ಚಿಕ್ಕಪೇಟೆಯಲ್ಲಿ ವ್ಯಾಪಾರ ವಹಿವಾಟು ಪುನರಾರಂಭ..!

By Kannadaprabha NewsFirst Published Jul 23, 2020, 7:31 AM IST
Highlights

ಕೆ.ಆರ್‌.ಮಾರುಕಟ್ಟೆಹಾಗೂ ಕಲಾಸಿಪಾಳ್ಯ ಮಾರುಕಟ್ಟೆಪ್ರದೇಶದಲ್ಲಿ ಸೀಲ್‌ಡೌನ್‌ ಮುಂದುವರೆದಿದ್ದರೂ ಚಿಕ್ಕಪೇಟೆಯ ಪ್ರಮುಖ ರಸ್ತೆಗಳಲ್ಲಿನ ವಾಣಿಜ್ಯ ವ್ಯಾಪಾರಕ್ಕೆ ಬಿಬಿಎಂಪಿ ಅನುಮತಿ ನೀಡಿದೆ.

ಬೆಂಗಳೂರು(ಜು.23): ಕೆ.ಆರ್‌.ಮಾರುಕಟ್ಟೆಹಾಗೂ ಕಲಾಸಿಪಾಳ್ಯ ಮಾರುಕಟ್ಟೆಪ್ರದೇಶದಲ್ಲಿ ಸೀಲ್‌ಡೌನ್‌ ಮುಂದುವರೆದಿದ್ದರೂ ಚಿಕ್ಕಪೇಟೆಯ ಪ್ರಮುಖ ರಸ್ತೆಗಳಲ್ಲಿನ ವಾಣಿಜ್ಯ ವ್ಯಾಪಾರಕ್ಕೆ ಬಿಬಿಎಂಪಿ ಅನುಮತಿ ನೀಡಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌, ಚಿಕ್ಕಪೇಟೆಯ ವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಲಾಕ್‌ಡೌನ್‌ ಮಾಡಿಕೊಂಡಿದ್ದರು.

ಬೆಂಗ್ಳೂರಿನ ಈ ಏರಿಯಾಗಳಲ್ಲಿ ಹೋಂ ಐಸೋಲೇಷನ್‌ ಅವಕಾಶವಿಲ್ಲ..!

ಇಲ್ಲಿ ವ್ಯಾಪಾರಕ್ಕೆ ಮತ್ತೆ ಅವಕಾಶ ಮಾಡಿಕೊಡಬೇಕು ತೀವ್ರ ಆರ್ಥಿಕ ಸಂಕಷ್ಟಎದುರಿಸುತ್ತಿದ್ದೇವೆ. ಜೀವನ ನಡೆಸುವುದು ಕಷ್ಟವಾಗುತ್ತಿದೆ ಎಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ, ಸೋಂಕು ಇರದ ಪ್ರದೇಶದಲ್ಲಿ ವ್ಯಾಪಾರ ನಡೆಸುವುದಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಆದರೆ, ಎಲ್ಲ ವಾಣಿಜ್ಯ ಮಳಿಗೆಗಳು ವ್ಯಾಪಾರ ಮಾಡುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಎಲ್ಲರೂ ಮಾಸ್ಕ್‌ ಧರಿಸುವಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇನ್ನೆರಡು ದಿನಗಳಲ್ಲಿ ಯಾವ ರಸ್ತೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಸಂಪೂರ್ಣ ವಿವರ ನೀಡಲಾಗುವುದು ಎಂದು ವಿವರಿಸಿದರು.

click me!