Covid Crisis in Bengaluru : 12 ಸಾವಿರ ಬೆಡ್‌ ಸಿದ್ಧ ಪಡಿಸಿಕೊಳ್ಳಲು ಸೂಚನೆ

Kannadaprabha News   | Asianet News
Published : Jan 07, 2022, 08:31 AM IST
Covid Crisis in Bengaluru : 12 ಸಾವಿರ ಬೆಡ್‌ ಸಿದ್ಧ ಪಡಿಸಿಕೊಳ್ಳಲು ಸೂಚನೆ

ಸಾರಾಂಶ

 12 ಸಾವಿರ ಬೆಡ್‌ ಸಿದ್ಧ ಪಡಿಸಿಕೊಳ್ಳಲು ಸೂಚನೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ.30ರಷ್ಟುಬೆಡ್‌ ಕೋವಿಡ್‌ ಚಿಕಿತ್ಸೆಗೆ ಮೀಸಲಿಡುವಂತೆ ಕ್ರಮವಹಿಸಿ: ಗುಪ್ತಾ  

ಬೆಂಗಳೂರು (ಜ.07):  ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್‌ (Covid 19) ಸೋಂಕಿತ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ (Private Hospital) ಸೋಂಕಿತರ ಚಿಕಿತ್ಸೆಗಾಗಿ ಶೇ.30ರಷ್ಟು ಹಾಸಿಗೆಗಳನ್ನು ಮೀಸಲಿಡಲು ಅಗತ್ಯ ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಗುರುವಾರ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಕೋವಿಡ್‌ (Covid) ಆಸ್ಪತ್ರೆ ಹಾಸಿಗೆ ನಿರ್ವಹಣಾ ವ್ಯವಸ್ಥೆಗೆ (ಸಿಎಚ್‌ಬಿಎಂಎಸ್‌) ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ನಗರದಲ್ಲಿ ಕೊರೋನಾ (Corona)  ಪ್ರಕರಣಗಳ ಸಂಖ್ಯೆ ತೀವ್ರ ಹೆಚ್ಚಳವಾಗಬಹುದು. ಸರ್ಕಾರದ ಆದೇಶದನ್ವಯ ಖಾಸಗಿ ಆಸ್ಪತ್ರೆಗಳಲ್ಲಿ (Private Hospital)  ಸೂಕ್ತ ರೀತಿಯಲ್ಲಿ ಹಾಸಿಗೆ ವ್ಯವಸ್ಥೆ ಮಾಡಿಕೊಂಡಿ ಪರಿಸ್ಥಿತಿಯನ್ನು ನಿಭಾಯಿಸಲು ಮುಂದಾಗಬೇಕು. ಸರ್ಕಾರದ ಆದೇಶದಂತೆ ಬಿಬಿಎಂಪಿ (BBMP) ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಲ್ಲಿ ಜ.16ರೊಳಗೆ 10ರಿಂದ 12 ಸಾವಿರ ಹಾಸಿಗೆಗಳು ಲಭ್ಯವಿರಬೇಕು. ಈ ಸಂಬಂಧ ನೋಡಲ… ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೋವಿಡ್‌ ಸೋಂಕಿತರ ಚಿಕಿತ್ಸೆಗಾಗಿ ಶೇ.30ರಷ್ಟುಹಾಸಿಗೆಗಳನ್ನು ಮೀಸಲಿಡಲು ಆಸ್ಪತ್ರೆಗಳಿಗೆ ಸೂಚನೆ ನೀಡಬೇಕು. 100ಕ್ಕೂ ಹೆಚ್ಚು ಹಾಸಿಗೆಗಳಿರುವ ಆಸ್ಪತ್ರೆಗಳಲ್ಲಿ ಕೂಡಲೆ ಹೆಲ್ಪ್‌ಡೆಸ್ಕ್‌ಗಳನ್ನು ಪ್ರಾರಂಭಿಸಬೇಕು ಎಂದು ತಿಳಿಸಿದರು.

ನಿತ್ಯ 60 ಸಾವಿರ ಕೋವಿಡ್‌ (Covid) ಪರೀಕ್ಷೆ ನಡೆಯುತ್ತಿದ್ದು, ಆಸ್ಪತ್ರೆಗಳಿಗೆ ದಾಖಲಾಗುವ ಪ್ರಮಾಣ ಪ್ರತಿನಿತ್ಯ 20 ರಿಂದ 60ಕ್ಕೆ ಏರಿಕೆಯಾಗಿದೆ. ಆದರೆ ಸೋಂಕಿತರು ಯಾವುದೇ ಭಯಪಡುವ ಅವಶ್ಯಕತೆಯಿಲ್ಲ. ಪಾಲಿಕೆಯ ಟೆಲಿ ಟ್ರಯಾಜಿಂಗ್‌ ತಂಡ ಹಾಗೂ ಆಯಾ ವಾರ್ಡ್‌ ವ್ಯಾಪ್ತಿಯಲ್ಲಿರುವ ಮೊಬೈಲ… ಟ್ರಯಾಜಿಂಗ್‌ ತಂಡ ಸೋಂಕಿತ ವ್ಯಕ್ತಿಯ ಆರೋಗ್ಯ ಪರಿಸ್ಥಿತಿ ಅವಲೋಕಿಸಲಿದ್ದು, ಆಸ್ಪತ್ರೆಯ ಅವಶ್ಯಕತೆ ಇರುವವರಿಗೆ ಮಾತ್ರ ದಾಖಲಿಸಿ, ಉಳಿದವರಿಗೆ ಮನೆಯಲ್ಲೇ ಪ್ರತ್ಯೇಕವಾಗಿರುವ ಮೂಲಕ ಚಿಕಿತ್ಸೆ (Treatment) ಪಡೆಯಲು ತಿಳಿಸಬೇಕು ಎಂದು ಸೂಚಿಸಿದರು.

ಹೆಚ್ಚಿನ ಕೋವಿಡ್‌ (Covid) ಪ್ರಕರಣಗಳಲ್ಲಿ ಗುಣಲಕ್ಷಣಗಳು ಇರುವುದಿಲ್ಲ. ಮನೆಯಲ್ಲಿಯೇ ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಈ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು. ಆಸ್ಪತ್ರೆಗೆ ದಾಖಲಿಸುವಂತಹ ಪ್ರಕರಣಗಳನ್ನಷ್ಟೇ ಆಸ್ಪತ್ರೆಗೆ ರವಾನಿಸಬೇಕು. ಇದಕ್ಕಾಗಿ ಟ್ರಯಾಜಿಂಗ್‌ ಮಾಡಲು ಬೇಕಾದ ಹೆಚ್ಚುವರಿ ಸಿಬ್ಬಂದಿಯನ್ನು ವಲಯವಾರು ನಿಯೋಜನೆ ಮಾಡಿಕೊಳ್ಳಬೇಕು. ಜೊತೆಗೆ ವಲಯ ಸಂಯೋಜಕರು ಇದರ ಬಗ್ಗೆ ನಿಗಾ ಇಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾರದರ್ಶಕತೆ ಕಾಯ್ದುಕೊಳ್ಳಿ

ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್‌ ಚಿಕಿತ್ಸೆಗಾಗಿ ಸಿ.ವಿ.ರಾಮನ್‌ನಗರ ಜನರಲ್‌ ಆಸ್ಪತ್ರೆ, ಕೆ.ಸಿ.ಜನರಲ್‌ ಆಸ್ಪತ್ರೆ, ಜಯನಗರ ಆಸ್ಪತ್ರೆ ಹಾಗೂ ಬೌರಿಂಗ್‌ ಆಸ್ಪತ್ರೆಯನ್ನು ಮೀಸಲಿಡಲಾಗಿದ್ದು, ಖಾಸಗಿ ಆಸ್ಪತ್ರೆಗಳು ಸೇರಿದಂತೆ ಸಾಕಷ್ಟುಹಾಸಿಗೆಗಳ ಲಭ್ಯತೆ ಇದೆ. ಸೋಂಕಿತರು ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಾಗಿ ಅಲೆದಾಡುವುದು, ಆಕ್ಸಿಜನ್‌, ಐಸಿಯುಗಾಗಿ ಅಲೆಯಬಾರದು. ಯಾವುದೇ ರೀತಿಯ ಹಾಸಿಗೆ ಸಮಸ್ಯೆ ಉದ್ಭವವಾಗದಂತೆ ಹಾಸಿಗೆ ಹಂಚಿಕೆ ವ್ಯವಸ್ಥೆ ಪಾರದರ್ಶಕವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಗೌರವ್‌ ಗುಪ್ತಾ ಸೂಚಿಸಿದರು.

2 ವಾರ ವೀಕೆಂಡ್ ಕರ್ಫ್ಯೂ  : 

ರಾಜ್ಯದಲ್ಲಿ ಕೊರೋನಾ ವೈರಸ್(Coronavrius) ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಅಲ್ಲದೇ ಬೆಂಗಳೂರಲ್ಲಿ ಮಾತ್ರ ಶಾಲೆಗಳನ್ನ ಎರಡು ವಾರ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ.

ಇಂದು(ಮಂಗಳವಾರ) ತಜ್ಞರ ಜೊತೆಗಿನ ಸಭೆ ಬಳಿಕ ಸಚಿವರಾದ ಅಶೋಕ್, ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,  ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ (weekend Curfew)  ಇರಲಿದೆ ಎಂದು  ಸ್ಪಷ್ಟಪಡಿಸಿದರು. 

Corona Update ಕರ್ನಾಟಕದಲ್ಲಿ ಕೊರೋನಾ ಸ್ಫೋಟ, 24ಗಂಟೆಗಳಲ್ಲಿ ದ್ವಿಗುಣ

ಕರ್ನಾಟಕದಾದ್ಯಂತ ಎರಡು ವಾರ ವೀಕೆಂಡ್ ಜಾರಿಯಲ್ಲಿರಲಿದೆ. ಇನ್ನು ಬೆಂಗಳೂರಲ್ಲಿ ಮಾತ್ರ ಎರಡು ವಾರ ಶಾಲೆ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದರು. 

ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳು (ಜನವರಿ 6ರಿಂದ) 10 ಮತ್ತು 12ನೇ ತರಗತಿ ಹೊರತು ಪಡಿಸಿ ಉಳಿದ ಎಲ್ಲ ತರಗತಿಗಳನ್ನೂ ಬಂದ್ ಮಾಡಿ ಆನ್‌ಲೈನ್‌ ಮೂಲಕ ನಡೆಸಲು ನಿರ್ಧರಿಸಲಾಗಿದೆ.

ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್‌, ಡಾ.ಕೆ. ಸುಧಾಕರ್ ವಿವರಿಸಿದರು.

* ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. 
* ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

*  ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ. 
* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು. 
* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ. 

* ಯಾವುದೇ ರ‍್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.
* ಮೆಟ್ರೋ, ಬಸ್‍ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.

ನಾವು ತೆಗೆದುಕೊಂಡ ತೀರ್ಮಾನಗಳನ್ನು ವೈಜ್ಞಾನಿವಾಗಿ ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ, ಅಕ್ಕಪಕ್ಕದ ಮಹಾರಾಷ್ಟ್ರ, ಕೇರಳ, ತಮಿಳುನಾಡು ಗಳಲ್ಲಿ ತೆಗೆದುಕೊಂಡಿರುವ ತೀರ್ಮಾನಗಳನ್ನು ಪರಾಮರ್ಶಿಸಿದೆವು. ಒಮಿಕ್ರಾನ್ ಸೋಂಕು ಕೊವಿಡ್​ಗಿಂತ 5 ಪಟ್ಟು ಜಾಸ್ತಿ ಆಗ್ತಿದೆ ಅಂತ ತಜ್ಞರು ವರದಿ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಪಸ್ತುತ 3048 ಮಂದಿಗೆ ಸೋಂಕು ಬಂದಿದೆ. 147 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ನಮ್ಮ ರಾಜ್ಯದಲ್ಲಿ ಪಾಸಿಟಿವ್ ಪ್ರಕರಣ ಶೇ 3ಕ್ಕಿಂತ ಹೆಚ್ಚಾಗುತ್ತಿದೆ. 20ರಿಂದ 50 ವರ್ಷದವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ತಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

PREV
Read more Articles on
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು