ಶುರುವಾಗಲಿದೆ. ಆದರೆ, ಬಿಜೆಪಿಯಿಂದ ಯಾರಿಗೆ ಟಿಕೆಟ್ ಕೊಡುತ್ತಾರೆ ಎಂಬ ಬಗ್ಗೆ ಮಾಹಿತಿಯಿಲ್ಲ. ಹೈಕಮಾಂಡ್‌ನಿಂದ ಈ ಕ್ಷೇತ್ರದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದರ ಬಗ್ಗೆ ಸಮೀಕ್ಷೆ ನಡೆಸಿ ಜನಾಭಿಪ್ರಾಯ ಯಾರ ಪರ ಇದೆಯೋ ಅವರಿಗೆ ಪಕ್ಷ ಟಿಕೇಟ್ ನೀಡಲಿದೆ. ನಮ್ಮಲ್ಲೂ ಅನೇಕ ಸಮರ್ಥ ಅಭ್ಯರ್ಥಿಗಳಿದ್ದಾರೆ. ಖಂಡಿತವಾಗಿ ಶಿಗ್ಗಾವಿ ಉಪಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿದರು.

Tap to resize

Latest Videos

undefined

ದರ್ಶನ್ ಕ್ರೌರ್ಯಕ್ಕೆ ಮತ್ತೊಂದು ಸಾಕ್ಷಿ; ಹುಟ್ಟಿದ ಮನೆ ಧ್ವಂಸಗೊಳಿಸಿ ಸೋದರ ಮಾವನ ಬೀದಿಗಟ್ಟಿದ ಡೆವಿಲ್

100 ದಿನದ ಅಭಿವೃದ್ಧಿ ಕಾರ್ಯಕ್ರಮ ಘೋಷಣೆ: ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ 100 ದಿನದ ಕಾರ್ಯಕ್ರಮ ಘೋಷಣೆ ಮಾಡಿ, ಅನುಷ್ಠಾನ ಮಾಡಲು ತೀರ್ಮಾನಿಸಲಾಗಿದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಮೈತ್ರಿ ಪಕ್ಷಗಳಿಗೆ ಹಾಗೂ ಆ ಪಕ್ಷಗಳಲ್ಲಿ ಅನುಭವ ಇರುವ‌ ನಾಯಕರಿಗೆ ಆದ್ಯತೆ ಕೊಡುವ ಅಗತ್ಯ ಇತ್ತು. ಅಲ್ಲದೇ, ಹಿಂದಿನ ಸರ್ಕಾರದಲ್ಲಿ ಕೆಲಸ ಮಾಡಿದ ಪ್ರಮುಖರೆಲ್ಲರಿಗೂ ಸಚಿವರನ್ನಾಗಿ ಮುಂದುವರೆಸಲಾಗಿದೆ. ಹೀಗಾಗಿ, ನನಗೆ ಸಚಿವ ಸ್ಥಾನ ತಪ್ಪಿರಬಹುದು. ನನಗೆ ಅನುಭವವಿರುವುದರಿಂದ ಸಂಸದನಾಗಿಯೂ ಅತಿ ಹೆಚ್ಚು ಅಭಿವೃದ್ಧಿ ಕೆಲಸ ಮಾಡುವೆ. ನಾಳೆ ಹಾವೇರಿ ಜಿಲ್ಲೆಯ ಡಿಸಿ ಕಚೇರಿಯಲ್ಲಿ ಕೇಂದ್ರದ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಲಿದ್ದೇನೆ. ಕೇಂದ್ರದ ಯೋಜನೆಗಳನ್ನು ಚುರುಕುಗೊಳಿಸುವೆ ಎಂದು ಹೇಳಿದರು. 

ರಾಜ್ಯ ಸರ್ಕಾರ ಹಾಗೂ ಕೃಷಿ ಇಲಾಖೆ ರೈತ ವಿರೋಧಿಯಾಗಿದೆ: ರಾಜ್ಯದಲ್ಲಿ ಈ ಬಾರಿ ಮಳೆ ಚೆನ್ನಾಗಿ ಆಗಿದ್ದು, ರೈತರಿಗೆ ಶುಭ ಸೂಚನೆ ಸಿಕ್ಕಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲಿಯೇ ಬರಗಾಲ‌ ಶುರುವಾಗಿತ್ತು. ಮೋದಿಯವರ ಸರ್ಕಾರ ಬಂದ ಕೂಡಲೇ ಮಳೆ ಶುರುವಾಗಿದೆ. ರಾಜ್ಯ ಸರ್ಕಾರ ರೈತರಿಗೆ ಬೀಜ ಗೊಬ್ಬರ ಸರಿಯಾಗಿ ವ್ಯವಸ್ಥೆ ಮಾಡಿಲ್ಲ. ರೈತರಿಗೆ ಬೇಕಾಗಿರುವ ಗೊಬ್ಬರ ಸರಬರಾಜು ಮಾಡುವುದನ್ನು ಬಿಟ್ಟು ತಮ್ಮ ಹತ್ತಿರ ಇರುವ ಗೊಬ್ಬರ ತೆಗೆದುಕೊಂಡು ಹೋಗುವಂತೆ ಹೇಳುತ್ತಿದ್ದಾರೆ. ಕೃಷಿ ಇಲಾಖೆ ರೈತರ ವಿರೋಧಿ ಇಲಾಖೆ ಆಗಿದೆ. ಸೊಸೈಟಿಗಳಲ್ಲಿ ಗೊಬ್ಬರ ಇಲ್ಲ ವ್ಯಾಪಾರಸ್ಥರ ಬಳಿ ಗೊಬ್ಬರ  ಇದೆ. ಹೆಚ್ಚಿನ ದರಕ್ಕೆ ಗೊಬ್ಬರ ಮಾರುತ್ತಿದ್ದಾರೆ. ಆದರೆ, ಅಧಿಕಾರಿಗಳು ಎಲ್ಲಿಯೂ ದಾಳಿ ಮಾಡಿಲ್ಲ. ಹಾವೇರಿ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮುಂಗಾರು ಹಿಂಗಾಮ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಜಾಮೀನು ರಹಿತ ವಾರಂಟ್ ಜಾರಿ; ಪೋಕ್ಸೋ ಕೇಸ್‌ನಲ್ಲಿ ಬಂಧನ ಸಾಧ್ಯತೆ

ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ: ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ದಿವಾಳಿಯಾಗಿದೆ. ಸಿಎಂ ಸಿದ್ದರಾಮಯ್ಯ 15 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ, ಒಂದೇ ವರ್ಷದಲ್ಲಿ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಫಲಾನುಭವಿಗಳಿಗೆ ಸರಿಯಾಗಿ ಯೋಜನೆಗಳು ತಲುಪುತ್ತಿಲ್ಲ. ಫಲಾನುಭವಿ ಆಗದವರಿಗೆ ಯಾವುದೇ ಪ್ರಯೋಜನ ಆಗಿಲ್ಲ. ಎರಡೂ ವರ್ಗದವರು ಶೀಘ್ರವೇ ಸರ್ಕಾರದ ವಿರುದ್ದ ತಿರುಗಿ ಬೀಳಲಿದ್ದಾರೆ. ಅನುದಾನದ ಕೊರತೆಯಿಂದಾಗಿ ಶಿಗ್ಗಾವಿಯಲ್ಲಿ ನಡೆಯುತ್ತಿರುವ ಎನ್ ಕೆಎಸ್ ಆರ್ ಟಿಸಿ ಡಿಪೊ ಹಾಗೂ ತರಬೇತಿ ಕೇಂದ್ರ, ಮೆಟ್ರಿಕ್ ನಂತರದ ಬಾಲಕಿಯರ ಸರ್ಕಾರಿ ವಸತಿ ನಿಲಯ, ವಕೀಲರ ಸಂಘ, ಪ್ರವಾಸಿ ಮಂದಿರ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ ಎಂದು ಆಕ್ರೋಶ ಹೊರ ಹಾಕಿದರು.

click me!