ಏಪ್ರಿಲ್ 4 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ!

By Gowthami K  |  First Published Apr 2, 2023, 3:45 PM IST

ಏಪ್ರಿಲ್ 4ರ ಮಂಗಳವಾರದಂದು   ಮಹಾವೀರ ಜಯಂತಿ ಹಬ್ಬವಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.


ಬೆಂಗಳೂರು (ಏ.2): ಮಹಾವೀರ ಜಯಂತಿ ಹಬ್ಬದ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಏಪ್ರಿಲ್ 4ರ ಮಂಗಳವಾರದಂದು   ಮಹಾವೀರ ಜಯಂತಿ ಹಬ್ಬವಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರಿಂದ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಕೂಡ ಮಾಂಸದಂಗಡಿ ಬಂದ್:
ಮಹಾವೀರ ಜಯಂತಿ ಹಿನ್ನೆಲೆ ಏ. 4ರಂದು ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್‌ ಮಾಡಲು ಸೂಚಿಸಲಾಗಿದೆ. ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್‌ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Videos

undefined

ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಸಹಾಯವಾಣಿ ತೆರೆದಿರುವ ಬಗ್ಗೆ:
ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಅದರಂತೆ ದಿನಾಂಕ:29-03-2023ರಿಂದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. 172-ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಂದಾಯಾಧಿಕಾರಿಗಳ ಕಛೇರಿ, ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ರವರ ಕಛೇರಿಯಲ್ಲಿ ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಕಂಟ್ರೋಲ್ ರೂಂ ನ್ನು ಸ್ಥಾಪಿಸಲಾಗಿರುತ್ತದೆ. ಸದರಿ ಕಂಟ್ರೋಲ್ ದಿನದ 24 ಗಂಟೆಯೂ ಸೇವೆಯಲ್ಲಿದ್ದು, ಇದರ ದೂರವಾಣಿ ಸಂಖ್ಯೆ: 080-25525952 ಆಗಿರುತ್ತದೆ. ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳನ್ನು ಈ ಮೇಲ್ಕಂಡ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದಾಖಲಿಸಬಹುದಾಗಿರುತ್ತದೆ ಎಂದು ಚುನಾವಣಾಧಿಕಾರಿಯಾದ ಇಸ್ಲಾವುದ್ದೀನ್ ಜೆ. ಗದ್ಯಾಳ್ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಚುನಾವಣೆ ಜಯಿಸಲು ಹನುಮಮಾಲೆ ಧರಿಸಿದ ಕೈ ಕಾರ್ಯಕರ್ತರು!

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸಹಾಯವಾಣಿ ತೆರೆದಿರುವ ಬಗ್ಗೆ:
ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಬಂಧ ದಿನಾಂಕ 29.03.2023 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಸಂಬಂಧ 154-ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಂತ ವ್ಯವಸ್ಥಿತ ಪಾರದರ್ಶಕ, ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆಯನ್ನು ನಡೆಸುವ ಸಂಬಂಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಚುನಾವಣಾಧಿಕಾರಿಗಳ ಕಛೇರಿ, 154-ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ, ವಲಯ ಆಯುಕ್ತರು ರವರ ಕಛೇರಿ, ಮೊದಲನೇ ಮಹಡಿ, ಐಡಿಯಲ್ ಹೋಮ್ಸ್ 18ನೇ ಕ್ರಾಸ್, ರಾಜರಾಜೇಶ್ವರಿ ನಗರ ವಲಯ, ಬೆಂಗಳೂರು-98 ಇಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿರುತ್ತದೆ.

ವಿಧಾನಸಭಾ ಚುನಾವಣೆ ಹಿನ್ನೆಲೆ ಸ್ಫೋಟಕ ಭವಿಷ್ಯ ನುಡಿದ ಖ್ಯಾತ ಜೋತಿಷಿ!

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತಿಯನ್ನು ಉಲ್ಲಂಘಿಸುವಂತಹ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ: 080-28604331, 080-28604652 080- 28600954 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿರುತ್ತದೆ. ಮತ್ತು cVIGIL ಮೊಬೈಲ್ ಆಪ್ ಮೂಲಕವು ದೂರನ್ನು ದಾಖಲಿಸಬಹುದಾಗಿರುತ್ತದೆ ಎಂದು ಚುನಾವಣಾಧಿಕಾರಿಯಾದ ಮಂಜುನಾಥ್ ದೊಮ್ರಾ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

click me!